ವಿಜಯಪುರ | ಮತದಾರರ ಪಟ್ಟಿಯಲ್ಲಿ ಅಕ್ರಮ ಸೇರ್ಪಡೆ: ಚುನಾವಣಾ ಆಯೋಗಕ್ಕೆ ಮುಶ್ರೀಫ್ ದೂರು

Date:

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಸಂದರ್ಭದಲ್ಲಿ ಇತರ ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಅಕ್ರಮವಾಗಿ 30-ಬಿಜಾಪುರ ನಗರ ಕ್ಷೇತ್ರದ ಮತದಾರರನ್ನಾಗಿ ಉಳಿಸಿಕೊಳ್ಳಲು ಹಾಗೂ ಸೇರ್ಪಡೆಗೊಳಿಸಲು ಬಹಿರಂಗವಾಗಿ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಪಕ್ಷದ 2023ರ 30-ಬಿಜಾಪುರ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್,ಭಾರತ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದರು.

- Advertisement -

ಮುಖ್ಯ ಚುನಾವಣಾ ಆಯುಕ್ತರು, ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ, ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಹೇಳಿಕೆಗಳು ವ್ಯಾಪಕವಾಗಿ ಹರಿದಾಡುತ್ತಿವೆ ಎಂದು ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ ಅವರು, ಪ್ರಸ್ತುತ 31-ನಾಗಠಾಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದರೂ, ಹಿಂದೆ ವಿಜಯಪುರ ನಗರದಲ್ಲಿದ್ದ ಹಳೆಯ ವಿಳಾಸವನ್ನು ಎಸ್‌ಐಆರ್ ಅರ್ಜಿಯಲ್ಲಿ ನಮೂದಿಸಿ 30-ಬಿಜಾಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರಾಗಿ ಮುಂದುವರಿಯುವಂತೆ ಸಾರ್ವಜನಿಕರಿಗೆ ಕರೆ ನೀಡಿರುವ ಫೇಸ್ಬುಕ್ ಪೋಸ್ಟ್ ಮತ್ತು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ” ಎಂದು ಮುಶ್ರೀಫ್ ಆರೋಪಿಸಿದರು.

ಇಂತಹ ಹೇಳಿಕೆಗಳು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಮತದಾರರ ಪಟ್ಟಿಯ ಪರಿಶುದ್ಧತೆಗೆ ಧಕ್ಕೆ ತರುತ್ತವೆ. ಮತದಾರರ ಹೆಸರುಗಳು ಅವರ ಪ್ರಸ್ತುತ ವಾಸಸ್ಥಳ, ಕಾನೂನುಬದ್ಧ ಅರ್ಹತೆ ಹಾಗೂ ಚುನಾವಣಾ ಆಯೋಗದ ನಿಯಮಾವಳಿಗಳ ಆಧಾರದ ಮೇಲೆಯೇ ಮತದಾರರ ಪಟ್ಟಿಯಲ್ಲಿ ಇರಬೇಕು. ತಪ್ಪು ಮಾಹಿತಿ ಅಥವಾ ಪ್ರಚೋದನೆಯ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಅಥವಾ ಸೇರಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದರು.

ಕಳೆದ ಒಂದು ವರ್ಷದ ಅವಧಿಯಲ್ಲಿ 30-ಬಿಜಾಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಇತರ 223 ವಿಧಾನಸಭಾ ಕ್ಷೇತ್ರಗಳಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. ಇವರಲ್ಲಿ ಅನೇಕರು ಇತರ ವಿಧಾನಸಭಾ ಕ್ಷೇತ್ರಗಳಿಗೆ ಸೇರಿದವರಾಗಿದ್ದು, ಅಗತ್ಯ ವಾಸಸ್ಥಳದ ದಾಖಲೆಗಳಿಲ್ಲದೆ ಮತದಾರರ ಪಟ್ಟಿಗೆ ಸೇರಿದ್ದಾರೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆಯೂ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸೇರಿದ ಸುಮಾರು 30 ರಿಂದ 50 ವರ್ಷ ವಯೋಮಾನದ ಅನೇಕ ಏಕೈಕ (Single) ಮತದಾರರು 30-ಬಿಜಾಪುರ ನಗರ ಮತದಾರರ ಪಟ್ಟಿಗೆ ಸೇರ್ಪಡೆಯಾಗಿರುವ ಕುರಿತು ಈ ಹಿಂದೆಯೇ ಚುನಾವಣಾ ಆಯೋಗಕ್ಕೆ ಹಲವು ಬಾರಿ ದೂರು ಸಲ್ಲಿಸಲಾಗಿದ್ದು, ಸಾರ್ವಜನಿಕ ವಲಯದಲ್ಲಿಯೂ ಆಕ್ಷೇಪಗಳು ವ್ಯಕ್ತವಾಗಿದ್ದವು ಎಂದು ಮುಶ್ರೀಫ್ ಹೇಳಿದರು.

“ಎಸ್‌ಐಆರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಸೇರ್ಪಡೆಯಾಗಿರುವ ಎಲ್ಲಾ ಹೊಸ ಮತದಾರರ ವಾಸಸ್ಥಳ, ದಾಖಲೆಗಳು ಹಾಗೂ ಕಾನೂನುಬದ್ಧ ಅರ್ಹತೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ವಾಸ್ತವವಾಗಿ ಇತರ ವಿಧಾನಸಭಾ ಕ್ಷೇತ್ರಗಳಿಗೆ ಸೇರಿದವರು ಅಥವಾ ಅಗತ್ಯ ದಾಖಲೆಗಳಿಲ್ಲದೆ ಸೇರ್ಪಡೆಯಾಗಿರುವುದು ದೃಢಪಟ್ಟಲ್ಲಿ ಅಂತಹ ಹೆಸರುಗಳನ್ನು ಚುನಾವಣಾ ಆಯೋಗದ ನಿಯಮಾನುಸಾರ ಮತದಾರರ ಪಟ್ಟಿಯಿಂದ ತೆಗೆದುಹಾಕಬೇಕು” ಎಂದು ರಫೀಕ್ ಟಪಾಲ್ ಆಗ್ರಹಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುವ ಹೇಳಿಕೆಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, 31-ನಾಗಠಾಣ ಸೇರಿದಂತೆ ಇತರ ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಅಕ್ರಮವಾಗಿ 30-ಬಿಜಾಪುರ ನಗರ ಮತದಾರರನ್ನಾಗಿ ಉಳಿಸಿಕೊಳ್ಳುವ ಅಥವಾ ಸೇರ್ಪಡೆಗೊಳಿಸುವ ಯಾವುದೇ ಕಾನೂನುಬಾಹಿರ ಪ್ರಯತ್ನವನ್ನು ತಕ್ಷಣ ತಡೆದು, ತಪ್ಪಿತಸ್ಥರ ವಿರುದ್ಧ ಚುನಾವಣಾ ಕಾನೂನುಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಶಕೀಲ್ ಬಾಗ್ಮರೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ರಫಿಕ ಟಪಾಲ್, ಬಂದೆನವಾಜ ಬಿಳಗಿ, ವಸಂತ ಹೊನಮೊಡೆ, ಚಾಂದಸಾಬ ಗಡಾಗಲಾವ್, ಶಕೀಲ್ ಬಾಗಮಾರೆ, ಅಬ್ದುಲ್ ಪಿರಾಂ ಜಮಖಂಡಿ, ಗಂಗೂಬಾಯಿ ದುಮಾಳೆ, ಪರಶುರಾಮ ಹೊಸಮನಿ, ಮುನ್ನ ಬಕ್ಷಿ, ವೀರೇಶ್ ಕಲಾಲ್, ಶಫೀಕ್ ಮನಗೂಳಿ, ಜಾಫರ್ ಸುತಾರ, ಅವಿನಾಶ್ ಹೆರಲಗಿ, ಇರಫಾನ್ ಶೇಖ್ ಸೇರಿದಂತೆ ಹಲವಾರು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...