ವಿಜಯಪುರ | ಪತ್ರಕರ್ತರು ಸಮಾಜದ ಸವಾಲು ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ರಫಿ ಭಂಡಾರಿ

Date:

ಸಮಾಜದಲ್ಲಿರುವ ವಿವಿಧ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಎಂದು ವಿಜಯಪುರದ ಹಿರಿಯ ಪತ್ರಕರ್ತ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಫಿ ಭಂಡಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಹಿರಿಯ ಪತ್ರಕರ್ತ ರಫಿ ಭಂಡಾರಿ ದತ್ತಿ ನಿಧಿ ಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಪತ್ರಿಕೋದ್ಯಮವು ಕೇವಲ ಶೈಕ್ಷಣಿಕ ವಿಷಯವಲ್ಲ, ಜೀವನ ಮೌಲ್ಯಗಳನ್ನು ಕಲಿಸುವ ಕ್ಷೇತ್ರವೂ ಆಗಿದ್ದು, ವಿದ್ಯಾರ್ಥಿನಿಯರು ಈ ದತ್ತಿ ನಿಧಿಯ ಸದುಪಯೋಗ ಪಡೆದುಕೊಳ್ಳಬೇಕು. ಒಳ್ಳೆಯ ಪತ್ರಕರ್ತರಾಗಿ ಸೇವೆ ಮಾಡಲು ಬಯಸಿದ ನಿಮ್ಮ ಭವಿಷ್ಯ ಉಜ್ವಲವಾಗಲಿ. ಮಾಧ್ಯಮದಲ್ಲಿ ಅವಕಾಶಗಳು ವಿಪುಲವಾಗಿತುತ್ತದೆ. ಜತೆಗೆ ಅದನ್ನು ದೈರ್ಯದಿಂದ ನಿಭಾಯಿಸಬೇಕು. ಸಮಾಜದಲ್ಲಿ ಹಲವಾರು ಸಮಸ್ಯೆಗಳು ಇದ್ದು ಅದನ್ನು ನಿಭಾಯಿಸುವ ಶಕ್ತಿ ನಿಮ್ಮಲ್ಲಿರಬೇಕು” ಎಂದರು.

ಪತ್ರಕರ್ತ ಬಸವರಾಜ ಸಂಪಳ್ಳಿ ಮಾತನಾಡಿ, “ವ್ಯಕ್ತಿಯ ಕೆಲಸವೇ ಅವನಿಗೆ ಗೌರವ ಮತ್ತು ಸ್ಥಾನಮಾನ ತಂದುಕೊಡುತ್ತದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗಿಂತ ಕೌಶಲ್ಯಗಳಿಗೆ ಹೆಚ್ಚಿನ ಮಹತ್ವವಿದ್ದು, ಬರವಣಿಗೆ, ಸಂವಹನ ಹಾಗೂ ವೃತ್ತಿಪರ ನೈಪುಣ್ಯವೇ ಯಶಸ್ಸಿನ ಮೆಟ್ಟಿಲಾಗುತ್ತದೆ. ಪತ್ರಿಕೋದ್ಯಮದಲ್ಲಿ ಸಾಕಷ್ಟು ಅವಕಾಶಗಳಿದ್ದು, ಉತ್ತಮ ಬರಹದ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯವಿದೆ. ವಿದ್ಯಾರ್ಥಿನಿಯರು ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, “ಕೃತಕ ಬುದ್ಧಿಮತ್ತೆ(ಎಐ) ಯುಗದಲ್ಲಿ ಅವಕಾಶಗಳು ಕಡಿಮೆಯಾಗುತ್ತವೆ ಎಂಬ ಭಯವನ್ನು ವಿದ್ಯಾರ್ಥಿನಿಯರು ತೊರೆದುಬಿಡಬೇಕು. ತಂತ್ರಜ್ಞಾನದೊಂದಿಗೆ ತಮ್ಮ ಕೌಶಲ್ಯಗಳನ್ನು ಸಮನ್ವಯಗೊಳಿಸಿಕೊಂಡಾಗ ಹೊಸ ಅವಕಾಶಗಳ ಬಾಗಿಲುಗಳು ತೆರೆದುಕೊಳ್ಳುತ್ತವೆ. ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಪ್ರಾಮಾಣಿಕತೆ, ನೈತಿಕತೆ ಮತ್ತು ವೃತ್ತಿಪರ ಬದ್ಧತೆ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಪತ್ರಕರ್ತನು ತನ್ನ ಆತ್ಮಸಾಕ್ಷಿಗೆ ತಾನೇ ಉತ್ತರದಾಯಿಯಾಗಿರಬೇಕು” ಎಂದು ಸಲಹೆ ನೀಡಿದರು.

ಇದನ್ನೂ ಓದಿದ್ದೀರಾ? ಹಾವೇರಿ | ಮುಸ್ಲಿಮರಿಲ್ಲದ ಊರಲ್ಲಿ ಮೊಹರಂ ಆಚರಣೆ: ಸೌಹಾರ್ದತೆ ಮೆರೆದೆ ಸ್ಥಳೀಯ ಹಿಂದೂಗಳು

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಹಾಗೂ ಡಾ. ಸಂದೀಪ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...