ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

Date:

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ನವೆಂಬರ್ 14 ಮತ್ತು 15ರಂದು ಎರಡು ದಿನಗಳ ‘ಕಲಾ ಧಾರಾ-2’ ಸಂಗೀತ ಮತ್ತು ನೃತ್ಯೋತ್ಸವ ಆಯೋಜಿಸಲಾಗಿದೆ.

- Advertisement -

ನ.14ರಂದು ಸಂಜೆ 5ಕ್ಕೆ ಉತ್ಸವ ಉದ್ಘಾಟನೆಯಾಗಲಿದ್ದು, ಸಂಜೆ ಕರ್ನಾಟಕ ಶಾಸ್ತ್ರೀಯ ವಾದ್ಯಸಂಗೀತ ಹಾಗೂ ರಾತ್ರಿ ಡಾ. ಸಂಜಯ್ ಶಾಂತರಾಮ್ ಮತ್ತು ತಂಡದಿಂದ ‘ಶಿವತಾಂಡವ’ ಕೂಚಿಪುಡಿ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ನ.15ರಂದು ಬೆಳಗ್ಗೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಜಲತರಂಗ್ ಜುಗಲ್‌ಬಂದಿ ಹಾಗೂ ಪಂ. ಕಾಶಿನಾಥ ಭೋಸಲೆ ತಂಡದಿಂದ ಗಾಯನ ಕಾರ್ಯಕ್ರಮ ನಡೆಯಲಿದೆ. ಸಂಜೆ ‘ಸಂತವಾಣಿ’ ಭಕ್ತಿ ಸಂಗೀತ ಮತ್ತು ರಾತ್ರಿ ಗುರು ಸರಿತಾ ಮಿಶ್ರಾ ಹಾಗೂ ಆದ್ಯಾಶಾ ಫೌಂಡೇಶನ್ ಕಲಾವಿದರಿಂದ ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಲಿದೆ.

ಈ ವರ್ಷದ ಆರಂಭದಲ್ಲಿ ಗೋಳಗುಮ್ಮಟದಲ್ಲಿ ನಡೆದ ‘ಕಲಾ ಧಾರಾ’ ಮೊದಲ ಆವೃತ್ತಿಗೆ ಸುಮಾರು 4 ಸಾವಿರ ಕಲಾಭಿಮಾನಿಗಳು ಭಾಗವಹಿಸಿದ್ದರು. ಅದಕ್ಕೆ ದೊರೆತ ಉತ್ತಮ ಸ್ಪಂದನೆಯ ಹಿನ್ನೆಲೆಯಲ್ಲಿ ಎರಡನೇ ಆವೃತ್ತಿಯನ್ನು ಇಬ್ರಾಹಿಂ ರೋಜಾದಲ್ಲಿ ಆಯೋಜಿಸಲಾಗಿದೆ.ಎರಡು ದಿನಗಳ ಉತ್ಸವಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಮನವಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...