ಮಕ್ಕಳು ಮತ್ತು ಯುವಜನರಲ್ಲಿನ ಸುಪ್ತ ಕಲಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನವೆಂಬರ್ 17 ಮತ್ತು 18ರಂದು ವಿಜಯಪುರದಲ್ಲಿ ಕಲಾ ಪ್ರತಿಭೋತ್ಸವ ಆಯೋಜಿಸಲಾಗಿದೆ.
ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಈ ಪ್ರತಿಭೋತ್ಸವದಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ ವಿಭಾಗಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 13ರ ಸಂಜೆ 5.30ರೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಹನುಮಂತರಾಯ ರಂಗಮಂದಿರ, ಸ್ಟೇಷನ್ ರಸ್ತೆ, ವಿಜಯಪುರ ಇಲ್ಲಿಗೆ ಖುದ್ದಾಗಿ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಕಲಾಸಕ್ತ ಮಕ್ಕಳು ಹಾಗೂ ಯುವಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.




