ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

Date:

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ ವಿಜಯಪುರ ನಗರದ ಬಿ.ಎಂ ಪಾಟೀಲ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನ್‌ಕ್ಯುಬೇಶನ್ ಸೆಂಟರ್‌ನ ಕಾರ್ಯಚಟುವಟಿಕೆಗಳಿಗೆ ಕರ್ನಾಟಕ ಡಿಜಿಟಲ್ ಎಕನಾಮಿಕ್ ಮಿಶನ್ (ಕೆಡಿಇಎಂ) ಬೆಂಬಲವಾಗಿ ನಿಲ್ಲಲಿದೆ ಎಂದು ಮಿಶನ್‌ನ ಕಲ್ಯಾಣ ಕರ್ನಾಟಕ ಕ್ಲಸ್ಟರ್ ಹೆಡ್ ಸುಜಯ ಮುದಗಲ ಹೇಳಿದರು.

- Advertisement -

ವಿಜಯಪುರ ನಗರದಲ್ಲಿರುವ ಬಿ.ಎಂ ಪಾಟೀಲ್‌ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನ್‌ಕ್ಯುಬೇಶನ್ ಸೆಂಟರ್‌ಗೆ ರವಿವಾರ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳು, ನವೋದ್ಯಮಿಗಳು ಹಾಗೂ ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಈ ಸಂದರ್ಭದಲ್ಲಿ ರಾಜ್ಯದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನೀತಿಗಳು, ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ವಿಜಯಪುರ ಜಿಲ್ಲೆಯಲ್ಲಿ ನವೋದ್ಯಮ ಪರಿಸರವನ್ನು ಮತ್ತಷ್ಟು ಬಲಪಡಿಸಲು ಅಗತ್ಯವಿರುವ ಕ್ರಮಗಳ ಕುರಿತು ಸ್ಟಾರ್ಟ್‌ಅಪ್ ಸಂಸ್ಥಾಪಕರು ತಮ್ಮ ಅಭಿಪ್ರಾಯಗಳು ಹಾಗೂ ಅಗತ್ಯಗಳನ್ನು ಹಂಚಿಕೊಂಡರು.

ಮೂಲಸೌಕರ್ಯ, ಮಾರ್ಗದರ್ಶನ, ಹಣಕಾಸು ಮತ್ತು ಅನುದಾನ, ಮಾರುಕಟ್ಟೆ ಸಂಪರ್ಕ ಹಾಗೂ ಕೈಗಾರಿಕಾ ಸಹಭಾಗಿತ್ವ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು. ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಡುವೆ ಸಹಭಾಗಿತ್ವ ಹೆಚ್ಚಿಸುವ ಅಗತ್ಯಕ್ಕೂ ಒತ್ತು ನೀಡಲಾಯಿತು.

ವಿದ್ಯಾರ್ಥಿಗಳಲ್ಲಿ ನವೀನ ಆಲೋಚನೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ, ಸ್ಟಾರ್ಟ್‌ಅಪ್‌ಗಳು ಮತ್ತು ಕೈಗಾರಿಕೆಗಳಿಗೆ ಯುವ ಪ್ರತಿಭೆ, ಹೊಸ ಆಲೋಚನೆಗಳು ಹಾಗೂ ತಂತ್ರಜ್ಞಾನವನ್ನು ಸಂಪರ್ಕಿಸುವ ಮೂಲಕ ಜಿಲ್ಲೆಯ ನವೋದ್ಯಮ ಕ್ಷೇತ್ರಕ್ಕೆ ಮತ್ತಷ್ಟು ವೇಗ ನೀಡಬಹುದು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ನವೋದ್ಯಮಿಗಳಿಗೆ ನಿರಂತರ ವೇದಿಕೆ ಕಲ್ಪಿಸುವ ಉದ್ದೇಶದಿಂದ ಪ್ರತಿ ಶನಿವಾರ ಶ್ರೀ ಬಿ.ಎಂ. ಪಾಟೀಲ್ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನ್‌ಕ್ಯುಬೇಶನ್ ಸೆಂಟರ್‌ನಲ್ಲಿ ಸ್ಟಾರ್ಟ್‌ಅಪ್ ಮತ್ತು ನವೋದ್ಯಮ ಸಭೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ

ಈ ಸಭೆಗಳು ಸ್ಟಾರ್ಟ್‌ಅಪ್ ಸಂಸ್ಥಾಪಕರು, ವಿದ್ಯಾರ್ಥಿಗಳು, ನವೋದ್ಯಮಿಗಳು ಹಾಗೂ ಉದ್ಯಮಿಗಳು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು, ಪರಸ್ಪರ ಸಂಪರ್ಕ ಬೆಳೆಸಲು ಮತ್ತು ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸಲು ವೇದಿಕೆಯಾಗಲಿವೆ.

ಕೆಡಿಇಎಂ, ಬಿ.ಎಂ. ಪಾಟೀಲ ಫೌಂಡೇಶನ್, ಶೈಕ್ಷಣಿಕ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು ಹಾಗೂ ಕೈಗಾರಿಕೆಗಳ ನಡುವಿನ ನಿರಂತರ ಸಹಭಾಗಿತ್ವದ ಮೂಲಕ ವಿಜಯಪುರದಲ್ಲಿ ಬಲಿಷ್ಠ ನವೋದ್ಯಮ ಪರಿಸರ ನಿರ್ಮಿಸಲು ಉತ್ತೇಜನ ದೊರೆಯಲಿದೆ.

ಜಿಲ್ಲೆಯ ಯುವ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ರಾಜ್ಯ ಸರ್ಕಾರದ ವಿವಿಧ ಯೋಜನೆಗಳು, ಅನುದಾನ, ಮಾರ್ಗದರ್ಶನ ಮತ್ತು ಮಾರುಕಟ್ಟೆ ಅವಕಾಶಗಳೊಂದಿಗೆ ಸಂಪರ್ಕ ಸಾಧಿಸಲು ಈ ಸಹಭಾಗಿತ್ವದಿಂದ ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ವಿಜಯಪುರವನ್ನು ನವೋದ್ಯಮ ಮತ್ತು ಉದ್ಯಮಶೀಲತೆಯ ಪ್ರಮುಖ ಕೇಂದ್ರವಾಗಿ ಬೆಳೆಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಸೆಂಟರ್‌ನ ಪ್ರತಿನಿಧಿಗಳಾದ ಆಶೀಶ ಕುಲಕರ್ಣಿ, ಸಹನಾ ಬಿರಾದಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಲಿತರ ಯುವಕರ ಮೇಲೆ ಹಲ್ಲೆ, 8 ಜನರ ವಿರುದ್ಧ ಎಫ್‌ಐಆರ್

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಗಲಾಟೆಯಲ್ಲಿ ಮೇಲ್ಜಾತಿ ಯುವಕರು ದಲಿತರ ಸಮುದಾಯದವರ...

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...