ವಿಜಯಪುರ | ಕೆಂಪೇಗೌಡ ಜನಪರ ಆಡಳಿತಗಾರ: ತಹಶೀಲ್ದಾರ್ ಪ್ರಶಾಂತ ಚನ್ನಗೊಂಡ

Date:

ನಾಡಪ್ರಭು ಕೆಂಪೇಗೌಡ ದೂರದೃಷ್ಟಿಯ ಚಿಂತಕ, ಜನಪರ ನಾಯಕ ಹಾಗೂ ಸುಸಂಘಟಿತ ಬೆಂಗಳೂರು ಮಹಾನಗರ ನಿರ್ಮಾಣದ ಹರಿಕಾರ ಎಂದು ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನ್ನಗೊಂಡ ಹೇಳಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ನಾಡಪ್ರಭು ಕೆಂಪೇಗೌಡರ ಆಡಳಿತದಲ್ಲಿ ಜನಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಬೆಂಗಳೂರು ನಗರ ನಿರ್ಮಾಣ ಮತ್ತು ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಆಡಳಿತ ತತ್ವಗಳು ಇಂದಿಗೂ ಪ್ರಸ್ತುತ” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

“ಕೆಂಪೇಗೌಡರು ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಕಾಣುವ ಮೂಲಕ ಉತ್ತಮ ಆಡಳಿತ ನಡೆಸಿದ್ದರು. ಅವರ ಆದರ್ಶಗಳು, ಮೌಲ್ಯಗಳು ಮತ್ತು ಸೇವಾ ಮನೋಭಾವವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳುವ ಅಗತ್ಯವಿದೆ. ವಿಶೇಷವಾಗಿ ಯುವಜನತೆ ಅವರ ವ್ಯಕ್ತಿತ್ವ, ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದ ಚಿಂತನೆಗಳಿಂದ ಸ್ಫೂರ್ತಿ ಪಡೆಯಬೇಕು” ಎಂದು ಹೇಳಿದರು.

ಯುವಜನ ಸೇವೆ ಮತ್ತು ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಮಾತನಾಡಿ, “ಕೋಟೆ, ಕೆರೆ, ದೇವಾಲಯ, ಮಾರುಕಟ್ಟೆಗಳ ನಿರ್ಮಾಣದ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸುಸ್ಥಿರ ನಗರ ನಿರ್ಮಾಣದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದರು. ಉತ್ತಮ ಆಡಳಿತ, ಪರಿಸರ ಸಂರಕ್ಷಣೆ, ಜನಸೇವೆ ಹಾಗೂ ಅಭಿವೃದ್ಧಿಯ ಸಮನ್ವಯವನ್ನು ಸಾಧಿಸಿದ ಮಹಾನ್ ನಾಯಕನಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಆದರ್ಶಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿದ್ದು, ಪ್ರತಿಯೊಬ್ಬ ನಾಗರಿಕರು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

Advertisements

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎ ಉಪ್ಪಾರ, ಕೆ.ಎಮ್.ಎಫ್ ಅಧಿಕಾರಿ ಅರವಿಂದ ಎಸ್. ಕನ್ನೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಿದ್ಯಾವತಿ ಅಂಕಲಗಿ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ಬಸವರಾಜ ಶಿವಶರಣ, ಸಂಕೇತಗೌಡ ಕೌವಲಗಿ, ರವಿಗೌಡ, ಶರಣಗೌಡ, ಸಿದ್ದುಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...