ವಿಜಯಪುರ | ಕೃಷ್ಣಾ ನದಿ ಕುರಿತ ವಿವಾದ: ಬಿಳಿಮಲೆ ಕ್ಷಮೆಯಾಚನೆಗೆ ರೈತ ಸಂಘ ಆಗ್ರಹ

Date:

ಪುರುಷೋತ್ತಮ ಬಿಳಿಮಲೆ ಒಬ್ಬರು ಪ್ರಜ್ಞಾವಂತರು, ಮೇಲಾಗಿ ಜಾನಪದ ಸಂಶೋಧಕರು. ಹೀಗಿರುವಾಗ ಒಂದೇ ರಾಜ್ಯದಲ್ಲಿರುವ ತಾವು ಕೃಷ್ಣೆಯ ಕುರಿತು ಕೇವಲವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೃಷ್ಣಾ ನದಿಯ ಇತಿಹಾಸವನ್ನು ಸಂಪೂರ್ಣ ತಿಳಿದುಕೊಳ್ಳದೆ ಅಜ್ಞಾನಿಗಳಂತೆ ಹಗುರವಾಗಿ ಹೇಳಿಕೆ ನೀಡಿರುವುದು ಅವರ ಸ್ಥಾನಕ್ಕೆ ಶೋಭೆ ತರುವಂಥದ್ದಲ್ಲ. ತಾವು ಕೂಡಲೇ ತಪ್ಪು ಹೇಳಿಕೆ ಹಿಂಪಡೆದು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಹಾಗೂ ಸಂಘಟನಾ ಕಾರ್ಯದರ್ಶಿ ವಿಠ್ಠಲ್ ಬಿರಾದಾರ್ ಆಗ್ರಹಿಸಿದರು.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ರಾಜ್ಯಕ್ಕೆ ಶೇ.60ರಷ್ಟು ಜನರ ಜೀವ ರಕ್ಷಕವಾದ ಕೃಷ್ಣಾ ನದಿ ಇತಿಹಾಸ ಅರಿಯದೆ ಕೃಷ್ಣೆ ನಮ್ಮ ಅಸ್ಮಿತೆಯಲ್ಲ, ಕೇವಲ ಕಾವೇರಿ ಮಾತ್ರ ನಮ್ಮ ಅಸ್ಮಿತೆ ಎನ್ನುವ ಮೂಲಕ ಕನ್ನಡಿಗರ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಕೃಷ್ಣೆ ಮತ್ತು ಕಾವೇರಿ ಕರ್ನಾಟಕದ ಎರಡು ಕಣ್ಣುಗಳಿದ್ದಂತೆ ನಾವೆಲ್ಲರೂ ಕನ್ನಡಿಗರು. ಹೀಗಿರುವಾಗ ಸಮಾನತೆಯಿಂದ ನೋಡಬೇಕು. ಕಾವೇರಿಗಿಂತಲೂ ಮೂರು ಪಟ್ಟು ಆಲಮಟ್ಟಿ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹವಾಗುತ್ತದೆ. ದಕ್ಷಿಣ ಭಾರತದಲ್ಲಿ 2ನೇ ಅತಿ ದೊಡ್ಡ ಜಲಾಶಯ ಇದಾಗಿದೆ. ಇಂತಹ ಬೃಹತ್ ಜಲಾಶಯ ಹಾಗೂ ಕೃಷ್ಣೆಯ ಬಗ್ಗೆ ಮಾತನಾಡುವವರು, ಹಿಂದಿನ ಇತಿಹಾಸದ ಬಗ್ಗೆ ಸಂಪೂರ್ಣ ತಿಳಿದುಕೊಂಡು ಹೇಳಿಕೆ ನೀಡುವುದು ಸೂಕ್ತ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ಉಡುಪಿ ಜಿಲ್ಲೆಯಲ್ಲಿ ಶೇ.50ರಷ್ಟು ಮಳೆ ಕೊರತೆ: ಎಲ್ ನಿನೋ ಪರಿಣಾಮದ ಮುನ್ಸೂಚನೆಯೇ?

“ಕೃಷ್ಣಾ ನದಿ ಸುಮಾರು 1400 ಕಿಲೋಮೀಟರ್‌ವರೆಗೆ ಹರಿದು ಆಂಧ್ರದ ಕೃಷ್ಣಾ ಜಿಲ್ಲೆಯ ಹಂಸಲಾದೇವಿ ಬಳಿ ಬಂಗಾಳ ಕೊಲ್ಲಿಯನ್ನು ಸೇರುತ್ತದೆ. ಸಾಕಷ್ಟು ಕಪ್ಪು ಮಣ್ಣಿನಿಂದ ಕೂಡಿರುವ ಕೃಷ್ಣಾ ನದಿಯು ತನ್ನದೇ ಆದ ಇತಿಹಾಸ ಹೊಂದಿದೆ. ಉತ್ತರ ಕರ್ನಾಟಕದ ಜನ ಎಂದಿಗೂ ಕಾವೇರಿ ಬಗ್ಗೆ ಕಡೆಗಣಿಸಿದ ಉದಾಹರಣೆ ಇಲ್ಲ. ಕೃಷ್ಣೆಯ ಬಗ್ಗೆ ತಮಗೆ ಮಾಹಿತಿ ಕೊರತೆ ಇದ್ದರೆ ಈ ಭಾಗದಲ್ಲಿ ಸಾಕಷ್ಟು ನೀರಾವರಿ ತಜ್ಞರು, ಕೃಷ್ಣೆಯ ಕುರಿತು ಸಾಕಷ್ಟು ಅಧ್ಯಯನದ ಮಾಡಿದವರು ಇದ್ದಾರೆ. ಅಂಥವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವುದನ್ನು ಬಿಟ್ಟು, ಈ ರೀತಿ ಕೃಷ್ಣೆಯ ಬಗ್ಗೆ ಕೀಳರಿಮೆ ತೋರಿಸುವುದು ಕಾವೇರಿ ಬಗ್ಗೆ ಎತ್ತಿ ಹಿಡಿಯುವುದು ಮಾತನಾಡುವುದು ತಮ್ಮ ಸ್ಥಾನಕ್ಕೆ ನೀಡಿರುವ ಹೇಳಿಕೆ ಯೋಗ್ಯವಲ್ಲ ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ರಾಜ್ಯದ ಜನರಿಗೆ ಕ್ಷಮೆ ಕೋರಬೇಕೆಂದು ಅರವಿಂದ್ ಕುಲಕರ್ಣಿ ಹಾಗೂ ವಿಠ್ಠಲ್ ಬಿರಾದಾರ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...