ವಿಜಯಪುರ | ದಿ. ಬಲರಾಮ ಬಾಗಲಕೋಟ ಅವರ ಅಂಗಾಂಗ ದಾನ: ಕುಟುಂಬಸ್ಥರಿಗೆ ಉದ್ಯೋಗದ ಭರವಸೆ

Date:

ಅಂಗಾಂಗ ದಾನ ಮಾಡಿದ ದಿ. ಬಲರಾಮ ಬಾಗಲಕೋಟ ಅವರ ಕುಟುಂಬದ ಒಬ್ಬರಿಗೆ ಶಿಕ್ಷಣ ಅಥವಾ ಉದ್ಯೋಗ ನೀಡಲು ಬಿಎಲ್‌ಡಿಈ ಸಂಸ್ಥೆ ನಿರ್ಧರಿಸಿದೆ. ಅಲ್ಲದೆ, ಅವರ ಕುಟುಂಬಕ್ಕೆ ನಮ್ಮ ಆಸ್ಪತ್ರೆಯಿಂದ ಎಲ್ ಕಾರ್ಡ್(ಜೀವನಪರ್ಯಂತ ಉಚಿತ/ರಿಯಾಯಿತಿ ಚಿಕಿತ್ಸಾ ಸೌಲಭ್ಯದ ಕಾರ್ಡ್) ಒದಗಿಸಲಾಗುವುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಿಎಲ್‌ಡಿಇ ಅಧ್ಯಕ್ಷ ಎಂ ಬಿ ಪಾಟೀಲ ಹೇಳಿದರು.

- Advertisement -

ವಿಜಯಪುರ ನಗರದ ಬಿಎಲ್‌ಡಿಇ ಟೀಮ್ಡ್ ವಿವಿಯಲ್ಲಿ ಅಂಗಾಂಗ ದಾನಿ ಬಲರಾಮ ಕೃಷ್ಣ ಬಾಗಲಕೋಟೆ ಅವರ ಕುಟುಂಬಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಯುವಕ ದಿ. ಬಲರಾಮ ಮತ್ತು ಅವರ ಕುಟುಂಬದವರ ತ್ಯಾಗ ಸ್ಮರಣೀಯ. ಬಲರಾಮ ಅವರು ಸಾವಿನಲ್ಲೂ ಬೇರೆಯವರ ಬದುಕಿಗೆ ಆಸರೆಯಾಗಿದ್ದಾರೆ. ಅವರಿಂದಲೇ ಬಸವ ನಾಡಿನಲ್ಲಿ ಅಂಗಾಂಗ ದಾನದ ಅಭಿಯಾನ ಆರಂಭವಾಗಿದೆ. ‘ಮಿಷನ್ ಬಲರಾಮ ಎನ್ನುವ ಈ ಅಭಿಯಾನದ ನೇತೃತ್ವವನ್ನು ಬಿಎಲ್‌ಡಿಇ ಸಂಸ್ಥೆ ವಹಿಸಲಿದೆ. ನಾನೇ ಪ್ರಥಮವಾಗಿ ಅಂಗಾಂಗ ದಾನದ ವಾಗ್ದಾನ ಮಾಡುತ್ತಿದ್ದೇನೆ” ಎಂದು ತಿಳಿಸಿದರು.

“ಬಲರಾಮನ ಕುಟುಂಬ ಅತ್ಯಂತ ನೋವಿನಲ್ಲೂ ಸಂಯಮ ಕಳೆದುಕೊಳ್ಳದೆ ಆತನ ಅಂಗಾಂಗ ದಾನ ಮಾಡಲು ಸಹಮತಿ ನೀಡಿದ್ದು ಸಮಾಜಕ್ಕೆ ಪ್ರೇರಣೆಯಾಗಿದೆ. ಸಾವಿನ ನಂತರವೂ ಅಂಗಾಂಗ ದಾನ ಮಾಡಿ ಹಲವರ ಬದುಕಿಗೆ ಬೆಳಕಾಗಬಹುದು ಎಂಬ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಇದೊಂದು ಮಾನವೀಯತೆಗೆ ದೊಡ್ಡ ಸಂದೇಶವಾಗಿದೆ. ಹೀಗಾಗಿ ಬಲರಾಮ ಅಮರರಾಗಿದ್ದಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ

ಡಾ.ಅರುಣ ಮಾತನಾಡಿ, “ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ದೇಹದಿಂದ ಹೃದಯ, ಶ್ವಾಶಕೋಶ, ಲಿವರ್, ಕಿಡ್ನಿ, ಪ್ಯಾಂಕ್ರಿಯಾಸಿಸ್, ಕಣ್ಣು ಗುಡ್ಡೆಗಳು, ಚರ್ಮ, ಎಲುಬು, ಹೃದಯದ ವಾಲ್ವಾ, ರಕ್ತನಾಳಗಳು, ಕೋಶಗಳ(ಟಿಶ್ಯೂ)ಗಳನ್ನು ದಾನ ಮಾಡಬಹುದು. ಅಂಗಾಂಗ ದಾನ ಜನಂದೋಲನದ ರೂಪ ಪಡೆಯಬೇಕಿದೆ. ಇದರಿಂದ ಅಂಗಾಗಗಳನ್ನು ನೀಡಿದ ನಂತರ ಇತರರಿಗೆ ನೆರವಾಗಬಹುದು” ಎಂದರು.

ಬಿಎಲ್‌ಡಿಇ ವಿವಿ ಕುಲಪತಿ ಡಾ. ಜಯರಾಜ, ಡಾ. ವಿಜಯಕುಮಾರ ಕಲ್ಯಾಣಪ್ಪ ಗೋಳ, ಡಾ.ಎಸ್ ಬಿ ಪಾಟೀಲ, ಡಾ.ತೇಜಸ್ವಿನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...