ವಿಜಯಪುರ | ವಿಶೇಷಚೇತನರಿಗೆ ಲಿಫ್ಟ್ ಆಪರೇಟರ್ ಹುದ್ದೆ ಮೀಸಲು: ಸುನೀಲಗೌಡ ಪ್ರಸ್ತಾವಕ್ಕೆ ಬೆಂಬಲ

Date:

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ವಿಶೇಷಚೇತನರನ್ನು ನೇಮಿಸಬೇಕು ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.

- Advertisement -

ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, “ಮುಂಬರುವ ವಿಧಾನ ಪರಿಷತ ಅಧಿವೇಶನದಲ್ಲಿಯೂ ಈ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳು, ಆಸ್ಪತ್ರೆಗಳು, ಮಾಲ್ ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಲಿಫ್ಟ್ ಬಳಸಲಾಗುತ್ತದೆ. ಈ ಲಿಪ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ವಿಶೇಷಚೇತನರನ್ನೇ ನೇಮಕಾತಿ ಮಾಡಬೇಕು. ಇದರಿಂದ ಅವರಿಗೆ ಉದ್ಯೋಗ ಸಿಕ್ಕಂತಾಗುತ್ತದೆ. ಅಲ್ಲದೇ, ಅವರಿಗೆ ಕೆಲಸ ಭಾರ ಎನಿಸುವುದಿಲ್ಲ. ಅವರು ಸ್ವಾಭಿಮಾನದಿಂದ ಬದುಕಲು ಇದರಿಂದ ಅವಕಾಶ ನೀಡಿದಂತಾಗುತ್ತದೆ” ಎಂದು ಅವರು ಹೇಳಿದರು.

“ಬೆಂಗಳೂರು ಸೇರಿದಂತೆ ನಾನಾ ಮಹಾನಗರಗಳಲ್ಲಿ ವಿಶೇಷಚೇತನರು ಲಿಫ್ಟ್ ಆಪರೇಟ್ ಮಾಡುವುದನ್ನು ಸ್ವತಃ ನೋಡಿದ್ದೇವೆ. ಅಷ್ಟೇ ಅಲ್ಲ, ಅವರು ಲಿಫ್ಟ್‌ಗಳನ್ನು ಸ್ವಚ್ಛವಾಗಿಟ್ಟಿರುತ್ತಾರೆ. ಜೊತೆಗೆ ಎಲ್ಲರೊಂದಿಗೂ ಸಮಾಧಾನದಿಂದ ನಡೆದುಕೊಳ್ಳುತ್ತಾರೆ. ವಿಜಯಪುರ ಜಿಲ್ಲೆಯಿಂದಲೇ ಪ್ರಾರಂಭವಾಗುವ ಈ ಸಮಾಜಮುಖಿ ಕೆಲಸ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲೂ ವಿಸ್ತರಣೆಯಾಗುವ ವಿಶ್ವಾಸವಿದೆ” ಎಂದು ಶಾಸಕ ಸುನೀಲಗೌಡ ಪಾಟೀಲ ಹೇಳಿದರು.

ಈ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ, ವಿಠ್ಠಲ ಧೋಂಡಿಬಾ ಕಟಕದೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.‌ ಗಂಗಾಧರ ಸಂಬಣ್ಣಿ, ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ನಾನಾ ಇಲಾಖೆಗಳ‌ ಅಧಿಕಾರಿಗಳು‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...