ವಿಜಯಪುರ | ಬ್ಯಾಂಕ್‌ಗಳಲ್ಲಿ ಸಾಲ ಅರ್ಜಿ ಬಾಕಿ ಸಲ್ಲ: ಜಿ.ಪಂ ಸಿಇಒ ರಿಷಿ ಆನಂದ ಎಚ್ಚರಿಕೆ

Date:

ವಿವಿಧ ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಸಲ್ಲಿಸಲಾದ ಅರ್ಜಿಗಳನ್ನು ಬ್ಯಾಂಕ್‌ಗಳಲ್ಲಿ ಅನಗತ್ಯವಾಗಿ ಬಾಕಿ ಉಳಿಸಬಾರದು. ದಾಖಲಾತಿಗಳು ಅಪೂರ್ಣವಾಗಿದ್ದರೆ ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ಕಡ್ಡಾಯವಾಗಿ ವಿಲೇವಾರಿ ಮಾಡಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಿಷಿ ಆನಂದ್ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ), ಉದ್ಯೋಗಿನಿ ಯೋಜನೆ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಟ್ಯಾಕ್ಸಿ, ಗೂಡ್ಸ್ ಹಾಗೂ ಆಟೋ ರಿಕ್ಷಾ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳು, ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ (PMEGP), ಸಮಾಜ ಕಲ್ಯಾಣ ಇಲಾಖೆಯ ಉದ್ಯಮಶೀಲತೆ ಮತ್ತು ಸ್ವಾವಲಂಬಿ ಸಾರಥಿ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ), ಕೃಷಿ ಇಲಾಖೆಯ ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕರಣ ಯೋಜನೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಹೆಸ್ಕಾಂನ ಪ್ರಧಾನಮಂತ್ರಿ ಸೂರ್ಯ ಫ್ರೀ ಮುಫ್ತ್ ಬಿಜಲಿ ಯೋಜನೆ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಹಾಗೂ ಅಟಲ್ ಪಿಂಚಣಿ ಯೋಜನೆಗಳಡಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳು ಬ್ಯಾಂಕ್‌ಗಳಲ್ಲಿ ಬಾಕಿ ಉಳಿದಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

“ಬಾಕಿ ಅರ್ಜಿಗಳನ್ನು ಒಂದು ವಾರದೊಳಗೆ ಪರಿಶೀಲಿಸಿ ಸಂಪೂರ್ಣವಾಗಿ ವಿಲೇವಾರಿ ಮಾಡಬೇಕು. ಅನಗತ್ಯ ವಿಳಂಬ ಕಂಡುಬಂದರೆ ಸಂಬಂಧಿಸಿದ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದರು.

“ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಬ್ಯಾಂಕ್‌ಗಳು ಅರ್ಜಿಗಳನ್ನು ಶೀಘ್ರವಾಗಿ ಪರಿಶೀಲಿಸಿ ಸಾಲ ಮಂಜೂರು ಪ್ರಕ್ರಿಯೆ ಪೂರ್ಣಗೊಳಿಸಬೇಕು. ದಾಖಲೆಗಳಲ್ಲಿ ಕೊರತೆ ಇದ್ದರೆ ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಯೋಜನೆಗಳ ಸದುಪಯೋಗ ಪಡೆಯಲು ನೆರವಾಗಬೇಕು” ಎಂದು ಸಿಇಒ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಅಶೋಕ ಕಲಘಟಗಿ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ, ಆರ್‌ಬಿಐ ವ್ಯವಸ್ಥಾಪಕಿ ಸಿಲ್ ಪ್ರಿಯಾ ಗೌತಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಬ್ಯಾಂಕ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...