ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಪ್ರೇರಣಾ ಮೈಕ್ರೋ ಕ್ರೆಡಿಟ್ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ಮತ್ತು ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನವಾಗಿದೆ.2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಯೋಜನೆಗಳ ಅರ್ಹತೆ, ಸಾಲ ಸೌಲಭ್ಯ ಹಾಗೂ ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




