ವಿಜಯಪುರ | ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯ ಉದ್ಯೋಗ: ಸೆ.15ರವರೆಗೆ ಜಾಬ್ ಕಾರ್ಡ್ ಮೇಳ

Date:

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಿ, ಕುಟುಂಬಗಳಿಗೆ ಸ್ಥಳೀಯವಾಗಿಯೇ ಜೀವನೋಪಾಯದ ಭದ್ರತೆ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ಶನಿವಾರದಿಂದ ಆರಂಭಿಸಿರುವ ‘ಜಾಬ್ ಕಾರ್ಡ್ ಮೇಳ’ ವಿಶೇಷ ಅಭಿಯಾನ ಸೆ.15ರವರೆಗೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್ ತಿಳಿಸಿದ್ದಾರೆ.

- Advertisement -

“ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು, ಸಿಬ್ಬಂದಿ, ಗ್ರಾಮ ಕಾಯಕ ಮಿತ್ರರು, ಮಹಿಳಾ ಸ್ವಸಹಾಯ ಸಂಘಗಳು, ಸಮುದಾಯ ಸಂಘಟನೆಗಳು, ಜಲಾನಯನ ಅಭಿವೃದ್ಧಿ ಸಂಘಗಳು ಹಾಗೂ ಹಾಲು ಉತ್ಪಾದಕರ ಸಂಘಗಳ ಸಹಯೋಗದಲ್ಲಿ ಮನೆ-ಮನೆಗೆ ಭೇಟಿ ನೀಡಿ ಉದ್ಯೋಗದ ಬೇಡಿಕೆಗಳನ್ನು ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಈ ವೇಳೆ ಜಾಬ್ ಕಾರ್ಡ್ ಹೊಂದಿರದ ಅರ್ಹ ಕುಟುಂಬಗಳನ್ನು ಗುರುತಿಸಿ, ಹೊಸ ಜಾಬ್ ಕಾರ್ಡ್‌ಗಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಪ್ರಧಾನ ಕುಟುಂಬಗಳು, ಅಂಗವಿಕಲರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ದುರ್ಬಲ ವರ್ಗದ ಕುಟುಂಬಗಳ ಹೆಚ್ಚಿನ ಭಾಗವಹಿಸುವಿಕೆಗೆ ಆದ್ಯತೆ ನೀಡಲಾಗುವುದು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಗಣಿನಾಡಿನಲ್ಲೂ ಅನಧಿಕೃತವಾಗಿ ಔಷಧ ಸಂಗ್ರಹ: ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

“ಈಗಾಗಲೇ ಇರುವ ಜಾಬ್ ಕಾರ್ಡ್‌ಗಳ ಅವಧಿ ಮುಗಿದಿದ್ದರೆ ಸ್ಥಳದಲ್ಲಿಯೇ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಹೊಸದಾಗಿ ಜಾಬ್ ಕಾರ್ಡ್ ಪಡೆದವರು ಹಾಗೂ ಇ-ಕೆವೈಸಿ ಬಾಕಿ ಇರುವ ನೋಂದಾಯಿತ ಕೂಲಿಕಾರರ ಇ-ಕೆವೈಸಿಯನ್ನು ಸ್ಥಳದಲ್ಲಿಯೇ ಪೂರ್ಣಗೊಳಿಸಿ, ಶೇ.100ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ” ಎಂದು ರಿಷಿ ಆನಂದ್ ತಿಳಿಸಿದ್ದಾರೆ.

ಗ್ರಾಮೀಣ ಕುಟುಂಬಗಳು ಅಭಿಯಾನದ ಸದುಪಯೋಗ ಪಡೆದುಕೊಂಡು ಉದ್ಯೋಗದ ಬೇಡಿಕೆಯನ್ನು ನೋಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...