ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

Date:

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್. ಖೇಡ ಅವರ 10ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದು ಖೇಡ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

- Advertisement -

ವಿಜಯಪುರ ನಗರದಲ್ಲಿ ಮಾತನಾಡಿದ ಇತಿಹಾಸ ಸಂಶೋಧಕ ಲಾಯಪ್ಪ ಇಂಗಳೆ ಅವರು, ಎಂ.ಎಸ್. ಖೇಡ ಅವರು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಅವಕಾಶ ಕಲ್ಪಿಸಿ, ಅವರ ಬದುಕು ರೂಪಿಸಿಕೊಳ್ಳಲು ನೆರವಾಗಿದ್ದಾರೆ. ಅವರ ಆದರ್ಶಯುತ ಜೀವನ, ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ಪ್ರತಿಯೊಬ್ಬರಿಗೂ ಮಾದರಿಯಾಗಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಹೋರಾಟಗಾರ ಅನಿಲ್ ಇಕ್ಕಡೆ ಮಾತನಾಡಿ, ಎಂ.ಎಸ್. ಖೇಡ ಅವರು ದೈಹಿಕವಾಗಿ ವಿಕಲಚೇತನರಾಗಿದ್ದರೂ ಮಾನಸಿಕವಾಗಿ ಅತ್ಯಂತ ಸದೃಢ ವ್ಯಕ್ತಿಯಾಗಿದ್ದರು. ತಮ್ಮ ದೈಹಿಕ ಮಿತಿಗಳನ್ನು ಮೀರಿ ಸಮಾಜದ ದುರ್ಬಲ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ಅವರು, ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸುವ ಮೂಲಕ ತಮ್ಮ ವ್ಯಕ್ತಿತ್ವ ಮತ್ತು ಸಾಧನೆಗೆ ಸಾಕ್ಷಿಯಾಗಿದ್ದಾರೆ. ಅವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಯೇ ಅವರ ಆದರ್ಶ ಹಾಗೂ ಸಮಾಜಮುಖಿ ಬದುಕಿಗೆ ಹಿಡಿದ ಕನ್ನಡಿಯಾಗಿದೆ ಎಂದು ಸ್ಮರಿಸಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ವಿಜಯಪುರ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಯ ಖಜಾಂಚಿ ವಿನೋದ್ ಎಂ. ಖೇಡ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ವಿಕಾಸ ಎಂ. ಖೇಡ, ಅಂಬವ್ವ ಖೇಡ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿಜಯ, ಲಕ್ಷ್ಮಿ ಹಿಪ್ಪರಗಿ, ಪ್ರಕಾಶ ರುದ್ರಮಣಿ, ಅಪ್ಪು ಇಂಡಿ, ಅಶೋಕ ವಾಲಿಕಾರ, ಎಂ.ಬಿ. ಉಮರಾಣಿ, ಅಂಬಣ್ಣ ಗೊನ್ನಾಪುರ, ಸೀತಾ ಲಮಾಣಿ, ಗೌರು ಉದಂಡೆ, ಶಂಕ್ರಮ್ಮ ಕೋರಿ, ಸಂತೋಷ ಕಲಗುಡಿ, ಎಂ.ಎಸ್. ಮಠ, ಅನಿಲ್ ಪವಾರ್, ರಾಜು ತಡಲಗಿ, ರಾಜು ಕುಮಟಗಿ, ಭಗವಾನ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು, ಅಂಗವಿಕಲರ ಒಕ್ಕೂಟದ ಸದಸ್ಯರು ಹಾಗೂ ವಿಕಲಚೇತನರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...

ಚಾಮರಾಜನಗರದಲ್ಲಿ ಅ.24ರಿಂದ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ

ಬುದ್ಧನ ಕರುಣೆ, ಸಮಾನತೆ, ಸಹಬಾಳ್ವೆ ಹಾಗೂ ಬಹುತ್ವದ ಸಂದೇಶವನ್ನು ಜನರಿಗೆ ತಲುಪಿಸುವ...