ವಿಜಯಪುರ | ಪ್ರಧಾನ್ ರಾಜೀನಾಮೆ ಆಗ್ರಹಿಸಿ ‘ನೀಟ್ ವಿರೋಧಿ ಒಕ್ಕೂಟ’ದಿಂದ ಬೃಹತ್ ಜಾಥಾ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನ್ಯಾಯಯುತ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆಯುತ್ತಿರುವ ಪೊಲೀಸ್ ದಬ್ಬಾಳಿಕೆ, ಲಾಠಿಚಾರ್ಜ್ ಮತ್ತು ಹಲ್ಲೆಯನ್ನು ‘ನೀಟ್ ವಿರೋಧಿ ಒಕ್ಕೂಟ’ ತೀವ್ರವಾಗಿ ಖಂಡಿಸಿದೆ.

- Advertisement -

ವಿಜಯಪುರ ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆದ ಒಕ್ಕೂಟದ ಪೂರ್ವಭಾವಿ ಸಭೆಯಲ್ಲಿ ಕೇಂದ್ರ ಸರ್ಕಾರದ ಶೈಕ್ಷಣಿಕ ನೀತಿಗಳು ಹಾಗೂ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಚರ್ಚೆ ನಡೆಸಲಾಯಿತು. ದೇಶದ ಶಿಕ್ಷಣ ವ್ಯವಸ್ಥೆ ಮತ್ತು ಪರೀಕ್ಷಾ ವಿಧಾನಗಳು ಹಾದಿ ತಪ್ಪಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಲಾಗುತ್ತಿದೆ ಎಂದು ಸಭೆಯಲ್ಲಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಜುಲೈ 30ರಂದು ವಿಜಯಪುರ ನಗರದ ಐತಿಹಾಸಿಕ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ತೀರ್ಮಾನಿಸಲಾಯಿತು.

“ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳಿಗೆ ಗುರಿಯಾಗಿರುವ ‘ನೀಟ್’ (NEET) ಪರೀಕ್ಷೆಯನ್ನು ರದ್ದುಗೊಳಿಸಬೇಕು ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಸೇರಿದಂತೆ ಪರೀಕ್ಷೆ ನಡೆಸುವ ಖಾಸಗಿ ಏಜೆನ್ಸಿಗಳ ಮಧ್ಯಸ್ಥಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು” ಎಂಬುದು ಪ್ರತಿಭಟನೆಯ ಪ್ರಮುಖ ಆಗ್ರಹಗಳಾಗಿವೆ ಎಂದು ಒಕ್ಕೂಟ ತಿಳಿಸಿದೆ.

ಜುಲೈ 30ರಂದು ನಡೆಯಲಿರುವ ಪ್ರತಿಭಟನಾ ಜಾಥಾದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಯುವಜನರು, ಪೋಷಕರು, ಪ್ರಗತಿಪರ ಚಿಂತಕರು ಹಾಗೂ ಸಂವಿಧಾನಪ್ರೇಮಿ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸುವಂತೆ ಒಕ್ಕೂಟ ಮನವಿ ಮಾಡಿದೆ.

ಸಭೆಯಲ್ಲಿ ಸೋಮನಾಥ್ ಕಳ್ಳಿಮನಿ, ಅಡಿವಪ್ಪ ಸಾಲಗಲ್ಲ, ಶ್ರೀನಾಥ್ ಪೂಜಾರಿ, ಮಲ್ಲಿಕಾರ್ಜುನ ಬಟಗಿ, ಗೌಡಪ್ಪ ಬಡಿಗೇರ, ಅಕ್ಷಯ್ ಕುಮಾರ್ ಅಜಮನಿ, ಪ್ರಭುಗೌಡ ಪಾಟೀಲ, ಪರಶುರಾಮ್ ಚಲುವಾದಿ, ಸೋಮಲಿಂಗ ರಣದೇವಿ, ಚನ್ನು ಕಟ್ಟಿಮನಿ, ಸುಖದೇವ್ ಚಲುವಾದಿ, ಮತೀನ್ ಕುಮಾರ್ ದೇವದರ್, ಸಿದ್ದಲಿಂಗ ಬಾಗೇವಾಡಿ, ಬೋಗೇಶ್ ಸೋಲಾಪುರ, ಯಮನಪ್ಪ ಗುಣಕಿ, ಗೋಪಿ ಚಲವಾದಿ, ಯಲ್ಲಪ್ಪ ಕಾಂಬಳೆ, ಮಲ್ಲು ಜಾಲಗೇರಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...