ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

Date:

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರು ನಾಡಿನ ಸ್ವಾಭಿಮಾನ ಹಾಗೂ ಹಕ್ಕುಗಳ ರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀರ ಮಹಿಳೆ. ಅವರ ಧೈರ್ಯ, ಶೌರ್ಯ, ದೇಶಪ್ರೇಮ ಮತ್ತು ನಾಯಕತ್ವದ ಗುಣಗಳು ಇಂದಿನ ಯುವಜನತೆಗೆ ಆದರ್ಶವಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.

- Advertisement -

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಿತ್ತೂರು ಚೆನ್ನಮ್ಮ ಅವರ ಹೋರಾಟದ ಬದುಕು ಕೇವಲ ಇತಿಹಾಸದ ಪುಟಗಳಿಗೆ ಸೀಮಿತವಾಗಬಾರದು. ಅವರ ಆದರ್ಶಗಳು ಯುವಪೀಳಿಗೆಯ ಜೀವನದಲ್ಲಿ ಪ್ರತಿಫಲಿಸಬೇಕು. ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಧೈರ್ಯ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಮತ್ತು ನಾಡಿನ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ ಕಾರ್ಯಕ್ರಮ ಉದ್ಘಾಟಿಸಿದರು. ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಹಾಗೂ ಸಮಾಜದ ಮುಖಂಡ ಬಿ.ಎಂ. ಪಾಟೀಲ ಮಾತನಾಡಿದರು.

ಉಪನ್ಯಾಸ ನೀಡಿದ ಶರಣಗೌಡ ಪಾಟೀಲ ಮಾತನಾಡಿ, ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೋರಾಟಕ್ಕೆ ವಿಶಿಷ್ಟ ಸ್ಥಾನವಿದೆ. ಯುದ್ಧ ಕೌಶಲದಲ್ಲಿ ಪರಿಣತಿ ಹೊಂದಿದ್ದ ಅವರು ಶತ್ರುಗಳ ವಿರುದ್ಧ ನಿರ್ಭೀತಿಯಿಂದ ಹೋರಾಡಿ, ಮಹಿಳೆಯರಲ್ಲಿಯೂ ಅಸಾಧಾರಣ ಧೈರ್ಯ ಮತ್ತು ನಾಯಕತ್ವದ ಶಕ್ತಿ ಇದೆ ಎಂಬುದನ್ನು ತೋರಿಸಿಕೊಟ್ಟರು ಎಂದರು.ಚೆನ್ನಮ್ಮ ಅವರ ತ್ಯಾಗ, ಸಾಹಸ ಮತ್ತು ದೇಶಪ್ರೇಮದ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಬೇಕು. ಅವರ ಜೀವನಗಾಥೆಯನ್ನು ಯುವಜನತೆಗೆ ಪರಿಚಯಿಸುವ ಮೂಲಕ ಸ್ವಾಭಿಮಾನ, ಹೋರಾಟದ ಮನೋಭಾವ ಹಾಗೂ ದೇಶದ ಬಗ್ಗೆ ಜವಾಬ್ದಾರಿಯನ್ನು ಮೂಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಭಾರತಿ ಕಣಮುಚನಾಳ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿವಳಿ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣನವರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೂವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಆಯುಷ್ ಅಧಿಕಾರಿ ಡಾ. ವಿದ್ಯಾವತಿ ಅಥಣಿ, ಗಿರೀಶ ಕುಲಕರ್ಣಿ, ವಿ.ಸಿ. ನಾಗಠಾಣ, ಬಿ.ಎಂ. ಬಿರಾದಾರ ಹಾಗೂ ಧಾನೇಶ್ವರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...