ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

Date:

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ ಪೂರ್ಣ ಕೂಲಿ ಪಾವತಿಸಬೇಕು. ಈಗಾಗಲೇ ದಾಖಲಿಸಿರುವ ಕೆಲಸದ ಅಳತೆಯನ್ನು ಸ್ವತಂತ್ರ ಅಥವಾ ಮೂರನೇ ವ್ಯಕ್ತಿಯ ತಾಂತ್ರಿಕ ತಂಡದಿಂದ ಮರುಅಳತೆ ಮಾಡಿಸಿ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿ ಸಂಘದ ಮುಖಂಡರು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿಯೇ ಅನೇಕ ಕುಟುಂಬಗಳ ಪ್ರಮುಖ ಜೀವನಾಧಾರವಾಗಿದೆ. ಆದರೆ ಕೆಲವು ಸಂದರ್ಭಗಳಲ್ಲಿ ಕೂಲಿಕಾರರು ವಾಸ್ತವವಾಗಿ ಮಾಡಿದ ಕೆಲಸದ ಪ್ರಮಾಣಕ್ಕೆ ಅನುಗುಣವಾಗಿ ಕೂಲಿ ದಾಖಲಿಸದೆ ಕಡಿಮೆ ಮೊತ್ತ ಪಾವತಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಒಂದೇ ರೀತಿಯ ಕೆಲಸ ಮಾಡಿದ ಕೂಲಿಕಾರರಿಗೆ ವಿಭಿನ್ನ ಪ್ರಮಾಣದ ಕೂಲಿ ದಾಖಲಿಸಿರುವ ಕುರಿತು ಕೂಡ ಪರಿಶೀಲನೆ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ್ರತಿಯೊಬ್ಬ ಕೂಲಿಕಾರರು ವಾಸ್ತವವಾಗಿ ಮಾಡಿರುವ ಕೆಲಸದ ಪ್ರಮಾಣವನ್ನು ಸ್ಥಳದಲ್ಲೇ ಪರಿಶೀಲಿಸಿ, ಅದರ ಆಧಾರದ ಮೇಲೆ ಬಾಕಿ ಇರುವ ಪೂರ್ಣ ಕೂಲಿ ಹಣವನ್ನು ಪಾವತಿಸಬೇಕು. ಕೆಲಸದ ಪ್ರಮಾಣ ದಾಖಲಿಸುವಲ್ಲಿ ಯಾವುದೇ ಪಕ್ಷಪಾತ ಅಥವಾ ತಾರತಮ್ಯ ನಡೆದಿರುವುದು ಸಾಬೀತಾದರೆ, ಅದಕ್ಕೆ ಕಾರಣರಾದ ಸಂಬಂಧಿತ ತಾಂತ್ರಿಕ ಸಿಬ್ಬಂದಿಯ ಜವಾಬ್ದಾರಿ ನಿಗದಿಪಡಿಸಿ ನಿಯಮಾನುಸಾರ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಕೂಲಿಕಾರರಿಗೆ ಕಡಿಮೆ ಕೂಲಿ ಪಾವತಿಯಾಗಲು ಕಾರಣವೇನು ಎಂಬುದರ ಕುರಿತು ಸಮಗ್ರ ತನಿಖೆ ನಡೆಸಿ, ತನಿಖಾ ವರದಿಯನ್ನು ಸಂಘದ ಮುಖಂಡರು ಹಾಗೂ ಸಂಬಂಧಿತ ಕೂಲಿಕಾರರಿಗೆ ತಿಳಿಸಬೇಕು. ಕೂಲಿಕಾರರು ಸಲ್ಲಿಸಿರುವ ದಾಖಲೆಗಳು, ಮಾಸ್ಟರ್‌ರೋಲ್ ಪ್ರತಿಗಳು ಹಾಗೂ ಇತರ ಸಂಬಂಧಿತ ದಾಖಲೆಗಳನ್ನು ಪರಿಗಣಿಸಿ ಯಾವುದೇ ಕೂಲಿಕಾರರಿಗೆ ಅನ್ಯಾಯವಾಗದಂತೆ ನ್ಯಾಯಯುತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿನ ಕೂಲಿಕಾರರು ಪ್ರಸ್ತುತ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಉದ್ಯೋಗ ಖಾತ್ರಿ ಯೋಜನೆಯ ಕೂಲಿಯನ್ನೇ ನಂಬಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಕೆಲಸ ಮಾಡಿದವರಿಗೆ ಅವರ ಶ್ರಮಕ್ಕೆ ತಕ್ಕ ಪೂರ್ಣ ಕೂಲಿಯನ್ನು ಯಾವುದೇ ವಿಳಂಬವಿಲ್ಲದೆ ಪಾವತಿಸುವುದು ಅತ್ಯಗತ್ಯ ಎಂದು ಮುಖಂಡರು ತಿಳಿಸಿದ್ದಾರೆ.

ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸ್ವತಂತ್ರ ಮರುಅಳತೆ ಮಾಡಬೇಕು. ಕೂಲಿಕಾರರಿಗೆ ನ್ಯಾಯ ಒದಗಿಸುವ ಜೊತೆಗೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಮಲ್ಲಿಕಾರ್ಜುನ ಗರಸಂಗಿ, ರಾಜ್ಯ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಸಮಿತಿ ಮುಖಂಡರಾದ ಹುಲಗಪ್ಪ ಚಲವಾದಿ, ರಾಜ್ಯ ಸಮಿತಿ ಸದಸ್ಯೆ ಶಿವುಬಾಯಿ ಗರಸಂಗಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಯುವತಿಯನ್ನು ಬಲವಂತವಾಗಿ ಕರೆದೊಯ್ದ ಆರೋಪ: ತನಿಖೆಗೆ ಪೊಲೀಸ್ ಆಯುಕ್ತರ ಸೂಚನೆ

ಯುವತಿಯೊಬ್ಬಳನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿದ್ದಾರೆ...

ರಾಯಚೂರು | ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚಿನ...

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...

ಬಾಗೇಪಲ್ಲಿ | ಪೂಲವಾರಿಪಲ್ಲಿ ಭೂಹಗರಣ ತಹಸೀಲ್ದಾರ್‌ನ್ನು ಸೇವೆಯಿಂದ ವಜಾಗೊಳಿಸಿ ಸಿಬಿಐ ತನಿಖೆ ದಸಂಸ ಆಗ್ರಹ

ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ ಗ್ರಾಮದ ನಡೆದ ಭೂಹಗರಣದಲ್ಲಿ ತಹಸೀಲ್ದಾರ್...