ವಿಜಯಪುರ | ಅಕ್ರಮ ಪೈಪ್‌ಲೈನ್‌ ಹಾವಳಿ; 30 ಪ್ರಕರಣ ಪತ್ತೆಹಚ್ಚಿದ KBJNL ಅಧಿಕಾರಿಗಳು

Date:

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಲಘಾಣ ಪಶ್ಚಿಮ ಕಾಲುವೆಯ ಕೆಳಭಾಗದಲ್ಲಿ ರಂಧ್ರ ಕೊರೆದು (ಸೈಫನ್ ಹೊಡೆದು) ಅಕ್ರಮವಾಗಿ ನೀರು ಪಡೆಯುತ್ತಿದ್ದ 30 ಪ್ರಕರಣಗಳನ್ನು ಕೆಬಿಜೆಎನ್ಎಲ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.

- Advertisement -

ಮಲಘಾಣ ಪಶ್ಚಿಮ ಕಾಲುವೆ ಒಟ್ಟು 118.60 ಕಿ.ಮೀ. ಉದ್ದವಿದ್ದು, ಈ ಹಿಂದೆ ಸುಮಾರು 100 ಕಿ.ಮೀ ಮಾತ್ರ ನೀರು ಹರಿಯುತ್ತಿತ್ತು. 100ರಿಂದ 118.60 ಕಿ.ಮೀ ವರೆಗಿನ ಕೊನೆಯ ಹಂತಕ್ಕೆ ನೀರು ತಲುಪದ ಹಿನ್ನೆಲೆಯಲ್ಲಿ ಈ ಭಾಗದ ರೈತರು ಹಲವು ಬಾರಿ ಅಳಲು ತೋಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಹಿನ್ನೆಲೆಯಲ್ಲಿ ಕೆಬಿಜೆಎನ್ಎಲ್ ಅಧಿಕಾರಿಗಳು ಕಾಲುವೆ ವ್ಯಾಪ್ತಿಯಲ್ಲಿ ತಪಾಸಣೆ ನಡೆಸಿದಾಗ, ಬಬಲೇಶ್ವರ ತಾಲೂಕಿನ ಯಕ್ಕುಂಡಿ, ಹೊಕ್ಕುಂಡಿ, ಅರ್ಜುಣಗಿ ಹಾಗೂ ಹೆಬ್ಬಳಟ್ಟಿ ವ್ಯಾಪ್ತಿಯಲ್ಲಿ ಸುಮಾರು 30 ಕಡೆಗಳಲ್ಲಿ ಕಾಲುವೆಯ ಬುಡದಲ್ಲಿ ರಂಧ್ರ ಕೊರೆದು 4ರಿಂದ 6 ಇಂಚಿನ ಪೈಪ್‌ಗಳನ್ನು ಅಳವಡಿಸಿ ಅಕ್ರಮವಾಗಿ ನೀರು ಪಡೆಯುತ್ತಿರುವುದು ಪತ್ತೆಯಾಗಿದೆ.

ಇತ್ತೀಚೆಗೆ ಕಾಲುವೆಯ ಕೊನೆಯ ಭಾಗದವರೆಗೂ ನೀರು ಹರಿಸುವಂತೆ ಆಗ್ರಹಿಸಿ ರೈತರು ಅರ್ಜುಣಗಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದರು. ಧರಣಿಯಲ್ಲಿ ಪಾಲ್ಗೊಂಡಿದ್ದ ಕೆಲವರೇ ಇದೇ ಕಾಲುವೆಯಲ್ಲಿ ಸೈಫನ್ ಅಳವಡಿಸಿ ನೀರು ಕಳ್ಳತನ ಮಾಡಿರುವುದು ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

20a6bb73 9542 4f57 ba71 6ac0d6c91ebf

ಫೆಬ್ರುವರಿಯಲ್ಲಿ ಕಾಲುವೆ ನಿರ್ವಹಣೆ ಸಂದರ್ಭದಲ್ಲಿ ಪತ್ತೆಯಾಗಿದ್ದ ಸೈಫನ್‌ಗಳನ್ನು ಕಾಂಕ್ರೀಟ್ ಹಾಕಿ ಮುಚ್ಚಲಾಗಿತ್ತು. ಆದರೆ, ಇತ್ತೀಚೆಗೆ ಕಾಲುವೆಗೆ ನೀರು ಹರಿಸಿದ ಬಳಿಕ ನೀರುಗಳ್ಳರು ಮತ್ತೆ ಆ ಕಾಂಕ್ರೀಟ್ ಒಡೆದು ರಂಧ್ರ ಕೊರೆದು ಅಕ್ರಮವಾಗಿ ನೀರು ಪಡೆಯುತ್ತಿರುವುದು ಪತ್ತೆಯಾಗಿದೆ.

ಈ ಅಕ್ರಮ ನೀರು ಕಳ್ಳತನದಿಂದಾಗಿ ಕಾಲುವೆಯ ಕೊನೆಯಂಚಿನ ರೈತರಿಗೆ ಸಮರ್ಪಕವಾಗಿ ನೀರು ತಲುಪದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಅಕ್ರಮವಾಗಿ ನೀರು ಪಡೆಯುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಬಬಲೇಶ್ವರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ವೈ. ರೂಡಗಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...