ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

Date:

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಆಯೋಜಿಸಿರುವ 22ನೇ ಶರಣ ತತ್ವ ಕಮ್ಮಟದಲ್ಲಿ ಪಾಲ್ಗೊಳ್ಳುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಸಂಘಟಕರು ಆಹ್ವಾನ ನೀಡಿದರು.

- Advertisement -

ದಾವಣಗೆರೆಯ ಲಿಂ. ಶರಣೆ ಪುಟ್ಟಮ್ಮ ಹಾಗೂ ಲಿಂ. ಶರಣ ಬಸವರಾಜಪ್ಪ ಅಜ್ಜಂಪುರ ಶೆಟ್ರು ಸೇವಾ ಟ್ರಸ್ಟ್ ಮತ್ತು ಬಸವ ಬಳಗದ ಪದಾಧಿಕಾರಿಗಳು ಸಚಿವರ ಗೃಹ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿ ಕಮ್ಮಟದ ಕುರಿತು ಮಾಹಿತಿ ಹಂಚಿಕೊಂಡರು. ನಾಲ್ಕು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಒಂದು ದಿನ ಭಾಗವಹಿಸುವಂತೆ ಟ್ರಸ್ಟ್ ಪ್ರತಿನಿಧಿ ವಿಜಯ ಸಿಂದಗಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಅಕ್ಟೋಬರ್ 29ರಂದು ಸಂಜೆ 6.30ಕ್ಕೆ ಕಮ್ಮಟಕ್ಕೆ ಚಾಲನೆ ದೊರೆಯಲಿದೆ. ಶರಣರ ವಚನಗಳಲ್ಲಿನ ಸೃಷ್ಟಿಯ ಪರಿಕಲ್ಪನೆ, ಸೃಷ್ಟಿ ಮತ್ತು ಮಾನವ ಜೀವನದ ನಡುವಿನ ಸಂಬಂಧ, ಗುರುವಿನ ಮಹತ್ವ, ವಿಭೂತಿ, ಲಿಂಗ, ಪಾದೋದಕ, ಪ್ರಸಾದ ಹಾಗೂ ಅಷ್ಟಾಂಗ ಯೋಗ ಸೇರಿದಂತೆ ಶರಣ ತತ್ವದ ವಿವಿಧ ಆಯಾಮಗಳ ಕುರಿತು ಗೋಷ್ಠಿಗಳು ನಡೆಯಲಿವೆ. ವಿವಿಧ ಪ್ರದೇಶಗಳಿಂದ ಶರಣ ತತ್ವದ ಆಸಕ್ತರು ಕಮ್ಮಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಬೆಳಿಗ್ಗೆ ಶಿವಯೋಗದ ಪ್ರಾತ್ಯಕ್ಷಿಕೆ ಹಾಗೂ ಪಥಸಂಚಲನ ಹಮ್ಮಿಕೊಳ್ಳಲಾಗಿದೆ. ಶರಣರ ಆದರ್ಶ, ತತ್ವ ಹಾಗೂ ಸಂದೇಶಗಳನ್ನು ಜನಸಾಮಾನ್ಯರಿಗೆ ವ್ಯವಸ್ಥಿತವಾಗಿ ತಲುಪಿಸಿ, ಅವುಗಳ ಕುರಿತು ಅರಿವು ಮೂಡಿಸುವುದು ಕಮ್ಮಟದ ಪ್ರಮುಖ ಆಶಯವಾಗಿದೆ ಎಂದು ಸಂಘಟಕರು ಸಚಿವರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಶರಣ ತತ್ವದ ಪ್ರಸಾರಕರಾದ ಡಾ. ಜೆ.ಎಸ್ ಪಾಟೀಲ ಮತ್ತು ರಾಜು ಜತ್ತಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ವಾಲಿಯರ್ ಭೀಕರ ಅಪಘಾತ: ಎಸ್‌ಪಿ, 8 ಪೋಲಿಸ್ ಸಿಬ್ಬಂದಿ ಅಮಾನತು; ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಶೀತ್ಲಾ ಮಾತಾ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಸಮೂಹದ ಮೇಲೆ...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...