ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

Date:

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು ವ್ಯಸನದಿಂದ ದೂರವಿಡುವ ಉದ್ದೇಶದಿಂದ ನಶಾ ಮುಕ್ತ ಭಾರತ ಅಭಿಯಾನದ ಆರನೇ ವಾರ್ಷಿಕೋತ್ಸವದ ಅಂಗವಾಗಿ ಅಕ್ಟೋಬರ್ ನಾಲ್ಕನೇ ವಾರದಲ್ಲಿ ಜಿಲ್ಲಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ನಿರ್ದೇಶನ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮಾರ್ಗಸೂಚಿಯಂತೆ ಜಿಲ್ಲಾ, ತಾಲ್ಲೂಕು ಮತ್ತು ಶಿಕ್ಷಣ ಸಂಸ್ಥೆಗಳ ಮಟ್ಟದಲ್ಲಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಅಭಿಯಾನದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ, ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವ ಮೂಲಕ ವ್ಯವಸ್ಥಿತವಾಗಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಯುವಜನತೆ ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರನ್ನು ಮಾದಕ ವ್ಯಸನದ ದುಷ್ಪರಿಣಾಮಗಳಿಂದ ರಕ್ಷಿಸುವುದು ಸಮಾಜದ ಸಾಮೂಹಿಕ ಜವಾಬ್ದಾರಿಯಾಗಿದೆ. ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಜೀವನದ ಮೇಲೆ ಉಂಟಾಗುವ ಗಂಭೀರ ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಯುವಜನರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರು ವ್ಯಸನಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ಹೇಳಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ:

ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಖಾಸಗಿ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಮಾದಕ ವಸ್ತುಗಳ ಬಳಕೆಯ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಬಿತ್ತಿಪತ್ರ, ಕರಪತ್ರಗಳ ವಿತರಣೆ ಹಾಗೂ ಗಣ್ಯ ವ್ಯಕ್ತಿಗಳ ಮೂಲಕ ಜಾಗೃತಿ ಸಂದೇಶಗಳ ಪ್ರಸಾರ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.

ಯುವಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮ್ಯಾರಥಾನ್, ವಾಕಥಾನ್ ಹಾಗೂ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಆನ್‌ಲೈನ್‌ನಲ್ಲೂ ಪ್ರಮಾಣವಚನಕ್ಕೆ ಅವಕಾಶ:

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೂ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ. ನಶಾ ಮುಕ್ತ ಭಾರತ ಅಭಿಯಾನದ ಇ-ಪ್ರಮಾಣವಚನ ಲಿಂಕ್ ಮೂಲಕ ಪ್ರಮಾಣವಚನ ಸ್ವೀಕರಿಸಿ ಪ್ರಮಾಣಪತ್ರ ಪಡೆಯಲು ಅವಕಾಶವಿದೆ.

ಅಭಿಯಾನದಡಿ ಆಯೋಜಿಸುವ ಜಾಗೃತಿ ಕಾರ್ಯಕ್ರಮಗಳ ವಿವರ ಹಾಗೂ ವರದಿಗಳನ್ನು ನಿಗದಿತ ಗೂಗಲ್ ಡ್ರೈವ್ ಲಿಂಕ್ ಮೂಲಕ ಸಲ್ಲಿಸಬೇಕು. ಅಲ್ಲದೆ, ಜಿಲ್ಲಾದ್ಯಂತ ನಡೆಯುವ ಕಾರ್ಯಕ್ರಮಗಳ ವರದಿಗಳನ್ನು ಎನ್‌ಎಎಂಬಿಎ (NMBA) ಮೊಬೈಲ್ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ ಪಿಳ್ಳೈ ಮುಡಿಗೇರಿದ ನೊಬೆಲ್ ಶಾಂತಿ ಪುರಸ್ಕಾರ!

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ...

ಶಿವಮೊಗ್ಗ | ಎಫ್‌ಸಿಐ ಗೋದಾಮಿನ ಹುಳು-ನುಸಿ ಕಾಟದಿಂದ ಬೇಸತ್ತ ಸ್ಥಳೀಯರು: ಸ್ಥಳಾಂತರಕ್ಕೆ ಆಗ್ರಹ

ಶಿವಮೊಗ್ಗದ ಆಲ್ಕೊಳ ಬಳಿ ಇರುವ ಎಫ್‌ಸಿಐ ಗೋದಾಮಿನಲ್ಲಿ ಸಂಗ್ರಹವಾಗಿರುವ ಅಕ್ಕಿಯಿಂದ ಹುಳು,...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...