ವಿಜಯಪುರ | ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ. ಆನಂದ್ ಕೆ ಸೂಚನೆ

Date:

ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ವಿಜಯಪುರ ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಗರ, ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, “ಸಾರ್ವಜನಿಕ ಸ್ಥಳ, ಸರ್ಕಾರಿ ಕಚೇರಿ, ಆಸ್ಪತ್ರೆ, ಶಾಲಾ-ಕಾಲೇಜು, ಬಸ್ ನಿಲ್ದಾಣ ಹಾಗೂ ಇತರೆ ಜನನಿಬಿಡ ಪ್ರದೇಶಗಳಲ್ಲಿರುವ ಬೀದಿ ನಾಯಿಗಳನ್ನು ಗುರುತಿಸಿ ತಾತ್ಕಾಲಿಕ ಶೆಡ್‌ನಲ್ಲಿ ಆಶ್ರಯ ಕಲ್ಲಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಜಿಲ್ಲಾದ್ಯಂತ ಬೀದಿ ನಾಯಿಗಳ ನಿಯಂತ್ರಣಕ್ಕೆ ಅಧಿ ಕಾರಿಗಳು ಕ್ರಮ ವಹಿಸಬೇಕು. ಲಸಿಕೆ ಹಾಕಬೇಕು. ಲಸಿಕೆ ಹಾಕಿದ ಕುರಿತು ಗುರುತಿಗಾಗಿ ಬಣ್ಣ ಹಚ್ಚಬೇಕು. ಪಶು ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯವಿದ್ದು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಶು ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ವಹಿಸಬೇಕು” ಎಂದು ಸೂಚಿಸಿದರು.

“ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬರುವ ಬೀದಿನಾಯಿಗಳ ಚಲನವಲನ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಆ ಕಚೇರಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಇದನ್ನು ಎಲ್ಲ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವೈದ್ಯರು ಪ್ರೀತಿ, ಸಮಾಧಾನದಿಂದ ಮಾತನಾಡಿದರೆ ರೋಗಿಗಳು ಅರ್ಧ ಗುಣವಾಗುತ್ತಾರೆ: ಡಾ. ಸಿದ್ದನಗೌಡ ಎ ಪಾಟೀಲ

ಕರ ವಸೂಲಿ ಪ್ರಗತಿ ಸಾಧಿಸಿ: “ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿ ಪ್ರಗತಿ ಸಾಧಿಸಿ, ಅನುದಾನವನ್ನು ಗ್ರಂಥಾಲಯ, ವಿದ್ಯುತ್ ಬಿಲ್ ಬಾಕಿ ಪಾವತಿಸಲು ಕ್ರಮ ವಹಿಸಬೇಕು. ಕೊಳಚೆ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ, ಒಳಚರಂಡಿ, ರಸ್ತೆಗಳನ್ನು ಸಮರ್ಪಕವಾಗಿ ಒದಗಿಸಬೇಕು” ಎಂದರು.

“ಆರೋಗ್ಯ ಹಿತದೃಷ್ಟಿಯಿಂದ ಕುಡಿಯುವ ನೀರಿನ ಸಂಗ್ರಹಗಾರಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಬೇಕು, ಸ್ವಚ್ಛಗೊಳಿಸಿದ ಕುರಿತು ಪುಸ್ತಕದಲ್ಲಿ ನಮೂದಿಸಬೇಕು” ಎಂದು ಡಾ.ಆನಂದ್ ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ವಿಜಯಪುರ | ಯತ್ನಾಳ ಬೆಂಬಲಿಗರಿಂದ 18 ಸಾವಿರ ಆಕ್ಷೇಪಣೆ ಸಲ್ಲಿಕೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ...