ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

Date:

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ, ವಿಜಯಪುರ ಜಿಲ್ಲಾ ಕಾಂಗ್ರೆಸ್‌ನ ಒಳರಾಜಕೀಯದ ಮೇಲೆ ಪರಿಣಾಮ ಬೀರುವ ಬೆಳವಣಿಗೆಯಾಗಿ ಕಾಣಿಸಿಕೊಳ್ಳುತ್ತಿದೆ.

ದಶಕಗಳ ಕಾಲ ಒಂದೇ ಪಕ್ಷದ ವೇದಿಕೆಯಲ್ಲಿ ರಾಜಕೀಯ ಹೆಜ್ಜೆ ಹಾಕಿದವರು… ಪರಸ್ಪರ ಆಪ್ತರಾಗಿಯೇ ಗುರುತಿಸಿಕೊಂಡವರು… ಇದೀಗ ಅದೇ ವೇದಿಕೆಯಲ್ಲಿ ಪರಸ್ಪರ ಆರೋಪ–ಪ್ರತ್ಯಾರೋಪಕ್ಕೆ ಇಳಿದಿದ್ದಾರೆ!

- Advertisement -

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹಾಗೂ ಮುದ್ದೇಬಿಹಾಳ ಕ್ಷೇತ್ರದ ಹಿರಿಯ ಶಾಸಕ ಸಿ ಎಸ್ ನಾಡಗೌಡ ನಡುವಿನ ರಾಜಕೀಯ ಸಮರ ಇದೀಗ ಬಹಿರಂಗ ವಾಕ್ಸಮರದ ಹಂತ ತಲುಪಿದೆ. ಸಚಿವ ಸ್ಥಾನದಿಂದ ಆರಂಭವಾದ ಅಸಮಾಧಾನ ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಯ ವಿಚಾರದವರೆಗೂ ವಿಸ್ತರಿಸಿರುವುದು ಜಿಲ್ಲಾ ಕಾಂಗ್ರೆಸ್‌ನ ಒಳರಾಜಕೀಯಕ್ಕೆ ಹೊಸ ಆಯಾಮ ನೀಡಿದೆ. ಇಬ್ಬರು ಹಿರಿಯ ನಾಯಕರ ನಡುವಿನ ಈ ತಿಕ್ಕಾಟ ಕಾಂಗ್ರೆಸ್‌ನ ಆಂತರಿಕ ವಲಯದಲ್ಲಷ್ಟೇ ಅಲ್ಲ, ಜಿಲ್ಲೆಯ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಸ್ವಪಕ್ಷದಲ್ಲೇ ಸಮರ

ವಿಜಯಪುರ ಜಿಲ್ಲೆಯ ರಾಜಕಾರಣದಲ್ಲಿ ಸ್ವಪಕ್ಷೀಯರ ನಡುವಿನ ಭಿನ್ನಮತ ಹೊಸದೇನಲ್ಲ. ಕಾಂಗ್ರೆಸ್ ಆಗಿರಲಿ, ಬಿಜೆಪಿಯಾಗಿರಲಿ, ನಾಯಕರ ನಡುವಿನ ಒಳಜಗಳಗಳು ಹಲವು ಬಾರಿ ಬಹಿರಂಗಗೊಂಡಿವೆ. ಆದರೆ ಈ ಬಾರಿ ಕಾಂಗ್ರೆಸ್‌ನ ಇಬ್ಬರು ಹಿರಿಯ ನಾಯಕರ ನಡುವಿನ ಸಂಘರ್ಷ ಭಿನ್ನ ಸ್ವರೂಪ ಪಡೆದುಕೊಂಡಿದೆ.

ಈ ಹಿಂದೆ ಜಿಲ್ಲೆಯ ಪ್ರಮುಖ ನಾಯಕರಾಗಿದ್ದ ಎಂ ಬಿ ಪಾಟೀಲ ಹಾಗೂ ಶಿವಾನಂದ ಪಾಟೀಲ ಸೇರಿದಂತೆ ಹಲವು ನಾಯಕರ ನಡುವೆ ಭಿನ್ನಾಭಿಪ್ರಾಯಗಳು, ಪರೋಕ್ಷ ಟೀಕೆಗಳು ಹಾಗೂ ನೇರ ವಾಗ್ದಾಳಿಗಳು ನಡೆದಿದ್ದವು. ಇದೀಗ ಆ ರಾಜಕೀಯ ವಾಕ್ಸಮರದ ಕೇಂದ್ರಬಿಂದು ಎಂ ಬಿ ಪಾಟೀಲ ಮತ್ತು ಸಿ ಎಸ್ ನಾಡಗೌಡರತ್ತ ತಿರುಗಿದೆ.

ಪಾಟೀಲರನ್ನೇ ಗುರಿಯಾಗಿಸಿಕೊಂಡ ವಾಗ್ದಾಳಿ?

ಜಿಲ್ಲಾ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ಎಂ ಬಿ ಪಾಟೀಲರ ವಿರುದ್ಧ ವಿವಿಧ ವಿಚಾರಗಳಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಕೆಲ ದಿನಗಳ ಹಿಂದಷ್ಟೇ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಚಿವ ಸ್ಥಾನ ದೊರೆಯದ ವಿಚಾರದಲ್ಲಿ ಎಂ ಬಿ ಪಾಟೀಲರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಅದೇ ಸಾಲಿಗೆ ಸಿ ಎಸ್ ನಾಡಗೌಡರ ಹೆಸರು ಸೇರ್ಪಡೆಯಾಗಿದೆ. ಆದರೆ ನಾಡಗೌಡ–ಪಾಟೀಲರ ನಡುವಿನ ಸಮರದ ತೀವ್ರತೆ ಮಾತ್ರ ಹಿಂದಿನ ಬೆಳವಣಿಗೆಗಳಿಗಿಂತ ಭಿನ್ನವಾಗಿದೆ. ಆರೋಪಕ್ಕೆ ಪ್ರತ್ಯಾರೋಪ, ಹೇಳಿಕೆಗೆ ತಿರುಗೇಟು ಎಂಬ ರೀತಿಯಲ್ಲಿ ಇಬ್ಬರು ನಾಯಕರೂ ಕೂಡ ಬಹಿರಂಗವಾಗಿಯೇ ಪರಸ್ಪರ ವಿರುದ್ಧ ನಿಂತಿರುವುದು ಕಾಂಗ್ರೆಸ್‌ನ ಮುಂದಿನ ರಾಜಕೀಯ ಲೆಕ್ಕಾಚಾರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಬಗ್ಗೆ ಚರ್ಚೆ ಆರಂಭವಾಗಿದೆ.

‘ಆಗ ಮಂತ್ರಿಗಿರಿ’…‘ಈಗ ಬರ’!

ಇಬ್ಬರು ನಾಯಕರ ನಡುವಿನ ರಾಜಕೀಯ ಅಂತರಕ್ಕೆ ಕಾರಣವೇನು ಎಂಬ ಪ್ರಶ್ನೆ ಸಹಜವಾಗಿಯೇ ಮೂಡಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆ ನಾಡಗೌಡರಿಗಿತ್ತು. ಆದರೆ ಜಿಲ್ಲೆಯಿಂದ ಎಂ ಬಿ ಪಾಟೀಲ ಹಾಗೂ ಶಿವಾನಂದ ಪಾಟೀಲರಿಗೆ ಅವಕಾಶ ದೊರೆಯಿತು. ಬಳಿಕ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಗಳ ಚರ್ಚೆ ನಡೆದ ಸಂದರ್ಭದಲ್ಲೂ ನಾಡಗೌಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸಿದ್ದರು. ಆದರೆ ಈ ಬಾರಿಯೂ ಅವಕಾಶ ಕೈತಪ್ಪಿತು. ಇದಕ್ಕೆ ಎಂ ಬಿ ಪಾಟೀಲರ ರಾಜಕೀಯ ಹಸ್ತಕ್ಷೇಪವೇ ಕಾರಣ ಎಂದು ನಾಡಗೌಡರು ಈ ಹಿಂದೆ ಆರೋಪಿಸಿದ್ದರು.

ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳು ಸೇರ್ಪಡೆಯಾಗದ ವಿಚಾರವನ್ನು ಮುಂದಿಟ್ಟುಕೊಂಡು ನಾಡಗೌಡರು ಎಂ ಬಿ ಪಾಟೀಲರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಈ ಪಟ್ಟಿಯಿಂದ ತಾಲೂಕುಗಳು ಹೊರಗುಳಿಯಲು ರಾಜಕೀಯ ಹಸ್ತಕ್ಷೇಪವೇ ಕಾರಣ ಎಂಬುದು ಅವರ ಆರೋಪ.

ಈವರೆಗೆ ಆರೋಪಗಳಿಗೆ ಹೆಚ್ಚು ಪ್ರತಿಕ್ರಿಯಿಸದೇ ಇದ್ದ ಎಂ ಬಿ ಪಾಟೀಲರು ಇದೀಗ ಮೌನ ಮುರಿದಿದ್ದು, “ನಾಡಗೌಡರು ನೀಚಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ನಾಡಗೌಡರ ವಯಸ್ಸಿನ ಬಗ್ಗೆಯೂ ಪ್ರಸ್ತಾಪಿಸಿ, ವಯೋಸಹಜ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸೂಕ್ತ ಚಿಕಿತ್ಸೆ ಅಗತ್ಯವಿದೆ ಎಂಬ ರೀತಿಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದರಿಂದ ಇಬ್ಬರು ನಾಯಕರ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ.

ಜಗಳದ ಲಾಭ ಯಾರಿಗೆ?

ಇಬ್ಬರು ಕಾಂಗ್ರೆಸ್ ನಾಯಕರ ನಡುವಿನ ರಾಜಕೀಯ ಕದನದ ನಡುವೆ ಮುದ್ದೇಬಿಹಾಳದ ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ. ನಾಡಗೌಡರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪರೋಕ್ಷವಾಗಿ ಎಂ ಬಿ ಪಾಟೀಲರ ಪರ ನಿಂತಿರುವ ನಡಹಳ್ಳಿ, ಈ ಬೆಳವಣಿಗೆಯನ್ನು ತಮ್ಮ ರಾಜಕೀಯ ಅಸ್ತ್ರವನ್ನಾಗಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ನ ಇಬ್ಬರು ಹಿರಿಯ ನಾಯಕರ ನಡುವಿನ ವೈಯಕ್ತಿಕ ಮತ್ತು ರಾಜಕೀಯ ಸಂಘರ್ಷಕ್ಕೆ ಇದೀಗ ಪ್ರತಿಪಕ್ಷದ ರಾಜಕೀಯ ಲೆಕ್ಕಾಚಾರವೂ ಸೇರಿಕೊಂಡಿದೆ.

‘ಸುಮ್ಮನಿರಿ’ ಎಂದರಾ ಸಿಎಂ?

ಈ ಎಲ್ಲ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಬ್ಬರು ನಾಯಕರಿಗೂ ಸುಮ್ಮನಿರುವಂತೆ ಸೂಚಿಸಿದ್ದಾರೆಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಪ್ರಶ್ನೆ ಈಗ ಒಂದೇ—ಪಾಟೀಲ–ನಾಡಗೌಡರ ನಡುವಿನ ಈ ವಾಕ್ಸಮರ ಇಲ್ಲಿಗೇ ನಿಲ್ಲುತ್ತದೆಯೇ? ಅಥವಾ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪ ಪಡೆಯುತ್ತದೆಯೇ? ಮುಂದಿನ ಚುನಾವಣೆಗಳ ಹಿನ್ನೆಲೆಯಲ್ಲಿ ವಿಜಯಪುರ ಕಾಂಗ್ರೆಸ್‌ನ ಒಳರಾಜಕೀಯಕ್ಕೆ ಈ ಸಂಘರ್ಷ ಯಾವ ತಿರುವು ನೀಡಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ಇದನ್ನೂ ಓದಿದ್ದೀರಾ? ತುಮಕೂರು | 33 ಡಿಗ್ರಿ ತಲುಪಿದ ಉಷ್ಣಾಂಶ; ರೈತರಿಗೆ ಬೆಳೆ ರಕ್ಷಣೆಯೇ ಸವಾಲು

ಒಟ್ಟಿನಲ್ಲಿ, ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ, ವಿಜಯಪುರ ಜಿಲ್ಲಾ ಕಾಂಗ್ರೆಸ್‌ನ ಒಳರಾಜಕೀಯದ ಮೇಲೆ ಪರಿಣಾಮ ಬೀರುವ ಬೆಳವಣಿಗೆಯಾಗಿ ಕಾಣಿಸಿಕೊಳ್ಳುತ್ತಿದೆ. ಹಳೆಯ ಅಸಮಾಧಾನಗಳಿಗೆ ಹೊಸ ರಾಜಕೀಯ ಕಾರಣಗಳು ಸೇರ್ಪಡೆಯಾಗುತ್ತಿರುವುದರಿಂದ ಇಬ್ಬರ ನಡುವಿನ ಅಂತರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ. ಸದ್ಯಕ್ಕೆ ಪಕ್ಷದ ವರಿಷ್ಠರು ಈ ಬೆಳವಣಿಗೆಯನ್ನು ಯಾವ ರೀತಿಯಲ್ಲಿ ನಿಭಾಯಿಸುತ್ತಾರೆ ಎಂಬುದೇ ಕುತೂಹಲದ ವಿಚಾರ.

ಇಬ್ಬರು ಹಿರಿಯ ನಾಯಕರ ನಡುವಿನ ಭಿನ್ನಮತಕ್ಕೆ ಶೀಘ್ರ ತೆರೆ ಬೀಳುತ್ತದೆಯೇ? ಇಲ್ಲವೇ? ಅಥವಾ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ರಾಜಕೀಯ ಸಮೀಕರಣಗಳನ್ನೇ ಬದಲಿಸುವ ಮಟ್ಟಕ್ಕೆ ಬೆಳೆಯುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಕೋಲಾರ | ಎಸ್‌ಐಆರ್ ವಿರುದ್ಧದ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರದ ಯತ್ನ: ಖಂಡನೆ

ಎಸ್‌ಐಆರ್‌ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ...

​ಚಿಂತಾಮಣಿ | ಪದವೀಧರರ ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...