ವಿಜಯಪುರ | ಅಭಿವೃದ್ಧಿ ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಬೇಡ: ಜಿಲ್ಲಾಧಿಕಾರಿ ಡಾ. ಆನಂದ ಕೆ

Date:

ವಿಜಯಪುರ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ಪಟ್ಟಣಗಳಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಮತ್ತು ಕುಡಿಯುವ ನೀರಿನ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಎರಡೂ ಪಟ್ಟಣಗಳಿಗೆ ಭೇಟಿ ನೀಡಿ ಜಲಧಾರೆ, ಅಮೃತ್ 2.0 ಹಾಗೂ ಹೆಬ್ಬಾಳ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಪರಿಶೀಲಿಸಿದ ಅವರು, ಪೈಪ್‌ಲೈನ್ ಅಳವಡಿಕೆಯಲ್ಲಿ ರೈತರ ಸಮಸ್ಯೆಗಳನ್ನು ಸಮನ್ವಯದಿಂದ ಬಗೆಹರಿಸಿ ಕಾಮಗಾರಿಗಳಿಗೆ ವೇಗ ನೀಡುವಂತೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ರಾಜಧಾನಿಯಲ್ಲಿ ಖಾಕಿ-ಕರಿ ಕೋಟ್ ಸಮರ; ಒಳಗಿನ ಹುಳುಕನ್ನು ಬೀದಿಗೆ...

ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ ಆರಂಭವಾದ ಈ ಜಗಳ, ಪೊಲೀಸ್ ಠಾಣೆಯೊಳಗೇ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ, ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಮತ್ತು ವರ್ಗಾವಣೆಯಲ್ಲಿ ಅಂತ್ಯಗೊಂಡಿದೆ. ಈ ಹೊತ್ತಿನಲ್ಲಿ ಈ...

ನಿಡಗುಂದಿಯ ಮೆಗಾ ಮಾರ್ಕೆಟ್ ಕಾಮಗಾರಿಯ ಸ್ಲ್ಯಾಬ್ ಅನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಗಡುವು ನೀಡಿದ ಜಿಲ್ಲಾಧಿಕಾರಿಗಳು, ಕಟ್ಟಡದ ಗುಣಮಟ್ಟ ಖಾತರಿಪಡಿಸಲು ಮೂರನೇ ವ್ಯಕ್ತಿಯಿಂದ ತಾಂತ್ರಿಕ ತಪಾಸಣೆ ನಡೆಸುವಂತೆ ಸೂಚಿಸಿದರು.

ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರದ ಗುಣಮಟ್ಟ ಪರಿಶೀಲಿಸಿ, ಸ್ವಚ್ಛತೆ ಹಾಗೂ ಮೆನು ಪ್ರಕಾರ ಗುಣಮಟ್ಟದ ಆಹಾರ ಒದಗಿಸಲು ಸೂಚಿಸಿದರು. ಅರಣ್ಯ ಇಲಾಖೆಯ ಅನುಮತಿ ಸೇರಿದಂತೆ ಬಾಕಿ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಒದಗಿಸುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ, ಜಲಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ರಾಮರಾವ್ ರಾಠೋಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನಿಲ್ ಅಂಬಾನಿಯ ₹23,100 ಕೋಟಿ ಆಸ್ತಿ ಜಪ್ತಿ ಮಾಡಿದ ಇಡಿ!

ಸಾಲದ ಸುಳಿಗೆ ಸಿಲುಕಿ ವಿವಾದಗಳ ಕೇಂದ್ರಬಿಂದುವಾಗಿರುವ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್...

ಭಾರತ-ನ್ಯೂಜಿಲೆಂಡ್‌ ODI: ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್‌; ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು ಹೇಗೆ ಗೊತ್ತೇ?

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ...

ಖಿನ್ನತೆ-ವಿಚ್ಛೇದನ ತಡೆಗೆ, ವೈವಾಹಿಕ ಜೀವನದ ಯಶಸ್ಸಿಗೆ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಿದ ಗೋವಾ ಕಾಲೇಜು

ಉದ್ಯೋಗ ಅಥವಾ ವೃತ್ತಿಪರ ಜೀವನ ರೂಪಿಸಿಕೊಳ್ಳಲು ವರ್ಷಗಟ್ಟಲೆ ಶಿಕ್ಷಣ ಪಡೆಯುವ ನಾವು,...