ವಿಜಯಪುರ |ನೀರಿನ ಹಂಚಿಕೆಯಲ್ಲಿ ತಾರತಮ್ಯ ಬೇಡ, ಕೊನೆಯ ಅಂಚಿನ ಪ್ರದೇಶಕ್ಕೂ ನೀರು ತಲುಪಿಸಿ: ಎಂ.ಬಿ. ಪಾಟೀಲ

Date:

ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ನಿಗದಿತ ಹಂಚಿಕೆಯಂತೆ ಕೊನೆಯ ಅಂಚಿನ ಪ್ರದೇಶಗಳಿಗೂ ನೀರು ತಲುಪಿಸುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ. ಪಾಟೀಲ ಸೂಚಿಸಿದರು.

- Advertisement -

ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಸಂದರ್ಶನ | ಸಡಿಲಗೊಂಡ ಪಿಎಫ್ ನಿಯಮ: ಕಾರ್ಮಿಕರ ಕೈಹಿಡಿಯುವುದೇ...

ತುರ್ತು ಸಂದರ್ಭಗಳಲ್ಲಿ ಪಿಎಫ್ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಇಪಿಎಫ್‌ಒ ಸರಳಗೊಳಿಸಿರುವುದು ಕಾರ್ಮಿಕರಿಗೆ ತಕ್ಷಣದ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಈ ನಿಯಮ ಸಡಿಲಿಕೆಯಿಂದ ಕಾರ್ಮಿಕರ ನಿವೃತ್ತಿ ಬದುಕಿನ ಭದ್ರತಾ ನಿಧಿ ಕರಗುವ ಅಪಾಯವಿದೆ...

ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿದ್ದು, ಆಲಮಟ್ಟಿ ಜಲಾಶಯದಲ್ಲಿಯೂ ನೀರಿನ ಸಂಗ್ರಹ ಕಡಿಮೆಯಾಗಿದೆ. ಜಿಲ್ಲೆಗೆ ಕುಡಿಯುವ ನೀರಿಗಾಗಿ ನಿಗದಿಪಡಿಸಿರುವ ಎರಡು ಟಿಎಂಸಿ ನೀರನ್ನು ಸಮರ್ಪಕವಾಗಿ ಬಳಸಿಕೊಂಡು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ಎಲ್ಲ ಪ್ರದೇಶಗಳಿಗೂ ನೀರು ಪೂರೈಸಬೇಕು. ಜಲಧಾರೆ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ ಅನುಷ್ಠಾನಕ್ಕೆ ವೇಗ ನೀಡಲು ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದರು.

ಬರ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಗ್ರಾಮ ಪಂಚಾಯಿತಿವಾರು ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮೇವು ಹೊರರಾಜ್ಯಗಳಿಗೆ ಸಾಗಣೆಯಾಗದಂತೆ ನಿಗಾ ವಹಿಸಬೇಕು. ಬೆಳೆ ವಿಮೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ಹಾಗೂ ಮಧ್ಯವರ್ತಿಗಳ ಹಾವಳಿ ತಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಸಿ.ಎಸ್. ನಾಡಗೌಡ ಹಾಗೂ ಅಶೋಕ ಮನಗೂಳಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರ, ಕೆರೆ ತುಂಬಿಸುವ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ನೀರಿನ ಸಮಾನ ಹಂಚಿಕೆಗೆ ಒತ್ತು ನೀಡುವಂತೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಜಿಲ್ಲೆಯ ನೀರಿನ ಲಭ್ಯತೆ, ಕೆರೆ ತುಂಬಿಸುವ ಯೋಜನೆಗಳು, ಜಲಧಾರೆ ಯೋಜನೆಯ ಪ್ರಗತಿ ಹಾಗೂ ಬರ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಆನಂದ ಪ್ರಕಾಶ ಮೀನಾ, ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂದರ್ಶನ | ಸಡಿಲಗೊಂಡ ಪಿಎಫ್ ನಿಯಮ: ಕಾರ್ಮಿಕರ ಕೈಹಿಡಿಯುವುದೇ ಅಥವಾ ಭವಿಷ್ಯದ ಬುಡಕ್ಕೆ ಕೊಡಲಿಯೇ?

ತುರ್ತು ಸಂದರ್ಭಗಳಲ್ಲಿ ಪಿಎಫ್ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಇಪಿಎಫ್‌ಒ ಸರಳಗೊಳಿಸಿರುವುದು ಕಾರ್ಮಿಕರಿಗೆ...

ಲಡಾಖ್‌: ಎಂಟು ವರ್ಷಗಳ ಬಳಿಕ ಪಂಚಾಯಿತಿ, ಪುರಸಭೆ ಚುನಾವಣೆ

ಜಮ್ಮು ಮತ್ತು ಕಾಶ್ಮೀರದಿಂದ ಪ್ರತ್ಯೇಕಗೊಂಡು ಕೇಂದ್ರಾಡಳಿತ ಪ್ರದೇಶವಾಗಿ ಏಳು ವರ್ಷಗಳಿಗೂ ಹೆಚ್ಚು...

ಪೊಲೀಸ್ ಠಾಣೆಯಲ್ಲಿ ‘ಗಣಪತಿ ಹೋಮ’; ಭುಗಿಲೆದ್ದ ರಾಜಕೀಯ ವಿವಾದ

ಪೊಲೀಸ್ ಠಾಣೆಯ ಒಳಗೇ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ...