ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

Date:

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟನೆ ನೀಡಿದ್ದಾರೆ.ಮಹಾರಾಷ್ಟ್ರಕ್ಕೆ ಸೇರುವ ಯಾವುದೇ ಉದ್ದೇಶ ತಮ್ಮ ಹೇಳಿಕೆಯ ಹಿಂದೆ ಇಲ್ಲ. ತಮ್ಮ ಮತಕ್ಷೇತ್ರದ ಜನರು ಎದುರಿಸುತ್ತಿರುವ ಜಲಸಂಕಷ್ಟದ ತೀವ್ರತೆಯನ್ನು ಸರ್ಕಾರದ ಗಮನಕ್ಕೆ ತರಲು ಕೆಡಿಪಿ ಸಭೆಯಲ್ಲಿ ಆ ರೀತಿಯಾಗಿ ಮಾತನಾಡಿದ್ದಾಗಿ ಅವರು ತಿಳಿಸಿದ್ದಾರೆ.

- Advertisement -

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಭಾಗದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ನೀರಿಲ್ಲದೆ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ಪಕ್ಕದ ಮಹಾರಾಷ್ಟ್ರದಲ್ಲಿ ನೀರಿನ ಲಭ್ಯತೆ ಇದೆ. ಹೀಗಾಗಿ ಮಹಾರಾಷ್ಟ್ರದಿಂದ ನಮಗೆ ನೀರು ಬಿಡಬೇಕು ಎಂಬುದು ಗಡಿಯಂಚಿನ ಜನರ ಪ್ರಮುಖ ಬೇಡಿಕೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

“ಗಡಿಯಲ್ಲಿರುವ ನಮ್ಮ ಜನರ ಭಾವನೆಗಳೇ ಹಾಗಿವೆ. ಅಲ್ಲಿನ ಜನರು ತಮ್ಮ ಸಂಕಷ್ಟವನ್ನು ಆ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ನಾವೆಲ್ಲ ಕನ್ನಡಿಗರು. ಕನ್ನಡದ ಬಗ್ಗೆ ನಮಗೆ ವಿಶೇಷ ಗೌರವವಿದೆ. ಕನ್ನಡಿಗರಾಗಿ ನಾವು ಮಾದರಿಯಾಗಿದ್ದೇವೆ. ನೀರಿನ ಭವಣೆಯ ತೀವ್ರತೆಯನ್ನು ಸರ್ಕಾರಕ್ಕೆ ತಿಳಿಸುವ ಉದ್ದೇಶದಿಂದ ಆ ರೀತಿ ಮಾತನಾಡಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಭೀಮಾ ನದಿ ತೀರದಲ್ಲಿ ಜಮೀನು ಹೊಂದಿ ಕಬ್ಬು ಬೆಳೆದಿರುವ ರೈತರಿಗೆ ನೀರಿನ ಸಮಸ್ಯೆಯ ಗಂಭೀರತೆ ಚೆನ್ನಾಗಿ ಅರ್ಥವಾಗುತ್ತದೆ. ನಮ್ಮ ಭಾಗದಲ್ಲಿ ಬರದ ತೀವ್ರತೆ ಹೆಚ್ಚಿದ್ದು, ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಸಂಕಷ್ಟದ ವಿಚಾರ ಬಂದಾಗ ಅವರ ಪರವಾಗಿ ಧ್ವನಿ ಎತ್ತಲು ನಾನು ಯಾವುದಕ್ಕೂ ಹಿಂಜರಿಯುವುದಿಲ್ಲ ಎಂದು ಹೇಳಿದರು.

ಮಹಾರಾಷ್ಟ್ರ ನಮ್ಮ ಸಹೋದರ ರಾಜ್ಯ. ಅಲ್ಲಿನ ಕನ್ನಡಿಗರಿಗೂ ಕರ್ನಾಟಕದೊಂದಿಗೆ ಭಾವನಾತ್ಮಕ ಸಂಬಂಧವಿದೆ. ನಮ್ಮ ಮನೆಯೂ ಭೀಮಾ ನದಿ ತೀರದಲ್ಲಿಯೇ ಇದೆ. ಬರಗಾಲದಿಂದ ಜನರು ಅನುಭವಿಸುತ್ತಿರುವ ನೋವು ಮತ್ತು ನೀರಿನ ಅಭಾವದ ತೀವ್ರತೆ ನಮಗೆ ತಿಳಿದಿದೆ. ಹೀಗಾಗಿಯೇ ಕೆಡಿಪಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ಈ ವಿಚಾರವನ್ನು ತಂದಿದ್ದೇನೆ ಎಂದರು.“ನಾನು ನೇರವಾಗಿ ಮಾತನಾಡುವ ವ್ಯಕ್ತಿ. ಜನರ ಸಮಸ್ಯೆಗಾಗಿ ಮಾತನಾಡಿದ್ದೇನೆ.

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಮಹಾರಾಷ್ಟ್ರಕ್ಕೆ ಸೇರುತ್ತೇವೆ ಎಂಬ ಅರ್ಥದಲ್ಲಿ ನಾನು ಮಾತನಾಡಿಲ್ಲ. ಪಕ್ಕದ ಮನೆಯಲ್ಲಿ ನೀರಿದೆ, ನಮ್ಮ ಮನೆಯಲ್ಲಿ ನೀರಿಲ್ಲ ಎಂಬುದು ನಮ್ಮ ಮತಕ್ಷೇತ್ರದ ಜನರ ಭಾವನೆ. ಆ ನೋವನ್ನು ವ್ಯಕ್ತಪಡಿಸುವ ಸಂದರ್ಭದಲ್ಲಿ ಹಾಗೆ ಹೇಳಿದ್ದೇನೆ” ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟನೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...