ವಿಜಯಪುರ | ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

Date:

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು, ಅಡಿಗೆ ಸಹಾಯಕರು, ರಾತ್ರಿ ಕಾವಲುಗಾರರು, ಸ್ವಚ್ಛತಾ ಸಿಬ್ಬಂದಿ, ಡಿ-ಗ್ರೂಪ್ ನೌಕರರು ಮತ್ತು ಡೇಟಾ ಎಂಟ್ರಿ ಆಪರೇಟರ್‌ ಸಿಬ್ಬಂದಿಗಳಿಗೆ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಆಗ್ರಹಿಸಿದರು.

- Advertisement -

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ವಿಜಯಪುರ ಜಿಲ್ಲಾ ಸಮಿತಿ ನೇತೃತ್ವದೊಂದಿಗೆ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಬಳಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

“ವಸತಿನಿಲಯಗಳಲ್ಲಿ ಕಳೆದ 15ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಹೊರಗುತ್ತಿಗೆ ನೌಕರರು ಕನಿಷ್ಠ ವೇತನ ಸೇರಿದಂತೆ ಮೂಲಭೂತ ಕಾರ್ಮಿಕ ಹಕ್ಕುಗಳಿಂದ ವಂಚಿತರಾಗಿದ್ದಾರೆ” ಎಂದು ಆರೋಪಿಸಿದರು.

ಜಿಲ್ಲಾಧ್ಯಕ್ಷ ಹುಲಗಪ್ಪ ಚಲವಾದಿ ಮಾತನಾಡಿ, “ಕಾರ್ಮಿಕ ಇಲಾಖೆಯ 2026ರ ಮೇ 22ರ ಅಂತಿಮ ಅಧಿಸೂಚನೆಯಂತೆ ಕನಿಷ್ಠ ವೇತನವನ್ನು ತಕ್ಷಣದಿಂದಲೇ ಜಾರಿಗೊಳಿಸಬೇಕು. ವಾರಕ್ಕೆ ಒಂದು ದಿನ ಕಡ್ಡಾಯ ರಜೆ ನೀಡಬೇಕು. ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿಸಬೇಕು. ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳನ್ನು ಎಲ್ಲ ಅರ್ಹ ಸಿಬ್ಬಂದಿಗೆ ಕಡ್ಡಾಯವಾಗಿ ಕಲ್ಪಿಸಿ, ನಿಯಮ ಉಲ್ಲಂಘಿಸುವ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಬಿಸಿಎಂ ಇಲಾಖೆಯಲ್ಲಿ 2018ರ ಆಯುಕ್ತರ ಆದೇಶದಂತೆ ಹಳೆಯ ಸಿಬ್ಬಂದಿಯನ್ನು ಮುಂದುವರೆಸಬೇಕು. ಹೊರಗುತ್ತಿಗೆ ಸಿಬ್ಬಂದಿಗೆ ವಸತಿ ಸೌಲಭ್ಯ, ನಿವೃತ್ತಿವರೆಗೆ ಸೇವಾ ಭದ್ರತೆ ಕಲ್ಪಿಸಬೇಕು. ಯಾವುದೇ ಸಮರ್ಪಕ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕುವ ಕ್ರಮವನ್ನು ನಿಲ್ಲಿಸಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಅಧಿಕಾರಿಗಳು, ಗುತ್ತಿಗೆ ಏಜೆನ್ಸಿಗಳು ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಕುಂದುಕೊರತೆ ಸಭೆ ನಡೆಸಬೇಕು. ವಿವಿಧ ಇಲಾಖೆಗಳಲ್ಲಿ ಒಂದೇ ಮಾದರಿಯ ಕನಿಷ್ಠ ವೇತನ ಜಾರಿಗೊಳಿಸಿ, ಜಿಲ್ಲಾ ಮಟ್ಟದ ಜಂಟಿ ಸಭೆ ಮೂಲಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿದ್ದೀರಾ? ಬಸವನ ಬಾಗೇವಾಡಿ | ಲೋಕ್‌ ಅದಾಲತ್‌ನಲ್ಲಿ ಸಂಧಾನದ ಮೂಲಕ 1,450 ಪ್ರಕರಣಗಳ ಇತ್ಯರ್ಥ

ಪ್ರತಿಭಟನೆಯಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ರಾಜೇಶ ದೇಶಪಾಂಡೆ, ಸಂಜೀವ ಹಾದಿಮನಿ, ಸುರೇಖಾ ರಜಪೂತ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಸಂಘದ ಪದಾಧಿಕಾರಿಗಳು ಹಾಗೂ ಹೊರಗುತ್ತಿಗೆ ನೌಕರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

ರಾಷ್ಟ್ರಪತಿ ಭವನವು ಸೋಮವಾರ ಹೊರಡಿಸಿದ ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಯವರು ಕರ್ನಾಟಕ...

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...