ವಿಜಯಪುರ | ಸುಳ್ಳು ಸುದ್ದಿಗೆ ಬೆರಗಾಗಿ ಇ-ಕೆವೈಸಿಗೆ ಮುಗಿಬಿದ್ದ ಮಂದಿ

Date:

ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಮುಂದುಗಡೆ ನೂರಾರು ಗೃಹಿಣಿಯರು ಸುಳ್ಳು ಸುದ್ದಿಗೆ ಬಲಿಯಾಗಿ ಬೆಳ್ಳಂ ಬೆಳಿಗ್ಗೆ ಎಲ್ಲ ಕೆಲಸಗಳನ್ನು ಬಿಟ್ಟು ಇ-ಕೆವೈಸಿ ಮಾಡಿಸಲು ಬಂದಿದ್ದೇವೆಂದು ಹೇಳಿದ ಸಾರ್ವಜನಿಕರು ವಾಸ್ತವ ತಿಳಿಸಿದ ಕೂಡಲೇ ಸುಳ್ಳು ಸುದ್ದಿ ಹರಡುವವರ ವಿರುದ್ಧ ಇಡಿ ಶಾಪ ಹಾಕಿದರು.

- Advertisement -

ಡಿಸೆಂಬರ್ 31ರ ಒಳಗಡೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಏಜೆನ್ಸಿ ಬಳಿ ಹೋಗಿ ಇ-ಕೆವೈಸಿ ಮಾಡಿಸಬೇಕು. ಮಾಡಿಸಿದವರಿಗೆ ಜನವರಿ 1ರಿಂದ ಸಬ್ಸಿಡಿ ಬರುತ್ತದೆ. ಈಗ ಇರುವ ಸಿಲೆಂಡರಿಗೆ ₹93 ರಿಂದ ₹500 ಸಿಗುತ್ತದೆ. ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಕಮರ್ಷಿಯಲ್ ಆಗಿ ಮಾರ್ಪಟ್ಟು ₹1,400ಕ್ಕೆ ಸಿಲಿಂಡರ್ ಪಡೆದುಕೊಳ್ಳಬೇಕಾಗುತ್ತದೆಂಬ ಸುಳ್ಳು ಸುದ್ದಿಗೆ ಸ್ಪಷ್ಟೀಕರಣ ದೊರೆತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಎದುರು ಇ-ಕೆವೈಸಿ ಮಾಡಿಸಲು ಸ್ಥಳಿಯರು ಮುಗಿಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಕವಿತಾ ಎಂಟರ್‌ಪ್ರೈಸಸ್‌ ಗ್ಯಾಸ್ ಏಜೆನ್ಸಿಯ ನಿರ್ವಾಹಕ ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದು, “ಉಜ್ವಲ ಯೋಜನೆ ಅಡಿ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರು ಮಾತ್ರ ಡಿಸೆಂಬರ್ 31ರ ಒಳಗೆ ಇ-ಕೆವೈಸಿ ಮಾಡಿಸಬೇಕು. ಉಳಿದ ಗ್ರಾಹಕರು ಇ-ಕೆವೈಸಿ ಮಾಡಿಸಬೇಕಾದ ಅಗತ್ಯವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಹೇಮಲತಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ಇ-ಕೆವೈಸಿ ಮಾಡಿದ ಕ್ಷಣ ₹500ಕ್ಕೆ ಗ್ಯಾಸ್ ಸಿಲಿಂಡರ್ ಸಿಗುತ್ತದೆ ಎಂಬುದು ಸುಳ್ಳು ಸುದ್ದಿ. ವಾಟ್ಸಪ್‌ನಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಉರುಳಿಲ್ಲ. ಉಜ್ವಲ ಯೋಜನೆಯ ಗ್ರಾಹಕರಿಗೆ ಮಾತ್ರ ಇ-ಕೆವೈಸಿ ಕಡ್ಡಾಯವಾಗಿದೆ. ಉಳಿದ ಗ್ರಾಹಕರು ಗೊಂದಲಕ್ಕೆ ಒಳಗಾಗಬಾರದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...