ವಿಜಯಪುರ |SIR ರದ್ದತಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ

Date:

ಸಂವಿಧಾನ ದಿನದ ಅಂಗವಾಗಿ ಕೇಂದ್ರ ಸರ್ಕಾರದ SIR (Special Intensive Revision) ಪ್ರಕ್ರಿಯೆ ವಿರೋಧಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

ಎದ್ದೇಳು ಕರ್ನಾಟಕ, SIR ಹೋರಾಟ ಸಮಿತಿ, ಮತ ಕಾವಲು ಸಮಿತಿ ಹಾಗೂ ವಿವಿಧ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯ ಹೋರಾಟಗಾರರು ಹಾಗೂ ಸಾರ್ವಜನಿಕರು ಪಾಲ್ಗೊಂಡು, ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಗತಿಪರ ಸಂಘಟನೆಗಳ ಮುಖಂಡ ಪ್ರಭುಗೌಡ ಪಾಟೀಲ, ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು SIR ಪ್ರಕ್ರಿಯೆಯ ಮೂಲಕ ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಂತಹ ಕ್ರಮಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಅಪಾಯ ಹೊಂದಿವೆ. ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಯಾವುದೇ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಪ್ರತಿಭಟನಾಕಾರರು ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕು, ಮತದಾರರಿಗೆ ಅನ್ಯಾಯವಾಗುವ SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಚುನಾವಣಾ ಆಯೋಗದ ಕಾಯ್ದೆಯ ಸೆಕ್ಷನ್ 23ಕ್ಕೆ ಮಾಡಿರುವ 2023ರ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಂತರ ಮಾತನಾಡಿದ ಸುರೇಶ್ ಜಿ.ಬಿ., SIR ಪ್ರಕ್ರಿಯೆಯಲ್ಲಿನ ಲೋಪದೋಷಗಳು, ಗೊಂದಲಗಳು ಹಾಗೂ ಮತದಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. SIR ಪ್ರಕ್ರಿಯೆಯನ್ನು ರದ್ದುಗೊಳಿಸುವುದರ ಜೊತೆಗೆ ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಇದೀಗ ಚುನಾವಣಾ ಆಯೋಗ SSR ಕುರಿತು ಮಾತನಾಡುತ್ತಿರುವುದು SIR ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಭಿಪ್ರಾಯಪಟ್ಟರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರವನ್ನು ಬಾಲು ಜೇವರ ಓದಿದರು. ಇದೇ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಅಜಮನಿ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಸಂವಿಧಾನದ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಭ್ರಾತೃತ್ವದ ಆಶಯಗಳನ್ನು ಸ್ಮರಿಸಿದರು.

ಪ್ರತಿಭಟನೆಯಲ್ಲಿ ಫಯಾಜ್ ಕಲಾದಗಿ, ಅಬ್ದುಲ್ ಖಾದೀರ್, ಅಕ್ರಮ್ ಮಶಾಲ್ಕರ್, ಬಾಲು ಜೇವರ, ಶಮ್ಸುದ್ದೀನ್, ಹಮೀದಾ ಪಟೇಲ್, ಅಕ್ಷಯ್ ಕುಮಾರ್ ಅಜಮನಿ, ಮಲ್ಲಿಕಾರ್ಜುನ ಬಟಗಿ, ವಸಂತ ಬಾಳಂದಗಿ, ಎಹ್ಸಾನುಲ್ಲಾ, ಆಕಿಬ್ ರಝಾ, ಮುರ್ತಝಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕ್ಷಣ ದಾನವಲ್ಲ, ಮೂಲಭೂತ ಹಕ್ಕು; ಫ್ರೀಡಂ ಪಾರ್ಕ್‌ನಲ್ಲಿ ಮೊಳಗಿದ ಘೋಷ

ಇಂದು ಸಂವಿಧಾನದ ದಿನ. ಸಂವಿಧಾನದ ಆಶಯಗಳನ್ನು ಕಾಪಾಡಾಲು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಉತ್ತರ ಪ್ರದೇಶ: 25 ಲಕ್ಷ ಸರ್ಕಾರಿ ಉದ್ಯೋಗ, ಪದವೀಧರರಿಗೆ ಭತ್ಯೆ; ಅಖಿಲೇಶ್ ಯಾದವ್ ‘ಪಿಡಿಎ ಪ್ರಣಾಳಿಕೆ’ ಬಿಡುಗಡೆ

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಸಮಾಜವಾದಿ ಪಕ್ಷದ (ಎಸ್‌ಪಿ)...

ಬೀದರ್ | ಸಂವಿಧಾನ ಎಲ್ಲರ ಮನೆಯಲ್ಲಿ ಇರಲಿ

ಸಂವಿಧಾನದ ಪ್ರತಿ ದೇಶದ ಪ್ರತಿಯೊಬ್ಬರ ಮನೆಯಲ್ಲೂ ಇರಬೇಕು ಎಂದು ಚಿಂತಕ ಶಾಮಸುಂದರ್...

ಶಾಲೆಯಲ್ಲಿ ಹಿಜಾಬ್ ನಿಷೇಧ; ಅಲಹಾಬಾದ್ ಹೈಕೋರ್ಟ್ ತೀರ್ಪು ಪೂರ್ವನಿದರ್ಶನವಲ್ಲ: ಸುಪ್ರೀಂ ಸ್ಪಷ್ಟನೆ

ಶಾಲೆಯಲ್ಲಿ ಹಿಜಾಬ್ ಧರಿಸುವ ಹಕ್ಕನ್ನು ನಿರಾಕರಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು...