ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಹಿಳಾ ಸರ್ವಸದಸ್ಯರ ಸಭೆಯಲ್ಲಿ ವಿಜಯಪುರದ ಪ್ರತಿಭಾ ಹೊಸಮನಿ ಅವರನ್ನು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಆಯ್ಕೆ ಮಾಡಲಾಗಿದೆ.

- Advertisement -

ಈ ಆಯ್ಕೆಯ ಕುರಿತು ಸಂತಸ ವ್ಯಕ್ತಪಡಿಸಿರುವ ಪ್ರತಿಭಾ ಹೊಸಮನಿ, ತಮ್ಮ ಮೇಲೆ ವಿಶ್ವಾಸವಿಟ್ಟು ಮಹತ್ವದ ಜವಾಬ್ದಾರಿ ನೀಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ಆಯ್ಕೆಯು ಕೇವಲ ಒಂದು ಹುದ್ದೆಗೆ ಸೀಮಿತವಾಗಿಲ್ಲ. ಮಹಿಳೆಯರ ಹಕ್ಕುಗಳ ರಕ್ಷಣೆ, ಶೋಷಿತ ಸಮುದಾಯಗಳ ಧ್ವನಿಯಾಗಿ ಕಾರ್ಯನಿರ್ವಹಿಸುವುದು ಹಾಗೂ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆಯ ಸಮಾಜದ ಕನಸನ್ನು ನನಸಾಗಿಸುವ ಮಹತ್ತರ ಜವಾಬ್ದಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ ಸ್ವಾಭಿಮಾನ, ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗಾಗಿ ಪ್ರಾಮಾಣಿಕತೆ, ಧೈರ್ಯ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಪ್ರತಿಭಾ ಹೊಸಮನಿ ಸಂಕಲ್ಪ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಅಸಮಾನತೆ, ಶೋಷಣೆ ಮತ್ತು ಅನ್ಯಾಯದ ವಿರುದ್ಧ ಸಂಘಟಿತ ಹೋರಾಟಕ್ಕೆ ಬಲ ತುಂಬುವುದು ತಮ್ಮ ಆದ್ಯತೆಯಾಗಲಿದೆ ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಮಹಿಳಾ ಸರ್ವಸದಸ್ಯರ ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯೆ ಇಂದಿರಾ ಕೃಷ್ಣಪ್ಪ, ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ, ರಾಜ್ಯ ಖಜಾಂಚಿ ಸಿದ್ದಪ್ಪ ಕಾಂಬಳೆ, ವಿಭಾಗೀಯ ಸಂಚಾಲಕ ಸಂಜು ಕಂಬಾಗಿ, ವಿಜಯಪುರ ಜಿಲ್ಲಾ ಸಂಚಾಲಕ ಶಿವು ಮೇಲಿನಮನಿ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಸಾವಿರಾರು ಮಹಿಳೆಯರು ಭಾಗವಹಿಸಿದ್ದರು.

ಪ್ರತಿಭಾ ಹೊಸಮನಿ ಅವರ ಆಯ್ಕೆಗೆ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದು, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳ ಈಡೇರಿಕೆಗೆ ಅವರ ಸಂಘಟನಾ ಕಾರ್ಯ ಮತ್ತಷ್ಟು ಬಲ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...