ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

Date:

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ ಉದ್ದೇಶದಿಂದ ವಿಜಯಪುರ ಜಿಲ್ಲೆಯಲ್ಲಿ 10ರಿಂದ 12 ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಕೈಗಾರಿಕಾ ಯೋಜನೆಗಳಿಗೆ ಭೂಮಿ ನೀಡಿದ ರೈತ ಕುಟುಂಬಗಳ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ₹1,600 ಕೋಟಿಗೂ ಅಧಿಕ ಹೂಡಿಕೆಯಲ್ಲಿ ಸ್ಥಾಪನೆಯಾಗಲಿರುವ ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ ಲಿಮಿಟೆಡ್‌ನ ಬೃಹತ್ ಕೈಗಾರಿಕಾ ಘಟಕಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಜಿಲ್ಲೆಯಲ್ಲಿ ಟೆರಾ ಸರ್ಕ್ಯೂಟ್ಸ್, ಜನಿತ್ ಎನರ್ಜಿ ಸೊಲ್ಯೂಷನ್ಸ್, ಹೈಟೆಕ್ ಪೈಪ್ಸ್ ಸೇರಿದಂತೆ ಹಲವು ಕಂಪನಿಗಳು ಕೈಗಾರಿಕೆ ಸ್ಥಾಪನೆಗೆ ಮುಂದಾಗಿವೆ. ಮೇಟಾ ಗ್ರೂಪ್, ಯೂಲರ್ ಮೋಟಾರ್ಸ್, ಸುಜ್ಞಾನ್ ಎನರ್ಜಿ ಸೇರಿದಂತೆ ಪ್ರತಿಷ್ಠಿತ ಸಂಸ್ಥೆಗಳೂ ಹೂಡಿಕೆಗೆ ಆಸಕ್ತಿ ತೋರಿಸಿವೆ. ಇಟ್ಟಂಗಿಹಾಳದಲ್ಲಿ ಕೆಎಸ್‌ಡಿಎಲ್‌ನ ಎರಡನೇ ಘಟಕ ಸ್ಥಾಪನೆಯಿಂದ ಸುಮಾರು 500 ಜನರಿಗೆ ಉದ್ಯೋಗ ದೊರೆಯಲಿದೆ ಎಂದು ತಿಳಿಸಿದರು.

ದಾಳಿಂಬೆ, ನಿಂಬೆ, ದ್ರಾಕ್ಷಿ ಸೇರಿದಂತೆ ಜಿಲ್ಲೆಯ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ಕಲ್ಪಿಸಲು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು. ನೀರಾವರಿ, ಕೈಗಾರಿಕೆ, ಹೈನುಗಾರಿಕೆ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ವಿಜಯಪುರವನ್ನು ಬಾರಾಮತಿ ಮಾದರಿಯ ಅಭಿವೃದ್ಧಿ ಜಿಲ್ಲೆಯನ್ನಾಗಿ ರೂಪಿಸುವ ಗುರಿ ಇದೆ ಎಂದರು.

ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಮುಳವಾಡದಲ್ಲಿ ರಿಲಯನ್ಸ್‌ನಂತಹ ಬೃಹತ್ ಸಂಸ್ಥೆ ಕೈಗಾರಿಕಾ ಘಟಕ ಸ್ಥಾಪಿಸುತ್ತಿರುವುದು ಈ ಭಾಗದ ಅಭಿವೃದ್ಧಿಯಲ್ಲಿ ಐತಿಹಾಸಿಕ ಮೈಲಿಗಲ್ಲಾಗಿದೆ. ಭೂಮಿ ಕಳೆದುಕೊಂಡ ರೈತ ಕುಟುಂಬಗಳ ಯುವಕರು ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು. ಕೈಗಾರಿಕೆಗಳ ಬೆಳವಣಿಗೆಯಿಂದ ಸ್ಥಳೀಯ ಕೃಷಿ ಉತ್ಪನ್ನಗಳಿಗೂ ಮಾರುಕಟ್ಟೆ ದೊರೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ವಿಠಲ ಕಟಕದೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಮಾಜಿ ಶಾಸಕ ರಾಜು ಆಲಗೂರ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳು, ರಿಲಯನ್ಸ್ ಸಂಸ್ಥೆಯ ಪ್ರತಿನಿಧಿಗಳು, ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ ಮೋದಿ ಸರ್ಕಾರ?

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ...

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ ಹಿಂದಿನ ತರ್ಕವೇನು?

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ...

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...