ವಿಜಯಪುರ | ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ: ಔದ್ರಾಮ

Date:

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಗಸ್ಟ್ 20ರಂದು ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅಚ್ಚುಕಟ್ಟಾಗಿ, ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜ ಅರಸು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ಆಗಸ್ಟ್ 20ರಂದು ಬೆಳಗ್ಗೆ 9.30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದೆ. ನಗರದ ಪ್ರಮುಖ ವೃತ್ತಗಳ ಮೂಲಕ ಮೆರವಣಿಗೆ ಸಾಗಲಿದ್ದು, ಬಳಿಕ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಡಿ. ದೇವರಾಜ ಅರಸು ಅವರ ಜೀವನ, ಸಾಧನೆ ಹಾಗೂ ಸಾಮಾಜಿಕ ನ್ಯಾಯಕ್ಕೆ ಅವರು ನೀಡಿದ ಕೊಡುಗೆ ಕುರಿತು ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು” ಎಂದು ತಿಳಿಸಿದರು.

ಜಯಂತಿ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಆಸನ, ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಸೇರಿದಂತೆ ಎಲ್ಲ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಮುಂಚಿತವಾಗಿಯೇ ಎಲ್ಲ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ ಜನಪರ ನಾಯಕರು. ಅವರ ಸಾಮಾಜಿಕ ಸುಧಾರಣೆಗಳು ಹಾಗೂ ಜನಪರ ಕಾರ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಜಯಂತಿ ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು” ಎಂದು ಹೇಳಿದರು.

ಸಭೆಯಲ್ಲಿ ಡಿವೈಎಸ್ಪಿ ನಾಗರಾಜ ಜಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹನುಮಂತ ಕಾಲತಿಪ್ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಿರ್ಮಲ ಸುರಪುರ, ತಾಲೂಕು ಕಲ್ಯಾಣಾಧಿಕಾರಿ ಯಾಸಿನ್ ಭಗವಾನ್‌, ತಾಲೂಕು ವಿಸ್ತರಣಾಧಿಕಾರಿ ರಾಮಲಿಂಗ ಭೈರವಾಡಗಿ, ಜಿಲ್ಲಾ ಪತ್ರಾಂಕಿತ ವ್ಯವಸ್ಥಾಪಕಿ ಆರ್.ಜಿ. ಗುನ್ನಾಪುರ, ಜಿಲ್ಲಾ ಆರೋಗ್ಯ ಇಲಾಖೆಯ ಉಪ ಶಿಕ್ಷಣಾಧಿಕಾರಿ ರೇಖಾ ದಶವಂತ ಸೇರಿದಂತೆ ಅಡಿವೆಪ್ಪ ಸಾಲಗಲ್ಲ, ಸೋಮನಗೌಡ ಕಲ್ಲೂರ, ಗಿರೀಶ್ ಕುಲಕರ್ಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಉತ್ತರ ಕನ್ನಡ | ನಾಳೆ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ

ಉತ್ತರ ಕನ್ನಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್.26ರಂದು ಬೆಳಿಗ್ಗೆ 10.30ಕ್ಕೆ...

ಉಡುಪಿ | ಶಿಕ್ಷಣ, ಹೋರಾಟ, ಸಂಘಟನೆ ಸಮಾಜದ ಪ್ರಗತಿಗೆ ಮುಖ್ಯ: ಸಚಿವ ಶಿವರಾಜ ತಂಗಡಗಿ

ಮೊಗವೀರ ಸಮಾಜ ಶ್ರಮಜೀವಿಗಳ ಸಮಾಜ ವಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ...