ವಿಜಯಪುರ | ಆ.15ರ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆ: ಅಧಿಕಾರಿಗಳಿಗೆ ಡಿಸಿ ನಿರ್ದೇಶನ

Date:

ಆಗಸ್ಟ್‌ 15ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಸಮಾರಂಭಕ್ಕೆ ಆಗಮಿಸುವ ಗಣ್ಯರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ, ವಾಹನ ನಿಲುಗಡೆ, ಭದ್ರತಾ ವ್ಯವಸ್ಥೆ ಹಾಗೂ ಆರೋಗ್ಯ ಸೇವೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಧ್ವಜಾರೋಹಣ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಭಾಗವಹಿಸುವಿಕೆ ಕುರಿತು ಸಮರ್ಪಕ ಪೂರ್ವಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದ ಅವರು, ಇದೇ ದಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯೂ ಇರುವುದರಿಂದ ಆ ಕಾರ್ಯಕ್ರಮಕ್ಕೂ ಅಗತ್ಯ ಸಿದ್ಧತೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.‌

ಇದನ್ನೂ ಓದಿದ್ದೀರಾ? ವಿಜಯಪುರ | NEET ಪೇಪರ್ ಸೋರಿಕೆ ವಿರುದ್ಧದ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಅಭಿಷೇಕ್ ಸೆಹರಾ, ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್

“ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ...

ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...