ವಿಜಯಪುರ |‌ ಸಹಜ ಹೆರಿಗೆಗೆ ಆದ್ಯತೆ: ರಾಜ್ಯಕ್ಕೆ ಮಾದರಿಯಾದ ಎಂಸಿಎಚ್ ಆಸ್ಪತ್ರೆ

Date:

ಸುರಕ್ಷಿತ ಹೆರಿಗೆ, ಪರಿಣಿತ ವೈದ್ಯರ ತಂಡ, ಸುಧಾರಿತ ವೈದ್ಯಕೀಯ ಸೌಲಭ್ಯಗಳು ಹಾಗೂ ಸಹಜ ಹೆರಿಗೆಗೆ ನೀಡುತ್ತಿರುವ ನಿರಂತರ ಉತ್ತೇಜನದ ಫಲವಾಗಿ ವಿಜಯಪುರ ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ರಾಜ್ಯದ ಪ್ರಮುಖ ಮಾತೃತ್ವ ಆರೈಕೆ ಕೇಂದ್ರವಾಗಿ ಗುರುತಿಸಿಕೊಂಡಿದೆ.

ಸಹಜ ಹೆರಿಗೆಗಳ ಪ್ರಮಾಣದಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನವನ್ನು ಪಡೆದು, ತಾಯಿ ಮತ್ತು ಶಿಶು ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ.

- Advertisement -

ಆಸ್ಪತ್ರೆಯಲ್ಲಿ ಪ್ರತಿದಿನ ಸರಾಸರಿ 25ರಿಂದ 30 ಹೆರಿಗೆಗಳು ನಡೆಯುತ್ತಿದ್ದು, ತಿಂಗಳಿಗೆ ಸುಮಾರು 700ರಿಂದ 800 ಹೆರಿಗೆಗಳು ದಾಖಲಾಗುತ್ತವೆ. ಒಟ್ಟು ಹೆರಿಗೆಗಳಲ್ಲಿ ಶೇ.65ರಷ್ಟು ಸಹಜ ಹೆರಿಗೆಗಳಾಗುತ್ತಿದ್ದರೆ, ಶೇ.35ರಷ್ಟು ಮಾತ್ರ ಸಿಸೇರಿಯನ್ ಮೂಲಕ ನೆರವೇರುತ್ತಿವೆ.

2026ರ ಜನವರಿಯಿಂದ ಮೇ ಅಂತ್ಯದವರೆಗೆ ಆಸ್ಪತ್ರೆಯಲ್ಲಿ 1,825 ಸಹಜ ಹೆರಿಗೆಗಳು ಹಾಗೂ 1,171 ಸಿಸೇರಿಯನ್ ಹೆರಿಗೆಗಳು ನಡೆದಿವೆ. ವರ್ಷದಿಂದ ವರ್ಷಕ್ಕೆ ಸಹಜ ಹೆರಿಗೆಗಳ ಪ್ರಮಾಣ ಹೆಚ್ಚುತ್ತಿರುವುದು ಆಸ್ಪತ್ರೆಯ ಪರಿಣಾಮಕಾರಿ ಸೇವೆಗೆ ಸಾಕ್ಷಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಗರ್ಭಿಣಿಯರಲ್ಲಿ ಸಹಜ ಹೆರಿಗೆಯ ಕುರಿತು ಜಾಗೃತಿ ಮೂಡಿಸುವುದು, ಗರ್ಭಾವಸ್ಥೆಯ ಆರಂಭದಿಂದಲೇ ಸೂಕ್ತ ವೈದ್ಯಕೀಯ ಮೇಲ್ವಿಚಾರಣೆ, ನಿಯಮಿತ ತಪಾಸಣೆ, ಪೌಷ್ಟಿಕ ಆಹಾರದ ಸಲಹೆ, ರಕ್ತಹೀನತೆ ತಡೆ, ಹೆರಿಗೆ ಪೂರ್ವ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ಸಮಾಲೋಚನೆಗಳ ಮೂಲಕ ಆಸ್ಪತ್ರೆ ಆರೋಗ್ಯಕರ ಹೆರಿಗೆಗೆ ಪೂರಕ ವಾತಾವರಣ ನಿರ್ಮಿಸಿದೆ.

ವಿಜಯಪುರ ಜಿಲ್ಲೆಯೊಂದಿಗೆ ಕಲಬುರಗಿ, ಯಾದಗಿರಿ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಾವಿರಾರು ಗರ್ಭಿಣಿಯರು ಇಲ್ಲಿ ಚಿಕಿತ್ಸೆ ಹಾಗೂ ಹೆರಿಗೆಗಾಗಿ ಆಗಮಿಸುತ್ತಿದ್ದಾರೆ. ನೆರೆಯ ಮಹಾರಾಷ್ಟ್ರದ ಹಲವು ಭಾಗಗಳಿಂದಲೂ ಮಹಿಳೆಯರು ಈ ಆಸ್ಪತ್ರೆಗೆ ಬರುತ್ತಿದ್ದು, ಆಸ್ಪತ್ರೆಯ ಮೇಲಿನ ಸಾರ್ವಜನಿಕರ ವಿಶ್ವಾಸ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.

ಆಸ್ಪತ್ರೆಯಲ್ಲಿ 24 ಗಂಟೆಗಳ ತುರ್ತು ಪ್ರಸೂತಿ ಸೇವೆ, ನುರಿತ ಸ್ತ್ರೀರೋಗ ತಜ್ಞರು, ಅರಿವಳಿಕೆ ತಜ್ಞರು, ನವಜಾತ ಶಿಶು ತಜ್ಞರು, ನವಜಾತ ಶಿಶು ತೀವ್ರ ನಿಗಾ ಘಟಕ (ಎನ್‌ಐಸಿಯು), ತಾಯಿ ಎದೆಹಾಲು ಕೇಂದ್ರ, ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ಅಗತ್ಯ ಪ್ರಯೋಗಾಲಯ ಸೌಲಭ್ಯಗಳು ಲಭ್ಯವಿವೆ. ಇದರಿಂದ ಗರ್ಭಿಣಿಯರಿಗೆ ಒಂದೇ ಸೂರಿನಡಿ ಸಮಗ್ರ ಆರೋಗ್ಯ ಸೇವೆ ದೊರೆಯುತ್ತಿದೆ.

ಹೆರಿಗೆಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವೊಮ್ಮೆ ಹಾಸಿಗೆಗಳ ಕೊರತೆ ಮತ್ತು ಕೆಲಸದ ಒತ್ತಡ ಎದುರಾದರೂ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿ ಸಮರ್ಪಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಶ್ರಮದಿಂದಲೇ ಆಸ್ಪತ್ರೆ ಗುಣಮಟ್ಟದ ಆರೋಗ್ಯ ಸೇವೆಯಲ್ಲಿ ತನ್ನ ಹೆಗ್ಗಳಿಕೆಯನ್ನು ಉಳಿಸಿಕೊಂಡಿದೆ.

ಮತ್ತು ಮಾನವೀಯ ಸೇವೆಯ ಸಮನ್ವಯದಿಂದ ವಿಜಯಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉತ್ತರ ಕರ್ನಾಟಕದ ವಿಶ್ವಾಸಾರ್ಹ ಮಾತೃತ್ವ ಆರೈಕೆ ಕೇಂದ್ರವಾಗಿ ಹೊರಹೊಮ್ಮಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆಯ ಮೂಲಸೌಕರ್ಯವನ್ನು ಮತ್ತಷ್ಟು ವಿಸ್ತರಿಸಿದರೆ ಈ ಭಾಗದ ಲಕ್ಷಾಂತರ ತಾಯಂದಿರು ಮತ್ತು ಶಿಶುಗಳಿಗೆ ಇನ್ನಷ್ಟು ಪರಿಣಾಮಕಾರಿ ಆರೋಗ್ಯ ಸೇವೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಈ ಕುರಿತು ಈದಿನ.ಕಾಮ್‌ ಜೊತೆಗೆ ಮಾತನಾಡಿದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೋಳಿ, “ವೈದ್ಯಕೀಯವಾಗಿ ಯಾವುದೇ ತೊಂದರೆ ಇಲ್ಲದಿದ್ದರೆ ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಹಜ ಹೆರಿಗೆಯೇ ಅತ್ಯುತ್ತಮ ಆಯ್ಕೆ. ನಮ್ಮ ಆಸ್ಪತ್ರೆಯಲ್ಲಿ ಸಹಜ ಹೆರಿಗೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ತಾಯಿ ಅಥವಾ ಮಗುವಿನ ಜೀವಕ್ಕೆ ಅಪಾಯ ಉಂಟಾಗುವಂತಹ ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಸಿಸೇರಿಯನ್‌ಗೆ ಮುಂದಾಗುತ್ತೇವೆ. ವೈದ್ಯರ ಸಮರ್ಪಿತ ಸೇವೆ ಹಾಗೂ ಸಹಜ ಹೆರಿಗೆಗೆ ನೀಡುತ್ತಿರುವ ಆದ್ಯತೆಯಿಂದಲೇ ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಲು ಸಾಧ್ಯವಾಗಿದೆ” ಎಂದು ಹೇಳಿದರು.

ಸಹಜ ಹೆರಿಗೆಗೆ ಆದ್ಯತೆ, ಆಧುನಿಕ ಚಿಕಿತ್ಸಾ ವ್ಯವಸ್ಥೆ ಮತ್ತು ಮಾನವೀಯ ಸೇವೆಯ ಸಮನ್ವಯದಿಂದ ವಿಜಯಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉತ್ತರ ಕರ್ನಾಟಕದ ವಿಶ್ವಾಸಾರ್ಹ ಮಾತೃತ್ವ ಆರೈಕೆ ಕೇಂದ್ರವಾಗಿ ಹೊರಹೊಮ್ಮಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆಯ ಮೂಲಸೌಕರ್ಯವನ್ನು ಮತ್ತಷ್ಟು ವಿಸ್ತರಿಸಿದರೆ ಈ ಭಾಗದ ಲಕ್ಷಾಂತರ ತಾಯಂದಿರು ಮತ್ತು ಶಿಶುಗಳಿಗೆ ಇನ್ನಷ್ಟು ಪರಿಣಾಮಕಾರಿ ಆರೋಗ್ಯ ಸೇವೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...