ವಿಜಯಪುರ | ಸೋನಮ್ ವಾಂಗ್‌ಚುಕ್ ಸತ್ಯಾಗ್ರಹಕ್ಕೆ ಪ್ರಗತಿಪರ ಸಂಘಟನೆಗಳ ಬೆಂಬಲ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್–2026 ಪರೀಕ್ಷಾ ಹಗರಣ ಖಂಡಿಸಿ ಖ್ಯಾತ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಳೆದ 20 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ವಿಜಯಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಾಂಕೇತಿಕ ಧರಣಿ ನಡೆಸಲಾಯಿತು.

ಧರಣಿಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿದ್ಯಾರ್ಥಿ ಹಾಗೂ ಯುವಜನ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ನ್ಯಾಯ ಒದಗಿಸಬೇಕು ಹಾಗೂ ನೀಟ್ ಹಗರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಪ್ರಗತಿಪರ ಮುಖಂಡ ಅನಿಲ ಹೊಸಮನಿ, “ನೀಟ್ ಪರೀಕ್ಷಾ ಹಗರಣದ ಮೂಲಕ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಇದನ್ನು ಖಂಡಿಸಿ ಸೋನಮ್ ವಾಂಗ್‌ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ನ್ಯಾಯಸಮ್ಮತವಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, “ನೀಟ್ ಹಗರಣದ ಹೊಣೆ ಹೊತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಇಲ್ಲವಾದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ” ಎಂದರು.

ದಲಿತ ಮುಖಂಡ ಚನ್ನು ಕಟ್ಟಿಮನಿ ಮಾತನಾಡಿ, “ಕೇಂದ್ರ ಸರ್ಕಾರ ಯುವಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ” ಎಂದು ಟೀಕಿಸಿದರು.

- Advertisement -

ಪ್ರಗತಿಪರ ಮುಖಂಡ ಚಂದ್ರಶೇಖರ ಗಂಟೆಪ್ಪಗೊಳ, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಲೆಂಡಿ, ಬುದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ ಅಜಮನಿ, ಅಹಿಂದ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ, ಮುಖಂಡರಾದ ವಿದ್ಯಾವತಿ ಅಂಕಲಗಿ, ಸುರೇಶ್ ಜಿ.ಬಿ, ಜಯಶ್ರೀ ಛಲವಾದಿ, ವಕೀಲರ ಸಂಘದ ಕಾರ್ಯದರ್ಶಿ ಸುರೇಶ ಚೂರಿ, ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್, ಯುವ ಮುಖಂಡ ಫೈಯಾಜ್ ಕಲಾದಗಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...