ವಿಜಯಪುರ | ಸಂಘಟಿತರಾದಲ್ಲಿ ಮಾತ್ರ ಕಾರ್ಮಿಕ ಹಕ್ಕುಗಳ ರಕ್ಷಣೆ ಸಾಧ್ಯ: ಜಗನ್ನಾಥ ಖುದಾನಪುರ

Date:

ಕಾರ್ಮಿಕರು ತಮ್ಮ ಹಕ್ಕುಗಳು ಮತ್ತು ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆಯಬೇಕಾದರೆ ಸಂಘಟಿತರಾಗುವುದು ಅತ್ಯಗತ್ಯ ಎಂದು ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದ ಜಗನ್ನಾಥ ವಿಠಲ್‌ರಾವ್ ಖುದಾನಪುರ ಹೇಳಿದರು.

- Advertisement -

ನಗರದ ಸಂತ ಅನ್ನಮ್ಮನವರ ದೇವಾಲಯದ ಸಭಾಂಗಣದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ, ವಿಜಯಪುರ, ವಿಜಯಪುರ ನಗರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಯೂನಿಯನ್(ರಿ) ಹಾಗೂ ವಿಜಯಪುರ ನಗರ ಗೃಹಕಾರ್ಮಿಕರ ಯೂನಿಯನ್(ರಿ)ಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಗೃಹಕಾರ್ಮಿಕರ ಹಾಗೂ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಗೃಹಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ನಿಗದಿತ ಕೆಲಸದ ಅವಧಿಯನ್ನು ಮೀರಿ 10ರಿಂದ 15 ಗಂಟೆಗಳವರೆಗೆ ದುಡಿಯುತ್ತಿದ್ದರೂ, ಅವರಿಗೆ ತಕ್ಕ ಪ್ರತಿಫಲ ದೊರೆಯುತ್ತಿಲ್ಲ. ಅನೇಕರು ಕಠಿಣ ಶ್ರಮವಹಿಸಿದರೂ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ಎಲ್ಲ ಕಾರ್ಮಿಕರು ಒಗ್ಗೂಡಿ ಸಂಘಟನೆಯ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಕಾರ್ಮಿಕ ಇಲಾಖೆಯ ಸಿಬ್ಬಂದಿ ಗುರುನಾಥ ಉಪ್ಪಾರ ಮಾತನಾಡಿ, ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಮದುವೆ ಸಹಾಯಧನ, ಶೈಕ್ಷಣಿಕ ನೆರವು, ಪಿಂಚಣಿ, ಅಪಘಾತ ಪರಿಹಾರ, ಆರೋಗ್ಯ ವಿಮೆ, ಹೆರಿಗೆ ಸೌಲಭ್ಯ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿಗಳ ಕುರಿತು ಮಾಹಿತಿ ನೀಡಿ, ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಮಿಕ ಹಾಗೂ ಯುವ ಮುಖಂಡ ಎಚ್.ಟಿ. ಭರತ್ ಕುಮಾರ್ ಮಾತನಾಡಿ, “ದೈಹಿಕ ಶ್ರಮದ ಮೂಲಕ ಜೀವನ ಸಾಗಿಸುವ ಪ್ರತಿಯೊಬ್ಬರೂ ಕಾರ್ಮಿಕರಾಗಿದ್ದು, ಶ್ರಮಿಕರ ಏಕತೆ ಅವರ ಶಕ್ತಿಯಾಗಿದೆ” ಎಂದು ಹೇಳಿದರು. ಎಲ್ಲ ಕಾರ್ಮಿಕರೂ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾ. ಕೆವಿನ್ ಸಿಕ್ಕೇರಾ ಮಾತನಾಡಿ, “ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಕಾರ್ಮಿಕರ ಪಾತ್ರ ಅಮೂಲ್ಯವಾಗಿದೆ. ವಿಶ್ವ ಗೃಹಕಾರ್ಮಿಕರ ದಿನ ಹಾಗೂ ವಿಶ್ವ ಕಾರ್ಮಿಕರ ದಿನಾಚರಣೆಗಳು ಕಾರ್ಮಿಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಆಚರಿಸಲಾಗುತ್ತದೆ” ಎಂದು ತಿಳಿಸಿದರು.

ಈ ವೇಳೆ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ರವಿ ದೊಡಮನಿ ಕಟ್ಟಡ ಕಾರ್ಮಿಕರ ಯೂನಿಯನ್ ಹಾಗೂ ಗೃಹಕಾರ್ಮಿಕರ ಯೂನಿಯನ್‌ಗಳ 2025–26ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು.

ವಿಜಯಪುರ ನಗರ ಗೃಹಕಾರ್ಮಿಕರ ಯೂನಿಯನ್ ಅಧ್ಯಕ್ಷೆ ಫರಜಾನಾ ಜಮಾದಾರ, ಕಟ್ಟಡ ಕಾರ್ಮಿಕರ ಯೂನಿಯನ್ ಅಧ್ಯಕ್ಷ ಸಿದ್ದು ಹೊನಕಟ್ಟಿ ಮಾತನಾಡಿ, “ಸಂಘಟನೆಯ ಮೂಲಕ ಹೆಚ್ಚಿನ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಸ್ವಿಟ್ ಸಂಸ್ಥೆಗಳ ಮುಖ್ಯಸ್ಥ ಫಾ. ಸುನೀಲ್ ಫರ್ನಾಂಡಿಸ್ ಮಾತನಾಡಿ, ಬಸವಣ್ಣನವರ “ಕಾಯಕವೇ ಕೈಲಾಸ” ಎಂಬ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು, ದೇಶದ ಅಭಿವೃದ್ಧಿಗೆ ಕಾರ್ಮಿಕರ ಶ್ರಮವೇ ಆಧಾರವಾಗಿದೆ ಎಂದು ಹೇಳಿದರು. ಸಹ-ನಿರ್ದೇಶಕ ಫಾ. ಸುಮನಬಾಲು ಕಾರ್ಮಿಕರಿಗೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಬ್ರದರ್ ನಿಖಿಲ್, ಕಾರ್ಯಸಂಯೋಜಕಿ ಸಿಸ್ಟರ್ ಅಸುಂತಾ, ರೇಣುಕಾ ಕೊಟ್ಯಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ಸುಸ್ಮಿತಾ ಭಾಂಡಕರ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಶೋಭಾ ವಾಲಿಕಾರ ನಿರೂಪಿಸಿದರು. ಸರೋಜಾ ಕಟ್ಟಿಮನಿ ಸ್ವಾಗತಿಸಿ, ಸುನಂದಾ ನಾಯಕ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...