ವಿಜಯಪುರ | ಕೊಳಗೇರಿ ಅಭಿವೃದ್ಧಿಗೆ ಒತ್ತಾಯಿಸಿ ಪ್ರತಿಭಟನೆ; ವಾರದೊಳಗೆ ಕ್ರಮದ ಭರವಸೆ

Date:

ವಿಜಯಪುರ ನಗರದ ಕೊಳಗೇರಿ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ತಕ್ಷಣ ಪುನರಾರಂಭಿಸಿ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ವಿಜಯಪುರ ನಗರ ಸ್ಲಂ ಅಭಿವೃದ್ಧಿ ಸಮಿತಿ (ರಿ), ವಿಜಯಪುರ ಜನ ವೇದಿಕೆ (ಸಿಸಿಎಫ್ಎಫ್) ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ನಗರದ ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಿಂದ ಬೆಳಿಗ್ಗೆ ಸುಮಾರು 11.30ಕ್ಕೆ ಆರಂಭಗೊಂಡ ಪ್ರತಿಭಟನೆಯಲ್ಲಿ ಮೆರವಣಿಗೆಯಲ್ಲಿ, ಸುಮಾರು 300ಕ್ಕೂ ಅಧಿಕ ಕೊಳಗೇರಿ ನಿವಾಸಿಗಳು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಕೈಯಲ್ಲಿ ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

“ವಿಜಯಪುರ ನಗರದ ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ, ಒಳಚರಂಡಿ ಹಾಗೂ ಇತರೆ ಮೂಲಭೂತ ಸೌಲಭ್ಯಗಳ ಕಾಮಗಾರಿಗಳು ಅಪೂರ್ಣವಾಗಿದ್ದು, ಹಲವು ಯೋಜನೆಗಳು ಸ್ಥಗಿತಗೊಂಡಿವೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಮೂಲಭೂತ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳನ್ನು ಪ್ರತಿಭಟನಾ ಸ್ಥಳಕ್ಕೆ ಕರೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ, ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಅಗತ್ಯ ಕ್ರಮ ಕೈಗೊಂಡು ಒಂದು ವಾರದೊಳಗೆ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಪುನರಾರಂಭಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಆಶ್ವಾಸನೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಫಾದರ್ ಸುನೀಲ, ಫಾದರ್ ಸುಮನ್, ಬಾಲು, ಬ್ರದರ್ ನಿಖಿಲ್, ಮುತ್ತು ಬೋವಿ, ಮೀನಾಕ್ಷಿ, ಅಕ್ರಮ ಮಾಸ್ತರ್, ನಿರ್ಮಲಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ 300ಕ್ಕೂ ಅಧಿಕ ಕೊಳಗೇರಿ ನಿವಾಸಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಪುತ್ರ ನದಿಗೆ ಚೀನಾದ ಬೃಹತ್ ಅಣೆಕಟ್ಟು: ಪ್ರವಾಹದ ಅಪಾಯ ಹೆಚ್ಚಳ, ಭಾರತಕ್ಕೂ ಆತಂಕ

ಟಿಬೆಟ್‌ನಲ್ಲಿ ಹರಿಯುವ ಬ್ರಹ್ಮಪುತ್ರ (ಯಾರ್ಲುಂಗ್ ಜಾಂಗ್ಬೋ) ನದಿಗೆ ಚೀನಾ ನಿರ್ಮಿಸುತ್ತಿರುವ ವಿಶ್ವದ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಪಟಾಕಿ ನಿಷೇಧ ಜಾಗೃತಿಗೆ ಹಣವೇಕೆ; ಸೆಲೆಬ್ರಿಟಿಗಳ ವಿರುದ್ಧ ಬಾಂಬೆ ಹೈಕೋರ್ಟ್ ಅಸಮಾಧಾನ

ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...