ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ ಆಗ್ರಹ

Date:

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕನಿಷ್ಠ ಇಬ್ಬರು ವಿಕಲಚೇತನರಿಗೆ ಉದ್ಯೋಗ ನೀಡುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವಿಜಯಪುರ ಜಿಲ್ಲಾಧ್ಯಕ್ಷ ವಿನೋದ ಖೇಡ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರಿಗೆ ಒಕ್ಕೂಟದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸಂದರ್ಭದಲ್ಲಿ ಮಾತನಾಡಿದ ವಿನೋದ ಖೇಡ, ವಿಜಯಪುರ ಜಿಲ್ಲೆಯಲ್ಲಿ ಅನೇಕ ವಿಕಲಚೇತನರು ಉನ್ನತ ಶಿಕ್ಷಣ ಪಡೆದಿದ್ದರೂ ಸೂಕ್ತ ಉದ್ಯೋಗಾವಕಾಶಗಳಿಲ್ಲದೆ ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ಸರ್ಕಾರಗಳು ವಿಕಲಚೇತನರ ಸಬಲೀಕರಣಕ್ಕಾಗಿ ಹಲವು ಕಾಯ್ದೆ ಮತ್ತು ಯೋಜನೆಗಳನ್ನು ಜಾರಿಗೊಳಿಸಿದ್ದರೂ, ಅವುಗಳ ಪರಿಣಾಮಕಾರಿ ಅನುಷ್ಠಾನದ ಕೊರತೆಯಿಂದ ಅರ್ಹರಿಗೆ ಉದ್ಯೋಗ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

*ಕಾಯ್ದೆಯ ಆಶಯ ಅನುಷ್ಠಾನವಾಗಲಿ*ವಿಕಲಚೇತನರ ಹಕ್ಕುಗಳ ಅಧಿನಿಯಮ–2016ರ ಆಶಯದಂತೆ ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಬೇಕು. ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳುವಾಗ ವಿಕಲಚೇತನರಿಗೂ ಅವಕಾಶ ನೀಡುವಂತೆ ಇಲಾಖೆಗಳ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಬೇಕು.

ಇದರಿಂದ ವಿದ್ಯಾರ್ಹತೆ ಹೊಂದಿರುವ ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ನೆರವಾಗಲಿದೆ ಎಂದು ಅವರು ಹೇಳಿದರು.ಈ ಸಂಬಂಧ ಅಂಗವಿಕಲರ ಹಕ್ಕುಗಳ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಪತ್ರ ಹಾಗೂ ವಿಜಯಪುರ ಜಿಲ್ಲಾಧಿಕಾರಿಗಳ ಪತ್ರವನ್ನು ಉಲ್ಲೇಖಿಸಿ ಒಕ್ಕೂಟ ಮನವಿ ಸಲ್ಲಿಸಿದೆ.

ವಿಕಲಚೇತನರ ಸಾಮರ್ಥ್ಯ ಮತ್ತು ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯದ ಆಶಯವನ್ನು ಸಾಕಾರಗೊಳಿಸಬೇಕು ಎಂದು ಒತ್ತಾಯಿಸಿದರು.ಜಿಲ್ಲೆಯ ವಿಕಲಚೇತನರ ಉದ್ಯೋಗ ಸಮಸ್ಯೆಗಳಿಗೆ ಸ್ಪಂದಿಸಿ, ಅರ್ಹರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಶಾಸಕರು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಮನವಿದಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎ.ಎ. ವಾಲೀಕಾರ, ಲಾಯಪ್ಪ ಇಂಗಳೆ, ಎ.ಟಿ. ಗುನ್ನಾಪುರ, ಗಣೇಶ ಡೋಣೂರ, ಅನಿಲ ಇಕ್ಕಡಿ, ಮಹಾದೇವಪ್ಪ ತೇಲಿ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...