ನವೆಂಬರ್ 1ರಿಂದ ಹಾಲಿನ ಬೆಲೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಭಾರತೀಯ ಜೈ ಭೀಮ ದಳ(ರಿ) ರಾಜ್ಯಾಧ್ಯಕ್ಷ ನಾಗರಾಜ ಪಿ. ಲಂಬು ತೀವ್ರವಾಗಿ ಖಂಡಿಸಿದ್ದಾರೆ.
ರೈತರಿಗೆ ಪ್ರತಿ ಲೀಟರ್ ಹಾಲಿಗೆ ₹8 ಅಥವಾ ₹16 ಹೆಚ್ಚುವರಿ ನೀಡಿದರೂ ನಮ್ಮ ವಿರೋಧವಿಲ್ಲ. ಆದರೆ ರೈತರಿಗೆ ನೀಡುವ ಹೆಚ್ಚುವರಿ ಪ್ರೋತ್ಸಾಹಧನವನ್ನು ಸರ್ಕಾರವೇ ಭರಿಸಬೇಕು. ಅದರ ಹೊರೆಯನ್ನು ಬಡವರು, ದಲಿತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಗ್ರಾಹಕರ ಮೇಲೆ ಹಾಕುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಅಗತ್ಯ ವಸ್ತುಗಳು ಹಾಗೂ ತರಕಾರಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲಿನ ಬೆಲೆ ಹೆಚ್ಚಿಸಿದರೆ ಮಕ್ಕಳಿರುವ ಬಡ ಕುಟುಂಬಗಳು, ಕೂಲಿ ಕಾರ್ಮಿಕರು ಹಾಗೂ ವೃದ್ಧರಿಗೆ ಮತ್ತಷ್ಟು ಆರ್ಥಿಕ ಹೊರೆ ಬೀಳಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರೈತರ ಆದಾಯ ಹೆಚ್ಚಿಸುವುದರ ಜೊತೆಗೆ ಗ್ರಾಹಕರ ಕೆಲಸವನ್ನು ಸರ್ಕಾರ ಕಾಪಾಡಬೇಕು. ರೈತರಿಗೆ ನ್ಯಾಯ ಸಿಗಬೇಕು, ಗ್ರಾಹಕರಿಗೂ ಹೊರೆಯಾಗಬಾರದು. ಆದ್ದರಿಂದ ನವಂಬರ್ ಒಂದರಿಂದ ಜಾರಿಗೆ ತರಲು ಉದ್ದೇಶಿಸಿರುವ ಹಾಲಿನ ಬೆಲೆ ಏರಿಕೆ ನಿರ್ಧಾರವನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಗೆ ಲೇಖನ ಆಹ್ವಾನ




