ವಿಜಯಪುರ | ಗ್ರಾಮೀಣ ಕಾರ್ಮಿಕರಿಗೆ ಮೂಲಸೌಕರ್ಯ, ನಿರಂತರ ಉದ್ಯೋಗ ನೀಡಿ: ರಿಷಿ ಆನಂದ್

Date:

ಎಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜೊತೆಗೆ ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

- Advertisement -

ವಿಜಯಪುರ ಜಿಲ್ಲೆಯ ನಾಗಠಾಣ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಬಿ-ಜಿ ರಾಮ್-ಜಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕೆರೆ ಪುನಶ್ಚೇತನ ಕಾಮಗಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿಯ ಪ್ರಗತಿ, ಗುಣಮಟ್ಟ, ಕಾರ್ಮಿಕರ ಹಾಜರಾತಿ ಹಾಗೂ ಮಾನವ ದಿನಗಳ ಸೃಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಬಳಿಕ ಮಾತನಾಡಿದ ಅವರು, ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಪ್ರಥಮ ಚಿಕಿತ್ಸಾ ಸೌಲಭ್ಯ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಕಾರ್ಮಿಕರ ಕೂಲಿ ಪಾವತಿಯಲ್ಲಿ ಯಾವುದೇ ತಾಂತ್ರಿಕ ತೊಂದರೆ ಉಂಟಾಗದಂತೆ ಕ್ರಮವಹಿಸಬೇಕು. ಎಲ್ಲ ಕಾರ್ಮಿಕರ ಫೇಸ್ ಅಥೆಂಟಿಕೇಶನ್ ಕಡ್ಡಾಯವಾಗಿ ಪೂರ್ಣಗೊಳಿಸಿ, ನಿರಂತರ ಉದ್ಯೋಗ ಕಲ್ಪಿಸುವ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಈ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಉದ್ಯೋಗ ಹಾಗೂ ಪ್ರತಿ ದಿನ 382 ರೂ. ಕೂಲಿ ನೀಡಲಾಗುತ್ತಿದೆ. ಕೃಷಿ ಹೊಂಡದನಗಳ ಶೆಡ್, ಮೇಕೆ ಶೆಡ್, ತೋಟಗಾರಿಕೆ ಅಭಿವೃದ್ಧಿ ಸೇರಿದಂತೆ ಹಲವು ವೈಯಕ್ತಿಕ ಕಾಮಗಾರಿಗಳಿಗೂ ಅವಕಾಶವಿದ್ದು, ಗ್ರಾಮೀಣ ಕುಟುಂಬಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ವಿಜಯಪುರ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಠ 100 ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸಿ, ನಿಗದಿತ ಗುರಿಗೆ ಅನುಗುಣವಾಗಿ ಮಾನವ ದಿನಗಳ ಸೃಜನೆ ಸಾಧಿಸಬೇಕು. ಯೋಜನೆಯಡಿ ಉದ್ಯೋಗ ಬಯಸಿದವರು ಉದ್ಯೋಗದಿಂದ ವಂಚಿತರಾಗಬಾರದು. ಗ್ರಾಮ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಯೋಜನೆಯ ಕುರಿತು ವ್ಯಾಪಕ ಜಾಗೃತಿ ಮೂಡಿಸಿ, ಉದ್ಯೋಗ ಬಯಸುವ ಎಲ್ಲಾ ಕುಟುಂಬಗಳನ್ನು ಕಾಮಗಾರಿಗಳಲ್ಲಿ ಸಕ್ರಿಯವಾಗಿ ತೊಡಗಿಸಬೇಕು ಎಂದರು.

ಗ್ರಾಮ ಪಂಚಾಯಿತಿವಾರು ಉದ್ಯೋಗ ಬೇಡಿಕೆ ನೋಂದಣಿ, ಕಾಮಗಾರಿಗಳ ಯೋಜನೆ ಹಾಗೂ ಕಾರ್ಮಿಕರ ಹಾಜರಾತಿಯನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ಉದ್ಯೋಗದ ನಿರಂತರತೆಯನ್ನು ಕಾಪಾಡಬೇಕು ಎಂದು ಅವರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ವಸತಿ ನಿಲಯಗಳಿಗೂ ಭೇಟಿ: ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಒ ಅವರು, ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಸತಿ ನಿಲಯದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅಡುಗೆ ಸಿಬ್ಬಂದಿಗೆ ನಿರ್ದೇಶನ ನೀಡಿದರು.

ನಂತರ ಸಮಾಜ ಕಲ್ಯಾಣ ಇಲಾಖೆಯ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಹಾಜರಾತಿ ಶೇ.100ರಷ್ಟು ಇರಬೇಕು ಎಂದು ಸೂಚಿಸಿದರು. ಶಾಲೆಯಲ್ಲಿ ಸ್ವಚ್ಛತೆ, ಶಿಸ್ತು, ಕ್ರೀಡೆ, ದೈಹಿಕ ಶಿಕ್ಷಣ, ನೃತ್ಯ, ಗಾಯನ ಹಾಗೂ ಇತರ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು. ಪ್ರತಿ ಶನಿವಾರ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛಗೊಳಿಸಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು ಎಂದರು. ಒಂಬತ್ತನೇ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಈಗಿನಿಂದಲೇ ಶಿಸ್ತುಬದ್ಧ ಅಧ್ಯಯನ ನಡೆಸಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಹೆಚ್ಚಿನ ಪರಿಣತಿ ಗಳಿಸಬೇಕು ಎಂದು ಸಲಹೆ ನೀಡಿದರು.

ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು, ನಿರಂತರ ಅಭ್ಯಾಸ ಮತ್ತು ಪುನರಾವರ್ತನೆಯೇ ಉತ್ತಮ ಫಲಿತಾಂಶಕ್ಕೆ ಪ್ರಮುಖ ಅಂಶಗಳಾಗಿವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಊಟ ಸವಿದು, ವಸತಿ, ಆಹಾರ ಮತ್ತು ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ವಸತಿ ನಿಲಯಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಸಹಾಯಕ ನಿರ್ದೇಶಕ ಎಸ್.ಆರ್. ಕಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಮದೇವ ಶಿಂಧೆ, ಜಿಲ್ಲಾ ಐಇಸಿ ಸಂಯೋಜಕಿ ಸುವರ್ಣ ಭಜಂತ್ರಿ, ಉಪ ಪ್ರಾಂಶುಪಾಲ ಬಿ.ಎಂ. ಕೊಪ್ಪದ, ತಾಂತ್ರಿಕ ಸಂಯೋಜಕ ಪರಶುರಾಮ ಶಹಾಪುರ, ಐಇಸಿಯ ರಾಘವೇಂದ್ರ ಭಜಂತ್ರಿ, ತಾಂತ್ರಿಕ ಸಹಾಯಕ ಮಂಜುನಾಥ ಶಟಗಾರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಬಿಎಫ್‌ಟಿ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ)...

ಕೋಲಾರ | ಮಾರುಕಟ್ಟೆ ಜಾಗದ ಕಡತಕ್ಕೆ ವಿಶೇಷ ಅಧಿವೇಶನದಲ್ಲಿ ಮುಕ್ತಿ ನೀಡಿ

ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಅಗತ್ಯವಿರುವ 100 ಎಕರೆ ಸರ್ಕಾರಿ...

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಹತ್ಯೆ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿ – ಪೊಲೀಸ್ ಸ್ಪಷ್ಟೀಕರಣ

ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಕೆಲವು...