ವಿಜಯಪುರ | ಮತದಾನದ ಹಕ್ಕು ಕಸಿಯುತ್ತಿರುವ ಎಸ್‌ಐಆರ್ ವಿರುದ್ಧ ಜನಜಾಗೃತಿ ಜಾಥಾ

Date:

ಎಸ್‌ಐಆರ್ ಏನೆಂದು ಜನರಿಗೆ ಗೊತ್ತಿಲ್ಲ. ಎಸ್‌ಐಆರ್ ಅಂದರೆ ಸರ್ ಎನ್ನುತ್ತ, ಹಾಗಂದ್ರೆ ಏನು? ಎಂದು ಕೇಳುತ್ತಿದ್ದಾರೆ. ಹಾಗಾಗಿ, ಅವರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ವಿಜಯಪುರದಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಕನ್ನಿ ಹೇಳಿದರು.

- Advertisement -

ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ನಡೆದ ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಅಹಿಂದ ಮುಖಂಡ ಎಸ್ ಎಂ ಪಾಟೀಲ ಗಣಿಹಾರ ಜಾಥಾವನ್ನು ಉದ್ಘಾಟಿಸಿ ಮಾತನಾಡಿ, “ಎಸ್‌ಐಆರ್‌ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಇಲ್ಲ. ಈ ಬಗ್ಗೆ ಜಾಗೃತಿ ಮೂಡಿಸಲು ಹೊರಟಿರುವ ಜಾಥಾಗೆ ಶುಭವಾಗಲಿ” ಎಂದು ಹಾರೈಸಿದರು.

“ಸುಮಾರು 150 ಜನಪರ ಸಂಘಟನೆಗಳು, ಜಾತ್ಯತೀತ ಪಕ್ಷಗಳ ಎಸ್‌ಐಆರ್ ವಿರೋಧಿ ಒಕ್ಕೂಟ ಜೂನ್ 13ರಿಂದ 18ರವರೆಗೆ ರಾಜ್ಯದ ಕನಿಷ್ಠ 30 ಜಿಲ್ಲೆಗಳ ಸುಮಾರು 100 ತಾಲೂಕುಗಳಲ್ಲಿ ಎಸ್‌ಐಆರ್ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ತಲಾ ಆರು ಜಿಲ್ಲೆಗಳನ್ನು ಒಳಗೊಂಡ ಒಟ್ಟು ಐದು ಮಾರ್ಗಗಳಲ್ಲಿ ಏಕಕಾಲಕ್ಕೆ ಜಾಥಾಗೆ ಚಾಲನೆ ನೀಡಲಾಗಿದೆ” ಎಂದು ವಿವರಿಸಿದರು.

“ವಿಜಯಪುರದಲ್ಲಿ ಚಾಲನೆ ಪಡೆದುಕೊಂಡಿರುವ ಜಾಥಾ ಇಂದು ಬಾಗಲಕೋಟೆ, ಜೂ. 15 ಬೆಳಗಾವಿ, ಜೂ.16 ಧಾರವಾಡ, ಜೂ.17ರಂದು ಗದಗ ಜಿಲ್ಲೆಗಳಲ್ಲಿ ಸಂಚರಿಸಿ, ಜೂ.18ರಂದು ಹಾವೇರಿಯಲ್ಲಿ ಸಮಾಪ್ತಿಯಾಗಲಿದೆ. ಜೂ.20ರಂದು ಬೆಂಗಳೂರಿನಲ್ಲಿ ಎಸ್‌ಐಆರ್ ವಿರುದ್ದ ಬೃಹತ್ ಪ್ರತಿರೋಧ ಸಮಾವೇಶ ನಡೆಯಲಿದೆ” ಎಂದು ಮಾಹಿತಿ ನೀಡಿದರು.

“ಎರಡನೇ ಹಂತದಲ್ಲಿ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ನಡೆದಿದ್ದು, ಈ ರಾಜ್ಯಗಳಲ್ಲಿ ಸುಮಾರು 6 ಕೋಟಿ 50 ಲಕ್ಷ ಮಂದಿಯನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಎಸ್‌ಐಆರ್‌ನಲ್ಲಿ ಜನರ ಬಳಿ ಇಲ್ಲದ ದಾಖಲೆಗಳನ್ನು ಕೇಳಲಾಗುತ್ತಿದೆ. ಈ ಮೂಲಕ ಅವರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ನಮ್ಮ ದೇಶದಲ್ಲಿ ಶೇಕಡ 36.5 ಜನರಲ್ಲಿ ಮಾತ್ರ ದಾಖಲೆಗಳಿವೆ. ದಾಖಲೆಗಳು ಇಲ್ಲದವರು ಶೇ.63.5ರಷ್ಟಿದ್ದಾರೆ. ಬಡವರು, ದಲಿತರು, ಕೂಲಿ ಕಾರ್ಮಿಕರು ಎಲ್ಲಿಂದ ದಾಖಲೆಗಳನ್ನು ಕೊಡಬೇಕು” ಎಂದು ಪ್ರಶ್ನಿಸಿದರು.

“ಕರ್ನಾಟಕದಲ್ಲಿ ಎಸ್‌ಐಆರ್ ಮೂಲಕ 50 ಲಕ್ಷಕ್ಕೂಹೆಚ್ಚು ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಸಾಧ್ಯತೆ ಇದೆ. ಇದರ ವಿರುದ್ದ ನಾವು ಹೋರಾಟ ರೂಪಿಸುವ ಅಗತ್ಯವಿದೆ. ಸಂವಿಧಾನದ ಆಶಯಗಳನ್ನು ಕಾಪಾಡುವ ಜವಬ್ದಾರಿ ನಮ್ಮಲಿದೆ” ಎಂದು ಜನರನ್ನು ಎಚ್ಚರಿಸಿದರು.

ಅಖಂಡ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, “ಎಸ್‌ಐಆರ್ ಮೂಲಕ ಜನರ ಮತದಾನದ ಹಕ್ಕನ್ನು ಕಸಿಯಲು ಚುನಾವಣಾ ಆಯೋಗ ಷಡ್ಯಂತ್ರ ರೂಪಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಈ ಮೂಲಕ ಪ್ರಯತ್ನಿಸುತ್ತಿದೆ. ನಮ್ಮನ್ನು ಅಳುವ ರಾಜಕಾರಣಿಗಳನ್ನು ವೋಟು ಹಾಕಿ ಗೆಲ್ಲಿಸುವಾಗ ನಾವು ಅವರ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ. ಆದರೆ, ನಾವು ವೋಟು ಹಾಕಿ ಗೆಲ್ಲಸಿದವರು ನಮ್ಮ ಪರಿಶೀಲನೆ ಮಾಡಲು ಹೊರಟಿದ್ದಾರೆ. ಮುಂದೆ ನಾವು ಎಂಪಿ, ಎಂಎಲ್‌ಗಳನ್ನು ನಾವು ಪರಿಶೀಲನೆ ಮಾಡಬೇಕಾಗುತ್ತದೆ” ಎಂದು ಆಕ್ರೋಶ ಹೊರಹಾಕಿದರು.

“ದೇಶದ ಇಂದಿನ ಪರಿಸ್ಥಿತಿ ನೋಡಿದರೆ ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಇದ್ದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು” ಎಂದು ವ್ಯಂಗ್ಯವಾಡಿದ ಅವರು, ಎಸ್‌ಐಆರ್ ಹಿಂಪಡೆಯಬೇಕು. ಇಲ್ಲದಿದ್ದರೆ ಅದರ ವಿರುದ್ದ ದೇಶದಲ್ಲಿ ಕ್ರಾಂತಿಯಾಗಲಿದೆ” ಎಂದರು.

ವಿಜಯಪುರ ನಗರದಲ್ಲಿ ಜಾಗೃತಿ ಜಾಥಾ

ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ಪಡೆದ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ, ನಗರದ ಗಾಂಧಿ ಕಟ್ಟೆ ಸರ್ಕಲ್ ಬಳಿಗೆ ಸಾಗಿತು. ಅಲ್ಲಿ ಜಾಥಾದ ನಾಯಕರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಐಆರ್‌ನ ಅನಾಹುತಗಳನ್ನು ತಿಳಿಸಿಕೊಟ್ಟು, ಅದನ್ನು ಹೇಗೆ ಎದುರಿಸಬೇಕು ಮತ್ತು ತಮ್ಮ ಮತದಾನದ ಹಕ್ಕನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದನ್ನು ವಿವರಿಸಿದರು.

ವೃತ್ತ ಕಾರ್ಯಕ್ರಮವನ್ನು ರಸ್ತೆಯ ಇಕ್ಕೆಲಗಳಲ್ಲಿ ನಿಂತ ನೂರಾರು ಜನರು ವೀಕ್ಷಿಸಿದರು, ಭಾಷಣಗಳನ್ನು ಆಲಿಸಿದರು. ಇದೇ ಸಂದರ್ಭದಲ್ಲಿ ಜನರಿಗೆ ಕರಪತ್ರಗಳನ್ನು ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಎಸ್‌ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವಕ್ಕೆ ಸವಾಲು: ಲಕ್ಷಾಂತರ ಮತದಾರರ ಹಕ್ಕು ಕಸಿಯುವ ಹುನ್ನಾರ

ಗಾಂಧಿ ವೃತ್ತದಿಂದ ಹೊರಟ ಜಾಥಾ ಇತಿಹಾಸ ಪ್ರಸಿದ್ದ ಜಾಮಿಯಾ ಮಸೀದಿ ಬಳಿಯ ಝಂಡಾ ಕಟ್ಟೆಗೆ ತೆರಳಿತು. ಅಲ್ಲಿ ಕಾಲಿ ಮಸ್ಜಿದ್ ಮುಂಭಾಗದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಹೋರಾಟಗಾರರು ಮಾತನಾಡಿದರು.

ಮೊದಲ ದಿನದ ಜಾಥಾ ವಿಜಯಪುರ ನಗರದಲ್ಲಿ ಸಮಾಪ್ತಿಗೊಂಡಿತು. ಎರಡನೇ ದಿನ, ಅಂದರೆ ಜೂನ್ 14ರಂದು ವಿಜಯಪುರದಿಂದ ಹೊರಟ ಜಾಥಾ ಬಾಗಲಕೋಟೆ ತಲುಪಿದೆ. ಇಲ್ಲಿನ ವಿವಿಧ ಕೇಂದ್ರಗಳಲ್ಲಿ ಜನಜಾಗೃತಿ ಸಭೆಗಳು ನಡೆಯಲಿವೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

ಹಳೆಗನ್ನಡ ಸಾಹಿತ್ಯ, ಶಾಸನಗಳು ಹಾಗೂ ಹಸ್ತಪ್ರತಿಗಳು ನಮ್ಮ ಜ್ಞಾನ ಪರಂಪರೆಯ ಮೂಲ...

ಪಶ್ಚಿಮ ಏಷ್ಯಾ ಸಂಘರ್ಷ: 14 ನಾವಿಕರು ಸೇರಿ 22 ಭಾರತೀಯರ ಸಾವು: ಕೇಂದ್ರ ಮಾಹಿತಿ

​ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ 14 ನಾವಿಕರು ಸೇರಿದಂತೆ 22 ಜನ...

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...