ವಿಜಯಪುರ | ಖರ್ಗೆ ನಿಂತ ವೇದಿಕೆ ಶುದ್ಧೀಕರಣ: ಜಾತಿ ಅವಮಾನದ ವಿರುದ್ಧ ದಸಂಸ ಕಿಡಿ

Date:

ಉತ್ತರಾಖಂಡದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಹಿಂದೂ ಸಂಘಟನೆಗಳ ಮುಖಂಡರು ಗೋಮೂತ್ರ ಬಳಸಿ ಶುದ್ಧೀಕರಿಸಿ ಹೋಮ-ಹವನ ನಡೆಸಿರುವುದನ್ನು ವಿಜಯಪುರ ದಲಿತ ಸಂಘರ್ಷ ಸಮಿತಿ ಖಂಡಿಸಿದೆ.

- Advertisement -

ಆಗಸ್ಟ್ 8ರಂದು ಉತ್ತರಾಖಂಡದ ಅಲ್ಪಾನೀಯಾ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ್ದರು. ಕಾರ್ಯಕ್ರಮ ನಡೆದ ಎರಡು ದಿನಗಳ ಬಳಿಕ ಅವರು ಭಾಷಣ ಮಾಡಿದ ವೇದಿಕೆಯ ಸ್ಥಳವನ್ನು ಅಪವಿತ್ರವಾಗಿದೆ ಎಂದು ಶುದ್ಧೀಕರಣ ಮಾಡಿರುವುದು ಅಸ್ಪೃಶ್ಯತೆ ಹಾಗೂ ಜಾತಿ ಆಧಾರಿತ ಅವಮಾನವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲಾ ಸಂಚಾಲಕರಾದ ಅಶೋಕ ಛಲವಾದಿ ಮಾತನಾಡಿ, “ಒಬ್ಬ ವ್ಯಕ್ತಿಗೆ ಮಾಡಿದ ಅವಮಾನ ಮಾತ್ರವಲ್ಲದೆ, ಇದು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಇಂತಹ ಕೃತ್ಯಗಳು ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆ ತರುವುದಲ್ಲದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶ ತಲೆತಗ್ಗಿಸುವಂತಾಗಿದೆ” ಎಂದು ಆರೋಪಿಸಿದರು.

ಜಿಲ್ಲಾ ಸಹಾ ಸಂಚಾಲಾಕರದ ಶರಣು ಶಿಂದೆ ಮಾತನಾಡಿ, “ಕೇಂದ್ರ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು. ತಪ್ಪಿತಸ್ಥರನ್ನು ದೇಶದಿಂದ ಗಡಿಪಾರು ಮಾಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಂಸತ್ತಿನಲ್ಲಿ ತುರ್ತು ವಿಧೇಯಕ ಮಂಡಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೃತ್ಯವೆಸಗಿದವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಹಾ ಸಂಚಾಲಕರಾದ ರಮೇಶ ಆಸಂಗಿ, ವಿಭಾಗೀಯ ಸಂಚಾಲಕರಾದ ವಿನಾಯಕ ಗುಣಸಾಗರ,ಜಿಲ್ಲಾ ಮುಖಾಂಡರದ ಲಕ್ಕಪ್ಪ ಬಡಿಗೇರ, ಪರಶುರಾಮ್ ಡಿಂಡಿವಾರ, ಪ್ರಕಾಶ ಗುಡಿಮನಿ, ಸಾಗರ ಹೊಸಮನಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...