ವಿಜಯಪುರ | ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ನೇಮಕ

Date:

ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್ ಏಕ್ತಾ ಮಿಷನ್ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ಅವರನ್ನು ನೇಮಕ ಮಾಡಲಾಗಿದೆ. ಸಂಘಟನೆಯ ರಾಜ್ಯ ನಾಯಕತ್ವದ ನಿರ್ದೇಶನದಂತೆ ರಾಕೇಶ್ ಕುಮಟಗಿ ಅವರಿಗೆ ವಿಜಯಪುರ ಜಿಲ್ಲಾ ಅಧ್ಯಕ್ಷರ ಜವಾಬ್ದಾರಿ ವಹಿಸಲಾಗಿದ್ದು, ಈ ಕುರಿತು ಅಧಿಕೃತ ನೇಮಕಾತಿ ಆದೇಶ ನೀಡಲಾಗಿದೆ.

- Advertisement -

ಜಿಲ್ಲೆಯಾದ್ಯಂತ ಗ್ರಾಮ ಮಟ್ಟದಿಂದ ಸಂಘಟನೆಯನ್ನು ಬಲಪಡಿಸುವುದು, ಯುವಕರನ್ನು ಸಂಘಟನೆಯೊಂದಿಗೆ ಒಗ್ಗೂಡಿಸುವುದು ಹಾಗೂ ಜನರಲ್ಲಿ ಸಂವಿಧಾನಾತ್ಮಕ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಅವರ ಪ್ರಮುಖ ಜವಾಬ್ದಾರಿಗಳಾಗಿವೆ. ಸಾಮಾಜಿಕವಾಗಿ ಹಿಂದುಳಿದ, ಶೋಷಿತ ಹಾಗೂ ದುರ್ಬಲ ವರ್ಗಗಳ ಸಮಸ್ಯೆಗಳನ್ನು ಕಾನೂನುಬದ್ಧ ಮತ್ತು ಪ್ರಜಾಸತ್ತಾತ್ಮಕ ಮಾರ್ಗಗಳ ಮೂಲಕ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ನೇಮಕಾತಿ ಬಳಿಕ ಮಾತನಾಡಿದ ರಾಕೇಶ್ ಕುಮಟಗಿ, ಜಿಲ್ಲಾಧ್ಯಕ್ಷರ ಜವಾಬ್ದಾರಿ ಕೇವಲ ಹುದ್ದೆಯಲ್ಲ. ಇದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮಹತ್ವದ ಹೊಣೆಗಾರಿಕೆಯಾಗಿದೆ. ವಿಜಯಪುರ ಜಿಲ್ಲೆಯ ಪ್ರತಿಯೊಂದು ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಿ, ಯುವಕರನ್ನು ಒಗ್ಗೂಡಿಸುವುದರ ಜೊತೆಗೆ ಸಂವಿಧಾನದ ಮೌಲ್ಯಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ಅನ್ಯಾಯ, ಶೋಷಣೆ ಹಾಗೂ ಜನರ ಹಕ್ಕುಗಳ ಉಲ್ಲಂಘನೆಗಳ ವಿರುದ್ಧ ಕಾನೂನಿನ ಚೌಕಟ್ಟಿನೊಳಗೆ ಧ್ವನಿ ಎತ್ತುವುದು, ಸಾರ್ವಜನಿಕ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಜನರು ನ್ಯಾಯ ಪಡೆಯಲು ಅಗತ್ಯವಿರುವ ಕಾನೂನುಬದ್ಧ ಕ್ರಮಗಳಿಗೆ ಸಹಕರಿಸುವುದು ಸಂಘಟನೆಯ ಆದ್ಯತೆಯಾಗಲಿದೆ ಎಂದು ತಿಳಿಸಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ದೇಶೀಯ ಕ್ಷಿಪಣಿ ಬಳಸಿ ಸೌದಿಯ ಎಫ್-15 ಯುದ್ಧವಿಮಾನ ಹೊಡೆದುರುಳಿಸಿದ ಹೌತಿ ಪಡೆ

ಯೆಮೆನ್‌ನ ಮಾರಿಬ್ ಪ್ರಾಂತ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಸೌದಿ ಅರೇಬಿಯಾದ 'ಎಫ್-15' (F-15)...

ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

79ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ...