ವಿಜಯಪುರ | ದ.ಸಾ.ಪ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರವಿ ಕಿತ್ತೂರ ನೇಮಕ

Date:

ಸಾಮಾಜಿಕ, ಸಾಹಿತ್ಯಿಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದಲಿತಪರ ಚಿಂತಕ ರವಿ ಕಿತ್ತೂರ ಅವರನ್ನು ದಲಿತ ಸಾಹಿತ್ಯ ಪರಿಷತ್ತು (ದಸಾಪ) ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

- Advertisement -

ಈ ಕುರಿತು ದಸಾಪ ಬೆಳಗಾವಿ ವಿಭಾಗದ ಸಂಯೋಜಕ ಮೋಹನ ಕಟ್ಟಿಮನಿ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ. “ಸಮಾಜದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ದಲಿತ ಸಮುದಾಯದ ಹಕ್ಕುಗಳ ಪರವಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ, ರವಿ ಕಿತ್ತೂರ ಹಲವು ವರ್ಷಗಳಿಂದ ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸಂಘಟನಾ ಸಾಮರ್ಥ್ಯ, ಸಮಾಜಪರ ಕಾಳಜಿ ಹಾಗೂ ದಲಿತ ಸಾಹಿತ್ಯ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ವಹಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡಿರುವ ರವಿ ಕಿತ್ತೂರ ಅವರು ದಲಿತ ಸಾಹಿತ್ಯ ಪರಿಷತ್ತಿನ ಆಶಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜನಸಾಮಾನ್ಯರ ನಡುವೆ ತಲುಪಿಸುವುದರ ಜೊತೆಗೆ, ಯುವ ಬರಹಗಾರರನ್ನು ಪ್ರೋತ್ಸಾಹಿಸುವುದು, ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ದಲಿತ ಸಾಹಿತ್ಯ ಚಳವಳಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ನೇಮಕಾತಿಗೆ ಸಂಬಂಧಿಸಿದಂತೆ ಪರಿಷತ್ತಿನ ಪದಾಧಿಕಾರಿಗಳು, ಸಾಹಿತ್ಯಾಸಕ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ರವಿ ಕಿತ್ತೂರ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಅವರ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯಲ್ಲಿ ದಲಿತ ಸಾಹಿತ್ಯ ಚಟುವಟಿಕೆಗಳು ಮತ್ತಷ್ಟು ವಿಸ್ತಾರಗೊಳ್ಳಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...