ವಿಜಯಪುರ | ಸರ್ಕಾರಿ ವಿವಿಗಳಲ್ಲಿನ ಪದವಿ ಶುಲ್ಕ ಇಳಿಕೆಗೆ ಒತ್ತಾಯ

Date:

ಸರ್ಕಾರಿ ವಿವಿಗಳಲ್ಲಿನ ಪದವಿ ಶುಲ್ಕ ಇಳಿಕೆ ಮಾಡಿ ಎಂದು ಒತ್ತಾಯಿಸಿ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಸಮಿತಿ ರಾಜ್ಯಸರ್ಕಾರಕ್ಕೆ ಮನವಿ ಮಾಡಿದೆ.

- Advertisement -

ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯದ ಸರ್ಕಾರಿ ವಿವಿಗಳಲ್ಲಿನ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸುಗಳ ಶುಲ್ಕದಲ್ಲಿ ಏಕರೂಪ ತರಲು ಉನ್ನತ ಶಿಕ್ಷಣ ಸಮಿತಿಯು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾವವನ್ನು ಇರಿಸಿದೆ. ಹಲವು ಸರ್ಕಾರಿ ವಿವಿಗಳಲ್ಲಿ ದುಬಾರಿ ಶುಲ್ಕವನ್ನು ವಿಧಿಸಿದ್ದು, ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಇದು ಹೊರೆಯನ್ನು ಉಂಟು ಮಾಡುತ್ತಿರುವ ಕಾರಣ, ಎಲ್ಲಾ ಸರ್ಕಾರಿ ವಿವಿಗಳ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಶುಲ್ಕದಲ್ಲಿ ಏಕರೂಪತೆ ತರಬೇಕೆಂದು ರೂ. 11,500ರಿಂದ ಆರಂಭವಾಗುವಂತೆ ವಿವಿಧ ವಿಭಾಗಗಳಿಗೆ ಸಮಿತಿಯು ಶುಲ್ಕ ವಿಧಿಸಿ ತನ್ನ ಪ್ರಸ್ತಾವವನ್ನು ರಾಜ್ಯ ಸರ್ಕಾರದ ಮುಂದಿರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿವಿಗಳಲ್ಲಿನ ಪದವಿ ಶುಲ್ಕ ಈಗಾಗಲೇ, ಸರ್ಕಾರಿ ಪದವಿ ಕಾಲೇಜುಗಳ ಶುಲ್ಕಕ್ಕಿಂತ ಶೇ.300ರಷ್ಟು ಹೆಚ್ಚಿದ್ದು, ಇಲ್ಲಿನ ದಾಖಲಾತಿ ಪ್ರಮಾಣ ಅತ್ಯಂತ ಕೆಳ ಮಟ್ಟಕ್ಕೆ ಕುಸಿದಿದೆ. ಹಲವು ಸರ್ಕಾರಿ ಪದವಿ ಕಾಲೇಜುಗಳು ಈಗಾಗಲೇ ಕ್ಲಸ್ಟರ್ ವಿವಿಗಳಾಗಿ ಪರಿವರ್ತನೆಗೊಂಡಿದ್ದು,  3500ರಿಂದ ಆರಂಭವಾಗುವ ಸರ್ಕಾರಿ ಕಾಲೇಜು ಪದವಿ ಶುಲ್ಕ, ಇಲ್ಲಿ ಇದೀಗ ಹತ್ತು ಸಾವಿರದಿಂದ ಆರಂಭವಾಗುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ, ಬಡ ವಿದ್ಯಾರ್ಥಿಗಳ ದೃಷ್ಟಿಯಿಂದ, ಸರ್ಕಾರಿ ವಿವಿಗಳಿಗೆ ಹೆಚ್ಚುವರಿ ಅನುದಾನವನ್ನು ನೀಡಿ, ಇಲ್ಲಿನ ಪದವಿ ಕೋರ್ಸ್‌ಗಳಿಗೆ ಸರ್ಕಾರಿ ಪದವಿ ಕಾಲೇಜಿನ ಶುಲ್ಕವನ್ನು ನಿಗದಿ ಮಾಡಬೇಕಿದೆ ಎಂದರು.

ಅಷ್ಟೇ ಅಲ್ಲದೆ, ಸಮಿತಿಯು ವಿವಿಗಳು ಸಿಂಡಿಕೇಟ್ ಅನುಮತಿ ಪಡೆದು ಪ್ರತೀ ವರ್ಷ ಶೇ.10ರಷ್ಟು ಶುಲ್ಕ ಏರಿಸಬಹುದು ಎಂದು ಹೇಳಿದೆ. ಇದು ಅನುಷ್ಠಾನಕ್ಕೆ ಬಂದಲ್ಲಿ ಇನ್ನೆರಡು ವರ್ಷಗಳಲ್ಲಿ ಸರ್ಕಾರಿ ವಿವಿಗಳ ಪದವಿ ಶುಲ್ಕವು ಖಾಸಗಿ ಪದವಿ ಕಾಲೇಜುಗಳ ಶುಲ್ಕದ ಮಟ್ಟವನ್ನು ತಲುಪುತ್ತದೆ. ಪದೇ ಪದೇ ಅನುದಾನ ಕೊರತೆಯ ನೆಪವೊಡ್ಡಿ ಹಲವು ವಿವಿಗಳ ಶುಲ್ಕ ಏರಿಕೆ ಮಾಡುತ್ತಿವೆ. ಹಾಗಾಗಿಯೇ ಸರ್ಕಾರಿ ಪದವಿ ಕಾಲೇಜುಗಳ ಶುಲ್ಕಕ್ಕೂ, ಸರ್ಕಾರಿ ವಿವಿಗಳ ಶುಲ್ಕಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ಹಾಗಾಗಿ, ಏಕರೂಪ ಶುಲ್ಕ ವಿಧಾನ ತರುವುದೇ ಸರ್ಕಾರದ ಉದ್ದೇಶವಾದಲ್ಲಿ, ಸರ್ಕಾರಿ ಪದವಿ ಕಾಲೇಜುಗಳ ಶುಲ್ಕ ಪ್ರಮಾಣವನ್ನೇ ಸರ್ಕಾರಿ ವಿವಿಗಳ ಪದವಿ ಕೋರ್ಸ್ಗಳಲ್ಲಿ ಸರ್ಕಾರ ಅನುಷ್ಠಾನಗೊಳಿಸಬೇಕು. ಹಾಗಾದಲ್ಲಿ ಮಾತ್ರ ಬಡ ವಿದ್ಯಾರ್ಥಿಗಳು, ಅವರ ವ್ಯಾಸಂಗಕ್ಕೆಂದೇ ಆರಂಭವಾಗಿರುವ ಸರ್ಕಾರಿ ವಿಶ್ವ ವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಬಹುದು. ಈ ನಿಟ್ಟಿನಲ್ಲಿ ವಿವಿಗಳ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕೆಂದು ಎಐಡಿಎಸ್‌ಒ ಜಿಲ್ಲಾ ಸಮಿತಿ ಪರವಾಗಿ ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...