ವಿಜಯಪುರ | 7 ದಿನಗಳಲ್ಲಿ ಹಾಜರಾಗದಿದ್ದರೆ ಸಹಕಾರ ಸಂಘಗಳ ನೋಂದಣಿ ರದ್ದು

Date:

ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಹಲವು ವರ್ಷಗಳಿಂದ ನಿಷ್ಕ್ರಿಯವಾಗಿರುವ ವಿಜಯಪುರ ಜಿಲ್ಲೆಯ ಸಹಕಾರ ಸಂಘಗಳಿಗೆ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಅಂತಿಮ ನೋಟಿಸ್ ಜಾರಿಗೊಳಿಸಿದೆ. 7 ದಿನಗಳೊಳಗೆ ಹಾಜರಾಗದಿದ್ದರೆ ಸಂಘಗಳ ನೋಂದಣಿ ರದ್ದುಗೊಳಿಸುವುದಾಗಿ ಸೂಚನೆ ನೀಡಲಾಗಿದೆ.

- Advertisement -

“ನಿಗದಿತ ಅವಧಿಯೊಳಗೆ ಹಾಜರಾಗದಿದ್ದರೆ ಯಾವುದೇ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ, ಸಂಘಗಳ ನೋಂದಣಿ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುವುದು. 7 ದಿನಗಳ ಬಳಿಕ ಸಲ್ಲಿಸುವ ಯಾವುದೇ ಆಕ್ಷೇಪಣೆ ಅಥವಾ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ” ಎಂದು ಉಪನಿಬಂಧಕರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ನೋಟಿಸ್ ನೀಡಲಾದ ಸಂಘಗಳಲ್ಲಿ ಮುದ್ರಣಾಲಯ ಸಹಕಾರ ಸಂಘ ನಿ., ವಿಜಯಪುರ, ವಿಜಾಪುರ ಬ್ರಿಕ್ಸ್ ಮತ್ತು ಟೈಲ್ಸ್ ಕೂಲಿಕಾರರ ಸಹಕಾರ ಸಂಘ ನಿ., ವಿಜಯಪುರ, ಶ್ರೀ ಸಿದ್ದೇಶ್ವರ ಮಹಿಳಾ ವಿವಿಧೋದ್ದೇಶಗಳ ಸಹಕಾರ ಸಂಘ ನಿ., ವಿಜಯಪುರ ಹಾಗೂ ಮಹಿಳಾ ವಿವಿಧೋದ್ದೇಶಗಳ ಸಹಕಾರ ಸಂಘ, ವಿಜಯಪುರ ಸೇರಿವೆ.

ಈ ಸಂಘಗಳು ಹಲವು ವರ್ಷಗಳಿಂದ ನಿಷ್ಕ್ರಿಯವಾಗಿದ್ದು, ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಇಲಾಖೆಯ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ-1959ರ ಕಲಂ 72(2)ರಡಿ ಈ ಪ್ರಕಟಣೆಯನ್ನೇ ಸಂಬಂಧಿತ ಸಂಘಗಳ ಸದಸ್ಯರು ಹಾಗೂ ಆಡಳಿತ ಮಂಡಳಿಗೆ ನೀಡಿರುವ ಅಂತಿಮ ನೋಟಿಸ್ ಎಂದು ಪರಿಗಣಿಸಬೇಕು ಎಂದು ಸಹಕಾರಿ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...