ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

Date:

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ ಸಲಹೆ ನೀಡಿದರು.

- Advertisement -

ವಿಜಯಪುರ ತಾಲೂಕಿನ ಕತನಕಹಳ್ಳಿ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕತನಕಹಳ್ಳಿ ಸಮುದಾಯ ಮಧ್ಯಸ್ಥಿಕೆ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಸಮುದಾಯ ಮಧ್ಯಸ್ಥಿಕೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ಕಾಲುದಾರಿ, ಬಂಡಿದಾರಿ, ನಾಲೆ ನೀರು, ಕೌಟುಂಬಿಕ ಕಲಹ ಸೇರಿದಂತೆ ಗ್ರಾಮಗಳಲ್ಲಿ ಉದ್ಭವಿಸುವ ಸಣ್ಣಪುಟ್ಟ ವಿವಾದಗಳು ದೊಡ್ಡ ವ್ಯಾಜ್ಯಗಳಾಗಿ ನ್ಯಾಯಾಲಯದ ಮೆಟ್ಟಿಲೇರುವುದನ್ನು ತಪ್ಪಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ವಿಚಾರಗಳೇ ಕೆಲವೊಮ್ಮೆ ಪರಸ್ಪರ ಮನಸ್ತಾಪಕ್ಕೆ ಕಾರಣವಾಗಿ, ನಂತರ ಗಂಭೀರ ವಿವಾದಗಳಾಗಿ ರೂಪುಗೊಳ್ಳುತ್ತವೆ. ಸಮಸ್ಯೆ ಆರಂಭವಾದ ಹಂತದಲ್ಲೇ ಎರಡೂ ಕಡೆಯವರು ಕುಳಿತು ಚರ್ಚಿಸಿ ಪರಿಹಾರ ಕಂಡುಕೊಂಡರೆ ಸಮಯ, ಹಣ ಹಾಗೂ ಸಂಬಂಧಗಳ ಹಾನಿಯನ್ನು ತಪ್ಪಿಸಬಹುದು ಎಂದು ಅವರು ತಿಳಿಸಿದರು.

ಸಮುದಾಯ ಮಧ್ಯಸ್ಥಿಕೆ ವ್ಯವಸ್ಥೆ ಯಾವುದೇ ಒಂದು ಪಕ್ಷದ ಪರ ನಿಲ್ಲದೆ, ಸಂಬಂಧಪಟ್ಟವರನ್ನು ಮಾತುಕತೆಗೆ ಕರೆತಂದು ಪರಸ್ಪರ ಒಪ್ಪಿಗೆಯ ಮೂಲಕ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಹೀಗಾಗಿ ಗ್ರಾಮಸ್ಥರು ಈ ವ್ಯವಸ್ಥೆಯ ಬಗ್ಗೆ ಅರಿವು ಹೊಂದಿ, ಅಗತ್ಯವಿದ್ದಾಗ ಇದರ ನೆರವು ಪಡೆಯಬೇಕು ಎಂದರು.

‘ನಮ್ಮ ಗ್ರಾಮ–ನಮ್ಮ ನ್ಯಾಯ’ ಎಂಬ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅರವಿಂದ ಹಾಗರಗಿ ಹೇಳಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆಯುತ್ತಿರುವ ಈ ಅಭಿಯಾನದಡಿ, ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳಿಗೆ ರವಾನಿಸಿ, ತರಬೇತಿ ಪಡೆದ ಪರಿಣಿತ ಮಧ್ಯಸ್ಥಿಕೆಗಾರರ ಮೂಲಕ ಉಭಯ ಪಕ್ಷಗಳ ಒಪ್ಪಿಗೆಯಿಂದ ಪರಿಹರಿಸುವ ಉದ್ದೇಶ ಹೊಂದಲಾಗಿದೆ.

ವಿಜಯಪುರ ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ್ ಎ. ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ ಅವರು ಸಾರ್ವಜನಿಕರು ಮತ್ತು ಕಕ್ಷಿದಾರರು ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ರಾಜಿ ಸಂಧಾನಕ್ಕೆ ಅವಕಾಶವಿರುವ ಪ್ರಕರಣಗಳಲ್ಲಿ ಕಕ್ಷಿದಾರರಿಗೆ ಸೂಕ್ತ ಮಾಹಿತಿ ನೀಡಿ, ಸೌಹಾರ್ದಯುತ ಪರಿಹಾರಕ್ಕೆ ಮುಂದಾಗುವಂತೆ ವಕೀಲರೂ ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಅಭಿಯಾನದ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ಇಂಡಿ, ಸಿಂದಗಿ, ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವ್ಯವಸ್ಥೆಗಳ ಕೂಪವಾದ ಶಿರವಾಡ ತ್ಯಾಜ್ಯ ಘಟಕ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

‘ನಾವು ಹೋದಾಗ ನೀವು ಬರ್ತೀರಿ’ ಎಂದಿದ್ದ ಮೋದಿ ಮಾತಿನ ಮರ್ಮವೇನು? ರಾಹುಲ್ ಈ ಘಟನೆ ನೆನೆದದ್ದು ಯಾಕೆ?

ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ...