ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯ ಸೌಲಭ್ಯಗಳ ಪರಿಶೀಲನೆ

Date:

ವಿಜಯಪುರ ಜಿಲ್ಲೆಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡಿರುವ ವಿಶೇಷ ಅಧಿಕಾರಿ ಡಾ. ರಾಜಶೇಖರ ಡ್ಯಾಬೇರಿ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಶೀಲನೆ ನಡೆಸಿದರು.

- Advertisement -

ರಾಷ್ಟ್ರೀಯ ವೈದ್ಯಕೀಯ ಆಯೋಗದ(ಎನ್‌ಎಂಸಿ) ನಿಯಮಾವಳಿಗಳನ್ನು ಕಾಲೇಜು ಸ್ಥಾಪನೆಗೆ ಅಗತ್ಯ ಭೂಮಿ, ಕಟ್ಟಡ, ಬೋಧನಾ ಆಸ್ಪತ್ರೆ ಹಾಗೂ ಇತರೆ ಶಾಸನಬದ್ಧ ಅವಶ್ಯಕತೆಗಳು ಸೇರಿದಂತೆ ಮಹತ್ವದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ವಿವಿಧ ಹಳೆಯ ಕಟ್ಟಡಗಳು ಹಾಗೂ ಪ್ರಗತಿಯಲ್ಲಿರುವ ಹೊಸ ಕಟ್ಟಡ ಕಾಮಗಾರಿಗಳನ್ನು ವಿಶೇಷ ಅಧಿಕಾರಿಗಳು ಖುದ್ದಾಗಿ ವೀಕ್ಷಿಸಿ, ಲಭ್ಯವಿರುವ ಮೂಲ ಸೌಕರ್ಯಗಳ ಪರಿಶೀಲಿಸಿದರು.

ಜಿಲ್ಲಾ ಶಾಸ್ತ್ರ ಚಿಕಿತ್ಸಕರ ಕೊಠಡಿಹಳ್ಳಿ ನಡೆದ ಸಭೆಯಲ್ಲಿ, ವೈದ್ಯಕೀಯ ಕಾಲೇಜಿಗೆ ಅಗತ್ಯವಾಗಿ ಬೇಕಾಗುವ ಮಾನವ ಸಂಪನ್ಮೂಲಗಳ ವಿವರಗಳು, ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್‌ಎಚ್‌ಎಂ) ಮತ್ತು ಡಿಎನ್‌ಬಿ ಕೋರ್ಸ್‌ಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಪಡೆದುಕೊಂಡರು.

ಈ ಸುದ್ದಿ ಓದಿದ್ದೀರಾ? ಏಷ್ಯನ್ ಆಟ್ಯಾಪಟ್ಯಾ ಚಾಂಪಿಯನ್‌ಶಿಪ್‌: ಚಿನ್ನ ಗೆದ್ದ ಗದಗದ ಯುವಕರು

ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ(ಎಂಸಿಎಚ್‌), ಸೂಪರ್ ಸ್ಪೆಷಾಲಿಟಿ ವಿಭಾಗ ಹಾಗೂ ಟ್ರಾಮಾ ಕೇಂದ್ರಗಳ ವೈದ್ಯಕೀಯ ವ್ಯವಸ್ಥೆ ಮತ್ತು ಅಲ್ಲಿ ಮಂಜೂರಾಗಿರುವ ಸಿಬ್ಬಂದಿ ವರ್ಗದ ಕುರಿತು ವಿವರವಾದ ಚರ್ಚೆ ನಡೆಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಮಾಸ್ತಿಹೊಳಿ, ಅರವಳಿಕೆ ಶಾಸ್ತ್ರಜ್ಞ ಡಾ. ಸಂದೀಪ ಎಸ್ ಸಜ್ಜನ, ಹಿರಿಯ ತಜ್ಞ ವೈದ್ಯ ಡಾ. ಹರೀಶ್ ಪೂಜಾರಿ, ಡಾ. ರಾಜಕುಮಾರ ಹಿರೇಮಠ, ಡಾ. ಸಿದ್ದಗೊಂಡಪ್ಪ ಹಾವಿನಾಳ, ಸಹಾಯಕ ಎಂಜಿನಿಯರ್ ಮಹೇಶ್ ಆರ್ ಜಾಧವ್, ಆಸ್ಪತ್ರೆಯ ಆಡಳಿತ ವೈದ್ಯಧಿಕಾರಿ ಸೇರಿದಂತೆ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಟ: ಇಲಾಖೆಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ಸಂಬಂಧಿಸಿದಂತೆ ರೈಲ್ವೆ...

ಈ ದಿನ ಸಂಪಾದಕೀಯ | ಮೋದಿಯ 56 ಇಂಚಿನ ಅಳ್ಳೆದೆ ಮತ್ತು ಚೀನಾದ ಅತಿಕ್ರಮಣ

ಒಂದು ಕಡೆ ಚೀನಾ ನಮ್ಮ ಗಡಿ ಅತಿಕ್ರಮಿಸುತ್ತಿದ್ದರೆ, ಇನ್ನೊಂದು ಕಡೆ ಅದೇ...

ಮುಂಡಗೋಡ | ಆಲಳ್ಳಿಯಲ್ಲಿ ವೃದ್ಧೆ ಅನುಮಾನಾಸ್ಪದ ಸಾವು; ₹1.70 ಲಕ್ಷ ನಗದು, ಚಿನ್ನಾಭರಣ ನಾಪತ್ತೆ

ಮುಂಡಗೋಡ ತಾಲೂಕಿನ ಆಲಳ್ಳಿ ಗ್ರಾಮದಲ್ಲಿ 75 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಅನುಮಾನಾಸ್ಪದವಾಗಿ...

ಬೆಂಗಳೂರು ಮೆಟ್ರೋ ಬ್ಲೂ ಲೈನ್ ಕಾಮಗಾರಿಗೆ ಸುಪ್ರೀಂ ಅಸ್ತು; ನಿರ್ಮಾಣ ಮುಂದುವರಿಸಲು ಅನುಮತಿ

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿರೀಕ್ಷೆಯಿರುವ ನಮ್ಮ ಮೆಟ್ರೋದ ಬ್ಲೂ...