ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

Date:

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ, ಮಾರುಕಟ್ಟೆ ಹಾಗೂ ಬಸ್ ನಿಲ್ದಾಣಗಳಂತಹ ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು.

ವಿಜಯಪುರ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಅಸಮರ್ಪಕ ತ್ಯಾಜ್ಯ ವಿಲೇವಾರಿ, ಬೀದಿ ನಾಯಿಗಳ ಸಂತಾನೋತ್ಪತ್ತಿ ನಿಯಂತ್ರಣದಲ್ಲಿನ ಲೋಪ ಹಾಗೂ ಸ್ಥಳೀಯ ಸಂಸ್ಥೆಗಳ ನಿಯಂತ್ರಣ ಕ್ರಮಗಳ ಕೊರತೆಯಿಂದಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ ಹಿಂಡುಗಳ ಸಂಚಾರ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

- Advertisement -

ಜಿಲ್ಲೆಯಲ್ಲಿ ದಾಖಲಾಗುತ್ತಿರುವ ನಾಯಿ ಕಡಿತದ ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. 2026ರ ಜನವರಿ 1ರಿಂದ ಸೆಪ್ಟೆಂಬರ್ 22ರವರೆಗೆ ಒಟ್ಟು 28,114 ನಾಯಿ ಕಡಿತದ ಪ್ರಕರಣಗಳು ದಾಖಲಾಗಿವೆ. 2025ರಲ್ಲಿ 32,317 ಪ್ರಕರಣಗಳು ವರದಿಯಾಗಿದ್ದರೆ, 2024ರಲ್ಲಿ 23,409 ಪ್ರಕರಣಗಳು ದಾಖಲಾಗಿದ್ದವು. ಅಂದರೆ, 2024ಕ್ಕೆ ಹೋಲಿಸಿದರೆ 2025ರಲ್ಲಿ 8,908 ಪ್ರಕರಣಗಳು ಹೆಚ್ಚಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಒಂಬತ್ತು ತಿಂಗಳಲ್ಲೇ ಕಳೆದ ವರ್ಷದ ಅಂಕಿ-ಅಂಶಕ್ಕೆ ಸಮೀಪ!

2026ರ ಮೊದಲ ಒಂಬತ್ತು ತಿಂಗಳಲ್ಲೇ 28,114 ನಾಯಿ ಕಡಿತದ ಪ್ರಕರಣಗಳು ವರದಿಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿತೋರಿಸುತ್ತದೆ. 2024ರ ಇಡೀ ವರ್ಷದಲ್ಲಿ ದಾಖಲಾಗಿದ್ದ ಪ್ರಕರಣಗಳಿಗಿಂತಲೂ ಪ್ರಸಕ್ತ ವರ್ಷದ ಸೆಪ್ಟೆಂಬರ್ 22ರ ವರೆಗಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ವರ್ಷದ ಒಟ್ಟು ಪ್ರಕರಣಗಳ ಸಂಖ್ಯೆಯನ್ನೂ ಪ್ರಸಕ್ತ ವರ್ಷದ ಅಂತ್ಯದೊಳಗೆ ಮೀರಿಸುವ ಸಾಧ್ಯತೆ ಇರುವುದರಿಂದ, ಬೀದಿ ನಾಯಿಗಳ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.

ಈದಿನ.ಕಾಮ್ ಜೊತೆ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅಪ್ಪಾಸಾಹೇಬ ವಿರಾಮದಾರ, “ಜಿಲ್ಲೆಯಲ್ಲಿ ಈವರೆಗೆ 28,114 ನಾಯಿ ಕಡಿತದ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಬೆಂಗಳೂರು ನಗರ ನಂತರ ವಿಜಯಪುರದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ” ಎಂದು ತಿಳಿಸಿದರು.

dad15619 7ee5 4c05 867b 5fcbcdea87c3

ತ್ಯಾಜ್ಯ ನಿರ್ವಹಣೆ, ಸಂತಾನ ನಿಯಂತ್ರಣಕ್ಕೆ ಆದ್ಯತೆ

ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಕೇವಲ ತಾತ್ಕಾಲಿಕ ಕ್ರಮಗಳನ್ನು ಕೈಗೊಂಡರೆ ಸಾಲದು. ನಾಯಿಗಳಿಗೆ ಸುಲಭವಾಗಿ ಆಹಾರ ದೊರೆಯುವಂತೆ ಮಾಡುವ ಹೋಟೆಲ್‌ಗಳ ತ್ಯಾಜ್ಯ, ಮಾಂಸದ ಅಂಗಡಿಗಳ ತ್ಯಾಜ್ಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುವ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಅತ್ಯಗತ್ಯವಾಗಿದೆ. ಇದರೊಂದಿಗೆ ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ (ಎಬಿಸಿ), ರೇಬಿಸ್ ನಿರೋಧಕ ಲಸಿಕೆ ಹಾಗೂ ಅವುಗಳ ಆರೋಗ್ಯ ನಿರ್ವಹಣೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆಗಳು, ಆಸ್ಪತ್ರೆಗಳು, ಮಾರುಕಟ್ಟೆಗಳು, ಬಸ್ ನಿಲ್ದಾಣಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು.

“ಬೀದಿ ನಾಯಿಗಳ ನಿಯಂತ್ರಣದ ಹೆಸರಿನಲ್ಲಿ ಪ್ರಾಣಿಗಳ ಮೇಲೆ ಕ್ರೌರ್ಯ ಎಸಗದೆ, ಪ್ರಾಣಿ ಕಲ್ಯಾಣ ನಿಯಮಗಳನ್ನು ಪಾಲಿಸುತ್ತಲೇ ವೈಜ್ಞಾನಿಕ ಮತ್ತು ಕಾನೂನುಬದ್ಧ ಕ್ರಮಗಳನ್ನು ಅನುಸರಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಸಮಗ್ರ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು” ಎಂದು ಸಫಾಯಿ ಕರ್ಮಚಾರಿ, ನಮ್ಮ ನಿರ್ದೇಶನ ಸದಸ್ಯ ಚನ್ನು ಕಟ್ಟಿಮನಿ ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿ ನಾಲತವಾಡ ಹೋಬಳಿ ಅಧ್ಯಕ್ಷ ಗುಂಡಪ್ಪ ಚಲವಾದಿ ಮಾತನಾಡಿ, “ಪಟ್ಟಣದಲ್ಲಿ ನಾಯಿ ಕಡಿತದ ಹಲವು ಪ್ರಕರಣಗಳು ವರದಿಯಾಗಿದ್ದರೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಬೀದಿ ನಾಯಿಗಳ ಹಾವಳಿಯಿಂದ ಜನಸಾಮಾನ್ಯರು ಆತಂಕದಲ್ಲಿ ಬದುಕುವಂತಾಗಿದೆ. ನಾಯಿ ಕಡಿತದ ಪ್ರಕರಣಗಳಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ. ಕೂಡಲೇ ಪಟ್ಟಣ ಪಂಚಾಯಿತಿ ಆಡಳಿತ ಎಚ್ಚೆತ್ತುಕೊಂಡು ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಾಯಿ ಕಡಿದರೆ ನಿರ್ಲಕ್ಷ್ಯ ಬೇಡ: ತಕ್ಷಣ ಚಿಕಿತ್ಸೆ ಪಡೆಯಿರಿ

ನಾಯಿ ಕಡಿತಕ್ಕೆ ಒಳಗಾದವರು ಗಾಯ ಸಣ್ಣದಿದೆ, ರಕ್ತ ಬಂದಿಲ್ಲ ಅಥವಾ ನಾಯಿ ಸಾಕುಪ್ರಾಣಿಯಾಗಿದೆ ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡಬಾರದು. ರೇಬಿಸ್ ಮಾರಣಾಂತಿಕ ಕಾಯಿಲೆಯಾಗಿದ್ದು, ಲಕ್ಷಣಗಳು ಕಾಣಿಸಿಕೊಂಡ ಬಳಿಕ ಚಿಕಿತ್ಸೆ ನೀಡುವುದು ಅತ್ಯಂತ ಕಷ್ಟಕರ. ಹೀಗಾಗಿ ನಾಯಿ ಕಡಿತದ ತಕ್ಷಣವೇ ವೈದ್ಯಕೀಯ ನೆರವು ಪಡೆಯುವುದು ಅತ್ಯಗತ್ಯ.

  • ನಾಯಿ ಕಡಿದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು
  • ಗಾಯವನ್ನು ತಕ್ಷಣ ತೊಳೆಯಿರಿ: ಗಾಯವನ್ನು ಹರಿಯುವ ಸ್ವಚ್ಛ ನೀರು ಮತ್ತು ಸಾಬೂನಿನಿಂದ ಕನಿಷ್ಠ 15 ನಿಮಿಷಗಳ ಕಾಲ ಚೆನ್ನಾಗಿ ತೊಳೆಯಬೇಕು.
  • ಆಸ್ಪತ್ರೆಗೆ ತೆರಳಿ: ಸಮೀಪದ ಸರ್ಕಾರಿ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಕ್ಕೆ ತಕ್ಷಣ ಭೇಟಿ ನೀಡಿ ವೈದ್ಯಕೀಯ ಸಲಹೆ ಪಡೆಯಬೇಕು.
  • ವೈದ್ಯರ ಸಲಹೆಯಂತೆ ರೇಬಿಸ್ ನಿರೋಧಕ ಲಸಿಕೆ ಪಡೆಯಬೇಕು. ಅಗತ್ಯವಿದ್ದಲ್ಲಿ ರೇಬಿಸ್ ಇಮ್ಯುನೊಗ್ಲೋಬ್ಯುಲಿನ್‌ ಚಿಕಿತ್ಸೆಯನ್ನೂ ಪಡೆಯಬೇಕು.
  • ಮನೆಮದ್ದುಗಳಿಗೆ ಸೀಮಿತವಾಗಬೇಡಿ: ಗಾಯಕ್ಕೆ ಅರಿಶಿನ, ಎಣ್ಣೆ ಅಥವಾ ಇತರ ಮನೆಮದ್ದುಗಳನ್ನು ಹಚ್ಚುವುದನ್ನು ತಪ್ಪಿಸಬೇಕು. ವೈದ್ಯಕೀಯ ಚಿಕಿತ್ಸೆಯನ್ನು ವಿಳಂಬಿಸಬಾರದು.
  • ಚಿಕಿತ್ಸೆಯ ಪೂರ್ಣ ಕೋರ್ಸ್ ಮುಗಿಸಿ: ವೈದ್ಯರು ಸೂಚಿಸಿದ ಲಸಿಕೆಗಳ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಜನರ ಸುರಕ್ಷತೆ ಯಾರ ಹೊಣೆ?

ನಾಯಿ ಕಡಿತದ ಪ್ರಕರಣಗಳ ನಿರಂತರ ಏರಿಕೆ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಬೇಕಾದ ವಿಷಯವಾಗಿದೆ. ಜನರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗುವ ಮುನ್ನವೇ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ.

ನಾಯಿ ಕಡಿತದ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳ ಗುರುತಿಸುವಿಕೆ, ತ್ಯಾಜ್ಯ ವಿಲೇವಾರಿಯ ಸುಧಾರಣೆ, ಬೀದಿ ನಾಯಿಗಳ ಸಂತಾನ ನಿಯಂತ್ರಣ, ರೇಬಿಸ್ ಲಸಿಕಾ ಕಾರ್ಯಕ್ರಮ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಅಂಕಿ-ಅಂಶಗಳ ದಾಖಲಾತಿಗೆ ಮಾತ್ರ ಸೀಮಿತವಾಗದೆ, ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸಲು ಕಾಲಮಿತಿಯ ಕಾರ್ಯಯೋಜನೆ ರೂಪಿಸಿ ಪರಿಣಾಮಕಾರಿ ಕ್ರಮ ಕೈಗೊಳ್ಳುವುದು ಈಗಿನ ಅಗತ್ಯವಾಗಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC)...

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು...

ಶಿವಮೊಗ್ಗ | ಅಹಿಂದ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷರಾಗಿ ಸ್ಟೆಲ್ಲಾ ಮಾರ್ಟಿನ್ ನೇಮಕ

ಕರ್ನಾಟಕ ರಾಜ್ಯ ಒಕ್ಕೂಟ (ರಿ.), ಬೆಂಗಳೂರು, ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ...

ಸಿಜೆಪಿ ಪ್ರತಿಭಟನೆ-ಹೆದರಿದ ಮೋದಿ: ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿ- ಕೇಂದ್ರದ ವಿರುದ್ಧ ತರೂರ್ ಕಿಡಿ

ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಡಲಾಗಿರುವ ಭಾರಿ ಭದ್ರತಾ ವ್ಯವಸ್ಥೆ ಮತ್ತು...