ವಿಜಯಪುರ | ಜಂತುಹುಳು ಬಾಧೆಯಿಂದ ಅಪೌಷ್ಟಿಕತೆ, ರಕ್ತಹೀನತೆ ಅಪಾಯ: ಡಾ. ಸಂಪತ್ ಗುಣಾರಿ

Date:

ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ, ರಕ್ತಹೀನತೆ ಉಂಟಾಗುವ ಸಾಧ್ಯತೆ ಇದೆ. ಕರುಳಿನಲ್ಲಿರುವ ಜಂತುಹುಳುಗಳು ಮನುಷ್ಯನ ಆಹಾರ ಮತ್ತು ರಕ್ತದಲ್ಲಿನ ಪೌಷ್ಟಿಕಾಂಶವನ್ನು ಹೀರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ ಎಂದು ಅಪರ ನಿರ್ದೇಶಕರ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ, ಉತ್ತರ ಕರ್ನಾಟಕದ ಸಹಾಯಕ ನಿರ್ದೇಶಕ ಡಾ. ಸಂಪತ್ ಗುಣಾರಿ ಹೇಳಿದರು.

- Advertisement -

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಜಯಪುರ ನಗರದ ಅಲ್ ಹಸ್ಮಾತ್ ಉರ್ದು ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಗರದ ಹಬೀಬ್ ನಗರದಲ್ಲಿರುವ ಅಲ್ ಹಸ್ಮಾತ್ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಬರಿಗಾಲಿನಲ್ಲಿ ಹೊರಗಡೆ ಓಡಾಡುವುದು, ಬಯಲು ಶೌಚ, ಸ್ವಚ್ಛತೆಯ ಅಸಮರ್ಪಕ ನಿರ್ವಹಣೆ. ಅಶುದ್ಧ ನೀರು ಹಾಗೂ ಕಲುಷಿತ ಆಹಾರ ಸೇವನೆಯಿಂದ ಜಂತುಹುಳುಗಳು ದೇಹವನ್ನು ಪ್ರವೇಶಿಸುತ್ತವೆ. ಆದ್ದರಿಂದ ಮಕ್ಕಳು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಉತ್ತಮ ಆರೋಗ್ಯಕರ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಪ್ರತಿ ಆರು ತಿಂಗಳಿಗೊಮ್ಮೆ, ವರ್ಷದಲ್ಲಿ ಎರಡು ಬಾರಿ ದೇಶಾದ್ಯಂತ ಆಚರಿಸಲಾಗುತ್ತದೆ. 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣೆಗಾಗಿ ಅಲ್ಲೆಂಡಜೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುತ್ತದೆ. ಜಂತುಹುಳು ಬಾಧೆಯಿಂದ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕುಂಠಿತ ಉಂಟಾಗುವುದರಿಂದ ಮಕ್ಕಳ ಶಾಲಾ ಹಾಜರಾತಿಯ ಮೇಲೂ ಪರಿಣಾಮ ಬೀರುತ್ತದೆ ಎಂದರು.

ಮಕ್ಕಳು ಹಾಗೂ ಹದಿಹರೆಯದವರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿ ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಣಾ ಮಾತ್ರೆಯನ್ನು ಕಡ್ಡಾಯವಾಗಿ ಸೇವಿಸುವ ಮೂಲಕ ಜಂತುಹುಳು ಮುಕ್ತ ಮತ್ತು ಆರೋಗ್ಯವಂತ ಮಕ್ಕಳನ್ನಾಗಿ ರೂಪಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಲ್ ಹಸ್ನಾತ್ ಉರ್ದು ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಸ್. ಹರಿಯಾಲ ಮಾತನಾಡಿ, “ಜಂತುಹುಳು ಬಾಧೆಯಿಂದ ಉಂಟಾಗುವ ವಿವಿಧ ಲಕ್ಷಣಗಳು ಹಾಗೂ ದುಷ್ಪರಿಣಾಮಗಳ ಕುರಿತು ಮಕ್ಕಳಿಗೆ ಅರಿವು ಮೂಡಿಸಿದರು. ಪ್ರತಿವರ್ಷ ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳು ಜಂತುಹುಳು ಬಾಧೆಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ” ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಸೌಮ್ಯ ಶಿಂಧೆ, ಜೀಯಾ ಅವಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಚಲವಾದಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಹಾದೇವ ನಿಲಂಗಿ, ಆರ್‌ಕೆಎಸ್‌ಕೆ ಜಿಲ್ಲಾ ಸಂಯೋಜಕಿ ಸಾವಿತ್ರಿ ಹಿಪ್ಪರಗಿ, ಆರೋಗ್ಯ ಇಲಾಖೆ ಸಿಬ್ಬಂದಿ, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಉತ್ತರ ಕನ್ನಡ | ನಾಳೆ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ

ಉತ್ತರ ಕನ್ನಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್.26ರಂದು ಬೆಳಿಗ್ಗೆ 10.30ಕ್ಕೆ...

ಉಡುಪಿ | ಶಿಕ್ಷಣ, ಹೋರಾಟ, ಸಂಘಟನೆ ಸಮಾಜದ ಪ್ರಗತಿಗೆ ಮುಖ್ಯ: ಸಚಿವ ಶಿವರಾಜ ತಂಗಡಗಿ

ಮೊಗವೀರ ಸಮಾಜ ಶ್ರಮಜೀವಿಗಳ ಸಮಾಜ ವಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ...