ಭಾರೀ ಮಳೆ ಮತ್ತು ಬಿರುಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಗುರುನಾಥ್ ಬಡಿಗೇರ್(35), ಅವರ ಪತ್ನಿ ಜ್ಯೋತಿ ಬಡಿಗೇರ್(28) ಮತ್ತು ಅವರ ಪುತ್ರಿಯರಾದ ಕಾಳಮ್ಮ ಬಡಿಗೇರ್(13) ಮತ್ತು ಕೀರ್ತಿ ಬಡಿಗೇರ್(9) ಎಂದು ಗುರುತಿಸಲಾಗಿದೆ.
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆ, ಗಾಳಿಯಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮ್ಮ ಮನೆಯನ್ನು ದುರಸ್ತಿ ಮಾಡಿಸುತ್ತಿದ್ದ ಕಾರಣ ಗುರುನಾಥ ಬಡಿಗೇರ ಕುಟುಂಬ ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಗುರುವಾರ ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಈ ದುರಂತ ಸಂಭವಿಸಿದೆ.
VIDEO | Vijayapura, Karnataka: Four members of a family buried alive as the roof of their house collapse due to heavy rain and strong winds. Rescue operations underway. #KarnatakaNews
— Press Trust of India (@PTI_News) May 15, 2026
(Source: Third Party)
(Full video available on PTI Videos – https://t.co/n147TvrpG7) pic.twitter.com/Da7ZDFw2Sl
ಕುಟುಂಬದ ನಾಲ್ವರು ರಾತ್ರಿಯಲ್ಲಿ ನಿದ್ರಿಸುತ್ತಿದ್ದಾಗ ಮನೆಯ ಮೇಲ್ಛಾವಣಿ ಇದ್ದಕ್ಕಿದ್ದಂತೆ ಅವರ ಮೇಲೆ ಕುಸಿದು ಬಿದ್ದಿದೆ. ಬಳಿಕ ಅವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ? ಆಲಮಟ್ಟಿ | ಜೂನ್ ಅಂತ್ಯದವರೆಗೂ ನೀರಿಗೆ ಕೊರತೆ ಇಲ್ಲ: ಅಧಿಕಾರಿಗಳಿಂದ ಸ್ಪಷ್ಟನೆ
ಸ್ಥಳಕ್ಕೆ ಸಿಂಧಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಸ್ತುತ ಹೆಚ್ಚಿನ ತನಿಖೆ ನಡೆಯುತ್ತಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ನಾಲ್ವರ ಶವ ಹೊರ ತೆಗೆಯಲು ಮುಂದಾಗಿದ್ದಾರೆ.




