ವಿಜಯಪುರ | ಇಂದಿನಿಂದ ಸ್ಯಾಂಡಲ್ ಸೋಪ್ ಮೇಳ

Date:

ವಿಜಯಪುರ ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಇಂದಿನಿಂದ (ಜ.11) ಜನವರಿ 20ರವರೆಗೆ ಮೈಸೂರು ಸ್ಯಾಂಡಲ್ ಸೋಪ್ ಮೇಳ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಾಬೂನು ಮತ್ತು ಡಿಟರ್ಜೆಂಟ್ ನಿಗಮದ ಶಾಖಾ ವ್ಯವಸ್ಥಾಪಕಿ ಸುಷ್ಮಾ ಆರ್ ತಿಳಿಸಿದರು.

- Advertisement -

ವಿಜಯಪುರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದಿನಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 9:30 ರಿಂದ ರಾತ್ರಿ 9 ರವರೆಗೆ ಶ್ರೀಗಂಧ ಎಣ್ಣೆ, ಅಗರಬತ್ತಿ, ವಿವಿಧ ಬಗೆಯ ಸೋಪ್, ಸೌಂದರ್ಯ ವರ್ಧಕ, ಸ್ಯಾಂಡಲ್ ಧೂಪ್, ಹರ್ಬಲ್ ಹ್ಯಾಂಡ್ ವಾಷ್, ಬೇಬಿ ಸೋಪ್, ವಾಷಿಂಗ್ ಬಾರ್ ಸಾಬೂನು ಸೇರಿದಂತೆ 50ಕ್ಕೂ ಹೆಚ್ಚು ಉತ್ಕೃಷ್ಟ ದರ್ಜಿಯ ಉತ್ಪನ್ನಗಳನ್ನು ಶೇ 10 ರಿಂದ 15ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಸೋಪ್ ಮೇಳದಲ್ಲಿ ಮೈಸೂರು ಅರಮನೆಯ ದರ್ಬಾರ್ ಹಾಲ್ ಸೆಟ್ ವಿಶೇಷ ಆಕರ್ಷಣೆಯಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ನಿಗಮದ ಪ್ರಧಾನ ವ್ಯವಸ್ಥಾಪಕ ಎಂ ಗಂಗಪ್ಪ ಮಾತನಾಡಿ, ರಾಸಾಯನಿಕ ವಸ್ತುಗಳ ಬಳಕೆ ಇಲ್ಲ, ವಸ್ತುಗಳನ್ನು ಬಳಸುವ ಗ್ರಾಹಕರಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗದಂತೆ ನೈಸರ್ಗಿಕವಾಗಿ ಉತ್ಪಾದನೆ ಮಾಡಲಾಗುತ್ತದೆ. ಜೊತೆಗೆ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ ಎಂದರು.

ಮೈಸೂರು ಸ್ಯಾಂಡಲ್ ಸೋಪ್ ಹಾಗೂ ಇತರೆ ಉತ್ಪನ್ನಗಳಿಗೆ ಹಲವಾರು ಪ್ರಶಸ್ತಿ ಬಂದಿವೆ. ಬಾಗೋಳಿಕ ಮಾನ್ಯತೆ ಕೂಡ ಲಭಿಸಿದೆ. ಬಹುರಾಷ್ಟ್ರೀಯ ಸಂಸ್ಥೆಗಳ ತೀವ್ರ ಪೈಪೋಟಿಯ ನಡುವೆಯೂ ಸಂಸ್ಥೆಯು ಹೆಚ್ಚಿನ ವಹಿವಾಟನ್ನು ಹೊಂದಿದ್ದು, ವರ್ಷದಿಂದ ವರ್ಷಕ್ಕೆ ಪ್ರಗತಿಯತ್ತ ಸಾಗುತ್ತಿದೆ. ಸಂಸ್ಥೆಯ ಉತ್ಪನ್ನಗಳನ್ನು 25 ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ.

ಇದನ್ನೂ ಓದಿ: ವಿಜಯಪುರ | ವಿಜಯ ಪತಾಕೆ ಹಾರಿಸಿದ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ

2023-24ನೇ ಸಾಲಿನಲ್ಲಿ ₹1571 ಕೋಟಿ ವಹಿವಾಟು ನಡೆಸಿ ಅಂದಾಜು 362 ಕೋಟಿ ದಾಖಲೆ ಲಾಭಗಳಿಸಿದೆ. 2024-25ರಲ್ಲಿ ₹1787 ಕೋಟಿ, ಶೇ 14ರಷ್ಟು ಪ್ರಗತಿಯೊಂದಿಗೆ 451 ಕೋಟಿ ಲಾಭಗಳಿಸಿದೆ. 2025-26 ರಲ್ಲಿ ಡಿಸೆಂಬರ್ ವರೆಗೆ 1484 ಕೋಟಿ ವಹಿವಾಟು ನಡೆಸಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬರ ಘೋಷಣೆ ಮಾಡದ್ದಕ್ಕೆ ಅಸಮಾಧಾನ: ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ...

ಆಲಮಟ್ಟಿ 3ನೇ ಹಂತಕ್ಕೆ ವೇಗ ನೀಡಲು ಅವಳಿ ಜಿಲ್ಲೆಗಳ ಹೋರಾಟಗಾರರ ರಣತಂತ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...